ನವದೆಹಲಿ: ಮುಂಬರುವಂತ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿಯೊಂದಿಗೆ ಕಣಕ್ಕೆ ಇಳಿಯಲಿದ್ದಾವೆ. ಈ ಮೈತ್ರಿ ಕೂಟವು ಚುನಾವಣೆಯಲ್ಲಿ ಭರ್ಜರಿ ಜಯಭೇರಿಯನ್ನು ಸಾಧಿಸಲಿದೆ. ಕಾಂಗ್ರೆಸ್ ಕೇವಲ 4 ಸ್ಥಾನಗಳನ್ನು ಗೆಲ್ಲಲಿದೆ ಎಂಬುದಾಗಿ ಇಂಡಿಯಾ ಟಿವಿ-ಸಿಎನ್ಎಕ್ಸ್ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ತಿಳಿಸಿದೆ.
2024 ರ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) 22 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ. ಅದರ ಮಿತ್ರ ಪಕ್ಷ ಜೆಡಿಎಸ್ 2 ಸ್ಥಾನಗಳನ್ನು ಗೆಲ್ಲಬಹುದು ಎಂದು ಇಂಡಿಯಾ ಟಿವಿ-ಸಿಎನ್ಎಕ್ಸ್ ಒಪಿನಿಯನ್ ಪೋಲ್ ಸೋಮವಾರ (ಮಾರ್ಚ್ 4) ಭವಿಷ್ಯ ನುಡಿದಿದೆ.
2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 25 ಸ್ಥಾನಗಳನ್ನು ಗೆದ್ದಿತ್ತು. ಈ ಬಾರಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸುತ್ತಿದೆ. ರಾಜ್ಯದಲ್ಲಿ ಅಧಿಕಾರದಲ್ಲಿರುವ ಮತ್ತು ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ್ದ ಕಾಂಗ್ರೆಸ್ ಕೇವಲ ನಾಲ್ಕು ಸ್ಥಾನಗಳನ್ನು ಗೆಲ್ಲಲಿದೆ ಎಂದು ಅಂದಾಜಿಸಲಾಗಿದೆ.
ಎನ್ಡಿಎ ಒಟ್ಟು 24 ಸ್ಥಾನಗಳನ್ನು ಗೆಲ್ಲಬಹುದು. ಕಾಂಗ್ರೆಸ್ 4 ಸ್ಥಾನಗಳನ್ನು ಗೆಲ್ಲಲಿದೆ ಎಂದು ಅಂದಾಜಿಸಲಾಗಿದೆ.
2023 ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿ ರಾಜ್ಯದಲ್ಲಿ ಬಹುಮತದ ಸರ್ಕಾರವನ್ನು ರಚಿಸಿತ್ತು, ಆದಾಗ್ಯೂ, ಲೋಕಸಭಾ ಸ್ಪರ್ಧೆಯಲ್ಲಿ ಪಕ್ಷವು ಹಿಂದುಳಿದಿದೆ ಎಂದು ಸಮೀಕ್ಷಾ ವರದಿಯಲ್ಲಿ ತಿಳಿಸಿದೆ.
ಕರ್ನಾಟಕ ಲೋಕಸಭಾ ಚುನಾವಣೆ 2019
ಒಟ್ಟು ಸ್ಥಾನಗಳು: 28
ಬಿಜೆಪಿ: 25
ಕಾಂಗ್ರೆಸ್: 01
ಜೆಡಿಎಸ್: 01
ಪಕ್ಷೇತರ: 01
ಕರ್ನಾಟಕ ಲೋಕಸಭಾ ಚುನಾವಣೆ 2014
ಬಿಜೆಪಿ: 17
ಕಾಂಗ್ರೆಸ್: 09
ಜೆಡಿಎಸ್: 02
Good News: ‘ಸಕಾಲ’ದಡಿ ಅರ್ಜಿ ಸ್ವೀಕೃತಿಯಿಂದ ‘ಸೇವೆ’ಯವರೆಗೆ ಎಲ್ಲವೂ ‘ಡಿಜಿಟಲೀಕರಣ’ಗೊಳಿಸಿ- ಸಚಿವ ಕೃಷ್ಣ ಬೈರೇಗೌಡ