Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಮಂಡ್ಯದಲ್ಲಿ ಕಾರು-ಬಸ್ ಮುಖಾಮುಖಿ ಡಿಕ್ಕಿ; ಸ್ಥಳದಲ್ಲೇ ಖ್ಯಾತ ವಕೀಲ, ಹೋರಾಟಗಾರ ಕಣಿವೆ ಯೋಗೇಶ್ ಸಾವು

BREAKING: ವಿನೇಶ್ ಫೋಗಟ್‌ಗೆ ಬಿಗ್ ಶಾಕ್: ಏಷ್ಯನ್ ಗೇಮ್ಸ್ ಕನಸು ಭಗ್ನ! ಮಧ್ಯಂತರ ಪರಿಹಾರ ನೀಡಲು ದೆಹಲಿ ಹೈಕೋರ್ಟ್ ನಿರಾಕರಣೆ!

ಒಂದೂ ಕ್ಲಾಸ್‌ಗೆ ಹಾಜರಾಗದ ಕಾನೂನು ವಿದ್ಯಾರ್ಥಿಗಳಿಗೆ ಅಟೆಂಡೆನ್ಸ್ ಸಡಿಲಿಕೆ ಇಲ್ಲ: ಹೈಕೋರ್ಟ್ ಮಹತ್ವದ ತೀರ್ಪು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮುಸ್ಲಿಮರಿಗೆ ಮೀಸಲಾತಿ ವಿರುದ್ಧ ಬಿಜೆಪಿ- ಜೆಡಿಎಸ್ ಜನಾಂದೋಲನ: ಬಿವೈ ವಿಜಯೇಂದ್ರ
KARNATAKA

ಮುಸ್ಲಿಮರಿಗೆ ಮೀಸಲಾತಿ ವಿರುದ್ಧ ಬಿಜೆಪಿ- ಜೆಡಿಎಸ್ ಜನಾಂದೋಲನ: ಬಿವೈ ವಿಜಯೇಂದ್ರ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಹನಿಟ್ರ್ಯಾಪ್ ಕುರಿತಂತೆ ಹೈಕೋರ್ಟಿನ ಈಗಿನ ನ್ಯಾಯಮೂರ್ತಿಗಳು ಅಥವಾ ಸಿಬಿಐ ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಸಚಿವರಾದ ರಾಜಣ್ಣ ಅವರು ರಾಜ್ಯ ಹಾಗೂ ದೇಶದ 48ಕ್ಕೂ ಹೆಚ್ಚು ಪ್ರಮುಖರು ಹನಿಟ್ರ್ಯಾಪ್‍ಗೆ ಒಳಗಾದ ಕುರಿತು ತಿಳಿಸಿ ತನಿಖೆ ಆಗಬೇಕೆಂದು ಹೇಳಿಕೆ ಕೊಟ್ಟಿದ್ದಾರೆ. ಇದು ಬಹಳ ಗಂಭೀರ ವಿಚಾರ ಎಂದು ತಿಳಿಸಿದ ಗೃಹ ಸಚಿವರು, ಇದರ ಬಗ್ಗೆ ತನಿಖೆ ಮಾಡಿಸುವುದಾಗಿ ಹೇಳಿದ್ದರು. ಸದನ ಮುಗಿದ ಬಳಿಕ ಹೊರಕ್ಕೆ ಬಂದ ಗೃಹ ಸಚಿವರು, ತಮಗೆ ಅಧಿಕೃತವಾಗಿ ಯಾವುದೇ ಅಧಿಕಾರಿಗಳು ಮಾಹಿತಿ ನೀಡಿಲ್ಲ ಎಂದಿದ್ದಾರೆ ಎಂದು ವಿವರಿಸಿದರು.

