ಪಿರಿಯಾಪಟ್ಟಣ : “ಬಿಜೆಪಿ ಹಾಗೂ ಜೆಡಿಎಸ್ ಪಕ್ಷಕ್ಕೆ ನಾಯಕತ್ವ ಹಾಗೂ ಆತ್ಮವಿಶ್ವಾಸದ ಕೊರತೆ ಇದೆ. ಹೀಗಾಗಿ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದು, ಈಗ ಜಗದೀಶ್ ಶೆಟ್ಟರ್ ಅವರನ್ನು ವಾಪಸ್ ಸೆಳೆಯಲು ಬೆನ್ನು ಬಿದ್ದಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಮೈಸೂರು ಪಿರಿಯಾಪಟ್ಟಣ ಬೈಲುಕುಪ್ಪೆ ಹೆಲಿಪ್ಯಾಡ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯಿಸಿದರು.
ಬಿಜೆಪಿ ನಾಯಕರು ಜಗದೀಶ್ ಶೆಟ್ಟರ್ ಅವರನ್ನು ಬಿಜೆಪಿಗೆ ವಾಪಸ್ ಕರೆತರುವ ಪ್ರಯತ್ನ ಮಾಡುತ್ತಿರುವ ಬಗ್ಗೆ ಮಾಧ್ಯಮಗಳು ಕೇಳಿದಾಗ ಉತ್ತರಿಸಿದ ಅವರು, “ಕಾಂಗ್ರೆಸ್ ಪಕ್ಷಕ್ಕೆ ಸೇರಿರುವ ಜಗದೀಶ್ ಶೆಟ್ಟರ್ ಅವರನ್ನು ತಮ್ಮ ಪಕ್ಷಕ್ಕೆ ವಾಪಸ್ ಕರೆದೊಯ್ಯಲು ಬಿಜೆಪಿಯ ಅನೇಕ ನಾಯಕರು ಶೆಟ್ಟರ್ ಅವರಿಗೆ ದುಂಬಾಲು ಬೀಳುತ್ತಿದ್ದಾರೆ. ಅವರ ಪಕ್ಷ ಎಷ್ಟು ದುರ್ಬಲವಾಗಿದೆ ಎಂಬುದಕ್ಕೆ ಇದಕ್ಕಿಂತ ದೊಡ್ಡ ಸಾಕ್ಷಿ ಬೇಕಾ? ಅವರ ಬಳಿ ಅಭ್ಯರ್ಥಿಗಳಿಲ್ಲವೇ? ಅವರ ಪಕ್ಷ ಸಮರ್ಥವಾಗಿದ್ದರೆ ಚುನಾವಣೆ ಎದುರಿಸಲಿ ಎಂದರು.
ನಾವು ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದೆವು. ಆದರೆ ಕುಮಾರಸ್ವಾಮಿ ಅವರು ತಮ್ಮ ಸರ್ಕಾರವನ್ನು ಕೆಡವಿ, ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಿದವರನ್ನು ಈಗ ತಬ್ಬಿಕೊಂಡು ರಾಜಕಾರಣ ಮಾಡುತ್ತಿರುವುದನ್ನು ನಾವೆಲ್ಲರೂ ನೋಡುತ್ತಿದ್ದೇವೆ. ಇದು ಎರಡೂ ಪಕ್ಷಗಳಲ್ಲಿನ ದುಸ್ಥಿತಿಗೆ ಸಾಕ್ಷಿ ಎಂದು ಹೇಳಿದರು.
BREAKING : ಇಂಡಿಯಾ ಮೈತ್ರಿಕೂಟಕ್ಕೆ ಬಿಗ್ ಶಾಕ್ : ಪಂಜಾಬ್’ನಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಇಲ್ಲ ಎಂದು ‘AAP’ ಘೋಷಣೆ