ಬಿಜೆಪಿ ತನ್ನ ಭದ್ರಕೋಟೆಯಲ್ಲೂ ಗೆದ್ದೇ ಗೆಲ್ಲುತ್ತೇವೆ ಎಂದು ಹೇಳಿಕೊಳ್ಳುವ ವಿಶ್ವಾಸದಲ್ಲಿ‌ ಇಲ್ಲ – ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯದಲ್ಲಿ ನಡೆದ ಮೊದಲ ಹಂತದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾದ ವಾತಾವರಣ ಕಂಡುಬಂದಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಬೆಂಗಳೂರಿನ ಆರ್.ಟಿ ನಗರದ ಬೋಸ್ಟನ್ ಸ್ಕೂಲ್ ನಲ್ಲಿ ಇಂದು ಕುಟುಂಬ ಸಮೇತರಾಗಿ ಆಗಮಿಸಿ ಮತ ಚಲಾಯಿಸಿದ ಸಚಿವರು, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಬಿಜೆಪಿ ತನ್ನ ಭದ್ರಕೋಟೆಯಲ್ಲೂ ನಿಶ್ಚಿತವಾಗಿ ಗೆಲ್ಲುತ್ತೇವೆ ಎಂಬ ವಿಶ್ವಾಸವನ್ನ ಕಳೆದುಕೊಂಡಿದೆ. ಕರಾವಳಿ‌ ಭಾಗದಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ತೀವ್ರ ಪೈಪೋಟಿ ನೀಡಿದ್ದಾರೆ. ದಕ್ಷಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಕಷ್ಟ ಎಂಬ ಪರಿಸ್ಥಿತಿಯಿತ್ತು. … Continue reading ಬಿಜೆಪಿ ತನ್ನ ಭದ್ರಕೋಟೆಯಲ್ಲೂ ಗೆದ್ದೇ ಗೆಲ್ಲುತ್ತೇವೆ ಎಂದು ಹೇಳಿಕೊಳ್ಳುವ ವಿಶ್ವಾಸದಲ್ಲಿ‌ ಇಲ್ಲ – ಸಚಿವ ದಿನೇಶ್ ಗುಂಡೂರಾವ್