ಶಿವಮೊಗ್ಗ : ಕಾಂಗ್ರೆಸ್ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಇವನಿಗೆ ಯೋಜನೆಗೆ ಇಂದು ಶಿವಮೊಗ್ಗ ಜಿಲ್ಲೆಯಲ್ಲಿ ಅಧಿಕೃತವಾಗಿ ಚಾಲನೆ ನೀಡಲಾಗುತ್ತಿದೆ . ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ಸಚಿವರು ಭಾಗಿಯಾಗಲಿದ್ದಾರೆ.
ಈ ಕುರಿತಂತೆ ಕೌಶಲ್ಯ ಅಭಿವೃದ್ಧಿ ಸಚಿವ ಶರಣಪ್ರಕಾಶ್ ಪಾಟೀಲ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ನಾವು ನುಡಿದಂತೆ ನಡೆಯುತ್ತಿರುವುದಕ್ಕೆ ಬಿಜೆಪಿಗೆ ಹೊಟ್ಟೆಕಿಚ್ಚು. ಯುವನಿಧಿ ಯೋಜನೆ ನೂರಕ್ಕೆ ನೂರರಷ್ಟು ಯಶಸ್ವಿಯಾಗಲಿದೆ ಎಂದು ಅವರು ತಿಳಿಸಿದರು.
ರಾಜ್ಯದ ಯುವಜನರ ಹಿತಕ್ಕಾಗಿ ಈ ಯೋಜನೆಯನ್ನು ಹಮ್ಮಿಕೊಂಡಿದ್ದೇವೆ.ಬಿಜೆಪಿ ಅಧಿಕಾರದಲ್ಲಿದ್ದಾಗ ಅಕ್ರಮ ಭ್ರಷ್ಟಾಚಾರದಲ್ಲಿ ಮುಳುಗಿದ್ದರು. ನಿರುದ್ಯೋಗ ದೇಶದ ಬಹುದೊಡ್ಡ ಸಮಸ್ಯೆ ಮೋದಿ ಸರ್ಕಾರ ನಿರುದ್ಯೋಗ ನಿವಾರಣೆಗೆ ಸೂಕ್ತ ಕ್ರಮ ಕೈಗೊಂಡಿಲ್ಲ ನಿರುದ್ಯೋಗ ನಿವಾರಣೆಗೆ ನಮ್ಮ ಸರ್ಕಾರ ಕ್ರಮ ಕೈಗೊಂಡಿದೆ ನಿರುದ್ಯೋಗಿ ಬತ್ತೆ ಜೊತೆಗೆ ನಾವು ತರಬೇತಿಯನ್ನು ಕೂಡ ನೀಡುತ್ತೇವೆ ಕಲಿಕೆಯ ಜೊತೆಗೆ ಕೌಶಲ್ಯ ತರಬೇತಿ ನೀಡಲು ಕ್ರಮ ಕೈಗೊಳ್ಳಲಾಗಿದೆ