ಅಧಿಕಾರಿಗಳು ಮಾಹಿತಿ ಕೊಟ್ಟ ಮೇಲೆ ಅದರ ಕುರಿತು ಆಲೋಚಿಸುವುದಾಗಿ ತಿಳಿಸಿ ದ್ವಂದ್ವ ನೀತಿ ಪ್ರದರ್ಶನ ಮಾಡಿದ್ದಾರೆ. ನಾವು ಸದನದಲ್ಲಿ ಮುಖ್ಯಮಂತ್ರಿಗಳಿಂದ ಉತ್ತರ ಪಡೆಯುವ ಪ್ರಯತ್ನ ಮಾಡಿದ್ದೇವೆ. ಅವರು ಯಾವುದೇ ರೀತಿ ಸರಿಯಾದ ಉತ್ತರ ಕೊಟ್ಟಿಲ್ಲ ಎಂದು ಟೀಕಿಸಿದರು.

ಇದೊಂದು ಗಂಭೀರ ಪ್ರಕರಣ. ಇದು ಸದನದ 224 ಶಾಸಕರ, ರಾಜ್ಯದ ಗೌರವದ ಪ್ರಶ್ನೆ. ಬಿಜೆಪಿ ಹಾಗೂ ಜೆಡಿಎಸ್ ಒಟ್ಟಾಗಿ ಪ್ರತಿಭಟಿಸುವುದಾಗಿ ತಿಳಿಸಿದರು.

ರಾಜ್ಯದಲ್ಲಿ ಅಲ್ಪಸಂಖ್ಯಾತರಿಗೆ ಸರಕಾರಿ ಕಾಮಗಾರಿಗಳಲ್ಲಿ ಶೇ 4 ಮೀಸಲಾತಿ ನೀಡಿದ ಬಗ್ಗೆ ಮುಖ್ಯಮಂತ್ರಿಗಳು ಹೇಳಿಕೆ ಕೊಟ್ಟಿದ್ದಾರೆ. ಇದರ ವಿರುದ್ಧ ನಾವು ರಾಜ್ಯಾದ್ಯಂತ ಜನಾಂದೋಲನಕ್ಕೆ ಕರೆ ಕೊಡಲಿದ್ದೇವೆ ಎಂದು ಪ್ರಕಟಿಸಿದರು. ಬಿಜೆಪಿ- ಜೆಡಿಎಸ್ ಪಕ್ಷಗಳು ಮುಸಲ್ಮಾನರ ವಿರೋಧಿ ಅಲ್ಲ; ಆದರೆ, ಹಿಂದೂಗಳಿಗೆ ಅಪಮಾನ ಮಾಡುವ ರೀತಿಯಲ್ಲಿ ಹಣಕಾಸಿನ ಸಚಿವರಾದ ಮುಖ್ಯಮಂತ್ರಿಗಳು ನಡೆದುಕೊಳ್ಳುತ್ತಿದ್ದಾರೆ. ಇದನ್ನು ನಾವು ಧಿಕ್ಕರಿಸುತ್ತಿದ್ದೇವೆ ಎಂದು ತಿಳಿಸಿದರು.

ವಿದೇಶಕ್ಕೆ ವಿದ್ಯಾಭ್ಯಾಸಕ್ಕೆ ಹೋಗುವ ಮುಸಲ್ಮಾನರಿಗೆ ಕೊಡುವ ಮೊತ್ತವನ್ನು 20 ಲಕ್ಷದಿಂದ 30 ಲಕ್ಷಕ್ಕೆ ಏರಿಸಿದ್ದಾರೆ. ಹಿಂದೂಗಳಲ್ಲಿ ಬಡವರಿಲ್ಲವೇ? ಅವರು ಹೊರದೇಶಕ್ಕೆ ವಿದ್ಯಾಭ್ಯಾಸಕ್ಕೆ ಹೋದರೆ ಅವರಿಗೆ ಹಣಕಾಸಿನ ಅವಶ್ಯಕತೆ ಇಲ್ಲವೇ? ಎಂದು ಕೇಳಿದರು. ಮುಸಲ್ಮಾನ ಹೆಣ್ಮಕ್ಕಳ ಆತ್ಮರಕ್ಷಣೆಗಾಗಿ ಬಜೆಟ್‍ನಲ್ಲಿ ಹಣ ಇಟ್ಟಿದ್ದಾರೆ. ರಾಜ್ಯದಲ್ಲಿ ಲವ್ ಜಿಹಾದ್‍ಗೆ ಬಲಿ ಆಗುತ್ತಿರುವುದು ಹಿಂದೂ ಹೆಣ್ಮಕ್ಕಳೇ ಹೊರತು ಮುಸ್ಲಿಂ ಹೆಣ್ಮಕ್ಕಳಲ್ಲ ಎಂದು ಗಮನ ಸೆಳೆದರು.

