ಬೆಂಗಳೂರು: ಕೊಲೆ ಪ್ರಕರಣವೊಂದರಲ್ಲಿ ಆರೋಪಿಯಾಗಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ ತಲೆ ಮರೆಸಿಕೊಂಡಿದ್ದು, ಸದ್ಯ ಸಿಐಡಿ ಅಧಿಕಾರಿಗಳು ರಾಜ್ಯ ಹಾಗೂ ಹೊರರಾಜ್ಯಗಳಲ್ಲಿ ಕಾರ್ಯಾಚರಣೆ ತೀವ್ರಗೊಳಿಸಿದ್ದು, ವಿದೇಶಕ್ಕೆ ಪರಾರಿಯಾಗುವ ಶಂಕೆ ಹಿನ್ನೆಲೆಯಲ್ಲಿ ಲುಕ್‌ಔಟ್ ನೋಟಿಸ್ ಜಾರಿ ಮಾಡಲಾಗಿದೆ ಎನ್ನಲಾಗಿದೆ.
ಬಿಕ್ಲು ಶಿವನ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದು, ಹೈಕೋರ್ಟ್ ಮತ್ತು ಸೆಷನ್ಸ್ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಲು ಮುಂದಾಗದ ಹಿನ್ನಲೆಯಲ್ಲಿ ತಲೆ ಮರೆಸಿಕೊಂಡಿದ್ದಾರೆ ಎನ್ನಲಾಗಿದೆ.ಜು.15 ರಂದು ನಡೆಯುವ ಕೊಲೆ ಪ್ರಕರಣದಲ್ಲಿ 5ನೇ ಆರೋಪಿಯಾಗಿ ಶಾಸಕ ಬೈರತಿ ಬಸವರಾಜ್ ಗುರುತಿಸಿಕೊಂಡಿದ್ದಾರೆ. ಇದಲ್ಲದೇ ಪ್ರಕರಣ ಸಂಬಂಧಪಟ್ಟಂತೆ ಈಗಾಗಲೇ 16 ಜನರ ಬಂಧನವಾಗಿದೆ. ಯಾವುದೇ ಕ್ಷಣದಲ್ಲಿ ಶಾಸಕರನ್ನು ಬಂಧಿಸುವ ಸಾಧ್ಯತೆ ಇದೆ. ಜು.15ರಂದು ಹಲಸೂರಿನಲ್ಲಿ ಬೆಂಗಳೂರು ಪೂರ್ವ ತಾಲೂಕಿನ ಬಿದರಹಳ್ಳಿ ಹೋಬಳಿ ಕಿತ್ತಗನೂರಿನ ಸರ್ವೇ ನಂ.212ರ ಭೂಮಿಗೆ ಸಂಬಂಧಿಸಿದಂತೆ ರೌಡಿ ಬಿಕ್ಲು ಶಿವನನ್ನು ಕೊಲೆ ಮಾಡಲಾಗಿತ್ತು.








