ಬೆಂಗಳೂರು: ಇಂದು ಸಿಎಂ ಸಿದ್ಧರಾಮಯ್ಯ ಅವರು ರಾಜ್ಯ ಬಜೆಟ್ 2025-26 ಮಂಡಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಬಿಜೆಪಿ-ಜೆಡಿಎಸ್ ಪಕ್ಷಗಳ ಪ್ರತಿಭಟನೆಯು ನಾಳೆ 7-3-2025 ರ ಬೆಳಿಗ್ಗೆ 09.30 ಗಂಟೆಗೆ ಬೆಂಗಳೂರಿನ ವಿಧಾನ ಸೌಧದ ಗಾಂಧಿ ಪ್ರತಿಮೆ ಬಳಿ ನಡೆಸಲಿದೆ.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಶಾಸಕರಾದ ಬಿ.ವೈ. ವಿಜಯೇಂದ್ರ , ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಸುರೇಶ್ ಬಾಬು, ಜೆಡಿಎಸ್ ವಿಧಾನ ಪರಿಷತ್ತಿನ ನಾಯಕರಾದ ಬೋಜೆಗೌಡ ಮತ್ತು ಬಿಜೆಪಿ-ಜೆಡಿಎಸ್‍ನ ಶಾಸಕರುಗಳು ಹಾಗೂ ವಿಧಾನ ಪರಿಷತ್ತಿನ ಸದಸ್ಯರುಗಳು ಭಾಗವಹಿಸಲಿದ್ದಾರೆ.
ಇಂದು ಬೆಳಗ್ಗೆ 9:30 ಕ್ಕೆ ವಿಧಾನಸೌಧ ಗಾಂಧಿ ಪ್ರತಿಮೆ ಎದುರು ಮೈತ್ರಿ ನಾಯಕರು ಪ್ರತಿಭಟನೆ ನಡೆಸಲಿದ್ದಾರೆ. ಎಸ್‌ಸಿಎಸ್ಪಿ-ಟಿಎಸ್ಪಿ ಹಣ ಗ್ಯಾರಂಟಿಗಳಿಗೆ ಬಳಸಬಾರದು, ಶಾಸಕರ ಕ್ಷೇತ್ರಗಳಿಗೆ ತಲಾ 150 ಕೋಟಿ ಅನುದಾನ ಕೊಡಬೇಕು ಎಂದು ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ಗಲಭೆ ಸೃಷ್ಟಿಸಿದರೇ ಸ್ವಯಂಪ್ರೇರಿತ ಕೇಸ್ ದಾಖಲು: ಗೃಹ ಸಚಿವ ಡಾ.ಜಿ ಪರಮೇಶ್ವರ್ ಎಚ್ಚರಿಕೆ