ಬೆಂಗಳೂರು: ನಾವು ಕೆಂಪೇಗೌಡರ ಹೆಸರಿನಲ್ಲಿ ರಾಜಕೀಯ ಮಾಡಲು ಹೊರಟಿಲ್ಲ. ಯಾವುದೇ ಗೌರವಕ್ಕೆ ಚ್ಯುತಿ ಬಾರದಂತೆ ಕೆಂಪೇಗೌಡರ ಪ್ರಗತಿಯ ಪ್ರತಿಮೆಯನ್ನು ಅನಾವರಣ ಮಾಡಲಾಗಿದೆ ಎಂಬುದಾಗಿ ಕೆಂಪೇಗೌಡ ಪ್ರತಿಷ್ಠಾನದ ಉಪಾಧ್ಯಕ್ಷ ಹಾಗೂ ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ ( Minister Dr CN Ashwathnarayana ) ಹೇಳಿದ್ದಾರೆ.
ಮೈಸೂರಿನಲ್ಲಿ ಟಿಪ್ಪು ಸುಲ್ತಾನ್ ನೂರು ಅಡಿ ಪ್ರತಿಮೆ ಮಾಡೋದು ಫಿಕ್ಸ್ : ಶಾಸಕ ತನ್ವಿರ್ ಸೇಠ್ ಸ್ಪಷ್ಟನೆ
ನಗರದಲ್ಲಿ ಇಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರಿಗೆ ಪ್ರಗತಿಯ ಪ್ರತಿಮೆ ಕೆಂಪೇಗೌಡರ ಕಂಚಿನ ಮೂರ್ತಿಯ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ ಎನ್ನುವ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಸಿಎಂ ಬೊಮ್ಮಾಯಿಯವರು ಈಗಾಗಲೇ ಸ್ಪಷ್ಟ ಪಡಿಸಿದ್ದಾರೆ ಎಂದರು.
BIG NEWS: ಆಸ್ಟ್ರೇಲಿಯಾದ ಮೆಜೆಸ್ಟಿಕ್ ಪ್ರಿನ್ಸೆಸ್ ಕ್ರೂಸ್ ಶಿಪ್ನಲ್ಲಿ 800 ಪ್ರಯಾಣಿಕರಿಗೆ ಕೋವಿಡ್ ಪಾಸಿಟಿವ್
ಪ್ರಗತಿಯ ಪ್ರತಿಮೆಯನ್ನು ಯಾವುದೇ ಗೌರವಕ್ಕೆ ಚ್ಯುತಿ ಬಾರದಂತೆ ಅನಾವರಣ ಮಾಡಲಾಗಿದೆ. ಈ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಆಹ್ವಾನ ಪತ್ರಿಕೆ ಮಾಡಿಲ್ಲ. ಸಿಎಂ ಬಸವರಾಜ ಬೊಮ್ಮಾಯಿಯವರೇ ಸ್ವತಹ ದೂರವಾಣಿ ಮೂಲಕ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರ ಜೊತೆಗೆ ಮಾತನಾಡಿದ್ದಾರೆ ಎಂದು ಹೇಳಿದರು.
ಲಘು, ಭಾರಿ ವಾಹನ ತರಬೇತಿ ನಿರೀಕ್ಷೆಯಲ್ಲಿದ್ದವರ ಗಮನಕ್ಕೆ: BMTCಯಿಂದ ಉಚಿತ ತರಬೇತಿಗೆ ಅರ್ಜಿ ಆಹ್ವಾನ
ಕೆಂಪೇಗೌಡ ಪ್ರತಿಮೆಯ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಲು ಹೊರಟಿಲ್ಲ. ಕೆಂಪೇಗೌಡರು ಯಾವುದೇ ಒಂದು ಸಮುದಾಯಕ್ಕೆ ಸಮೀಮಿತವಲ್ಲ ಎಂಬುದಾಗಿ ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ ಹೇಳಿದರು.