ಹಾಸನ : ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ಬಿಜೆಪಿ-ಜೆಡಿಎಸ್ ಷಡ್ಯಂತ್ರ ನಡೆಸಿವೆ ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ಆರೋಪ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ಬಿಜೆಪಿ-ಜೆಡಿಎಸ್ ಷಡ್ಯಂತ್ರ ನಡೆಸಿದ್ದಾರೆ. ನಾವು ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಇನ್ನೂ ಹೆಚ್ಚಿನ ಹಣ ಬಡವರಿಗೆ ನೀಡುತ್ತೇವೆ ಎಂದರು.
ರಾಜ್ಯಪಾಲರ ಮೂಲಕ ಸರ್ಕಾರವನ್ನು ಅಭದ್ರಗೊಳಿಸಲು ಹೊರಟಿದ್ದಾರೆ. ಯಾವುದೇ ಕಾರಣಕ್ಕೂ ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ಆಗಲ್ಲ. ಕೇಂದ್ರ ಸರ್ಕಾರ ಕೂಡಲೇ ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.