ಬೆಂಗಳೂರು: ಈ ಸರಕಾರ ಜನರ ವಿಶ್ವಾಸ ಕಳೆದುಕೊಂಡಿದೆ ಎಂದು ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ, ಬಿಜೆಪಿ ಮತ್ತು ಜೆಡಿಎಸ್ ಆಹ್ವಾನಿತ ಪ್ರಮುಖರ ಉಪಸ್ಥಿತಿಯಲ್ಲಿ ನಗರದ ರ್ಯಾಡಿಸನ್ ಬ್ಲೂ ಹೋಟೆಲ್‍ನಲ್ಲಿ ಇಂದು ನಡೆದ ಬಿಜೆಪಿ ಮತ್ತು ಜೆಡಿಎಸ್ ಸಮನ್ವಯ ಸಭೆಯಲ್ಲಿ ಮಾತನಾಡಿದ ಅವರು, ಸರಕಾರದ ಖಜಾನೆ ಖಾಲಿಯಾಗಿದ್ದು, ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ. ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರದ 6 ಸಾವಿರ ಜೊತೆಗೆ ನಾನು ಮುಖ್ಯಮಂತ್ರಿ ಆಗಿದ್ದಾಗ 4 ಸಾವಿರ ಹೆಚ್ಚುವರಿಯಾಗಿ ಕೊಡುತ್ತಿದ್ದೆ. ಆ 4 ಸಾವಿರ ನಿಂತು ಹೋಗಿದೆ ಎಂದು ಟೀಕಿಸಿದರು. ಸರಕಾರ ದಿವಾಳಿ ಆಗಿರುವುದಕ್ಕೆ ಬೇರೆ ಉದಾಹರಣೆ ಬೇಕೇ ಎಂದು ಪ್ರಶ್ನಿಸಿದರು.

ಬಿಜೆಪಿ- ಜೆಡಿಎಸ್ ಬೇರೆ ಅಲ್ಲ. ನಾವೆಲ್ಲ ಒಂದೇ ತಾಯಿ ಮಕ್ಕಳಂತೆ. ಬಿಜೆಪಿ- ಜೆಡಿಎಸ್ ಅಭ್ಯರ್ಥಿ ಯಾರೇ ಇರಲಿ; ಅವರನ್ನು ಗೆಲ್ಲಿಸಲು ಪ್ರಾಮಾಣಿಕವಾಗಿ ಪಣ ತೊಡಿ. ಆಗ ರಾಜ್ಯದ ಎಲ್ಲ ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲುವ ನಮ್ಮ ಪ್ರಯತ್ನವನ್ನು ತಡೆಯಲು ಯಾರಿಂದಲೂ ಅಸಾಧ್ಯ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ದೇಶ- ವಿದೇಶಗಳಲ್ಲಿ ನಿರಂತರ ಪ್ರವಾಸ ಮಾಡುತ್ತಿರುವ, ಒಂದು ದಿನ ರಜೆ ಪಡೆಯದೆ ದೇಶದ ಅಭಿವೃದ್ಧಿಗೆ ಶ್ರಮಿಸುವÀ ಮಾನ್ಯ ಪ್ರಧಾನಿ ನರೇಂದ್ರ ಮೋದಿ ಜೀ ಮತ್ತು ಈ ಹರೆಯದಲ್ಲೂ ಅತ್ಯಂತ ಉತ್ಸಾಹದಿಂದ ರಾಜ್ಯ ಪ್ರವಾಸ ಮಾಡಲು ಸಿದ್ಧರಾಗಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ನಮ್ಮೆಲ್ಲರಿಗೂ ಆದರ್ಶಪ್ರಾಯರು ಎಂದರಲ್ಲದೆ, ಕಾಯಾ, ವಾಚಾ, ಮನಸಾ ಕೆಲಸ ಮಾಡಿ 28ಕ್ಕೆ 28 ಕ್ಷೇತ್ರ ಗೆಲ್ಲೋಣ ಎಂದು ಮನವಿ ಮಾಡಿದರು.

BIG NEWS : ‘PSI’ ಹುದ್ದೆಗಳ ನೇಮಕಾತಿಯ ಮರುಪರೀಕ್ಷೆ : ಅಂತಿಮ ಅಂಕಪಟ್ಟಿ ಪ್ರಕಟ

BIG NEWS : ಅಶ್ಲೀಲ ಪದಗಳಿಂದ ಸಚಿವ ಶಿವರಾಜ್ ತಂಗಡಗಿಗೆ ನಿಂದನೆ ಆರೋಪ : ಸಿಟಿ ರವಿ ವಿರುದ್ಧ ದೂರು ದಾಖಲು

Share.
Exit mobile version