ಮುಸಲ್ಮಾನರ ಓಲೈಕೆ ಮೂಲಕ ಧರ್ಮಗಳ ನಡುವೆ ಬೆಂಕಿ ಹಚ್ಚಲು ಮುಖ್ಯಮಂತ್ರಿಗಳು ಹೊರಟಿದ್ದು, ಇದನ್ನು ನಾವು ವಿರೋಧಿಸುತ್ತೇವೆ. ಈ ಎಲ್ಲ ವಿಚಾರಗಳನ್ನು ಮುಂದಿಟ್ಟು ಬಿಜೆಪಿ- ಜೆಡಿಎಸ್ ರಾಜ್ಯವ್ಯಾಪಿ ಹೋರಾಟ ಮಾಡಲಿದೆ. ಓಲೈಕೆ ರಾಜಕಾರಣಕ್ಕೆ ಇತಿಶ್ರೀ ಹಾಕಬೇಕು ಎಂದು ಒತ್ತಾಯಿಸಿದರು.

ಮೊದಲ ದಿನದ ‘SSLC ಪರೀಕ್ಷೆ’ ಯಶಸ್ವಿ: 8.2 ಲಕ್ಷ ವಿದ್ಯಾರ್ಥಿಗಳು ಹಾಜರ್, 16,313 ಮಂದಿ ಗೈರು | Karnataka SSLC Exam 2025

BREAKING : `ಹನಿಟ್ರ್ಯಾಪ್’ಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆ : CM ಸಿದ್ದರಾಮಯ್ಯ ಘೋಷಣೆ | Honeytrap cace

Share. Facebook Twitter LinkedIn WhatsApp Email

Related Posts

BREAKING: ಮಂಡ್ಯದಲ್ಲಿ ಕಾರು-ಬಸ್ ಮುಖಾಮುಖಿ ಡಿಕ್ಕಿ; ಸ್ಥಳದಲ್ಲೇ ಖ್ಯಾತ ವಕೀಲ, ಹೋರಾಟಗಾರ ಕಣಿವೆ ಯೋಗೇಶ್ ಸಾವು

1 Min Read

ಗೃಹಲಕ್ಷ್ಮಿ ಯೋಜನೆಯ 30ನೇ ಕಂತು ಬಿಡುಗಡೆ:3 ವರ್ಷದಲ್ಲಿ ಮಹಿಳೆಯರಿಗೆ ತಲಾ 60,000 ರೂ. ಪಾವತಿ | Gruhalakshmi

1 Min Read

ಆನೆಗಳ ಸ್ನಾನ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:ಸಾಕಾನೆ ಶಿಬಿರಗಳಲ್ಲಿ ಪ್ರವಾಸಿಗರ ಸುರಕ್ಷತೆಗಾಗಿ ಎಸ್.ಓ.ಪಿ.: ಈಶ್ವರಖಂಡ್ರೆ ಸೂಚನೆ

1 Min Read
Recent News

BREAKING: ಮಂಡ್ಯದಲ್ಲಿ ಕಾರು-ಬಸ್ ಮುಖಾಮುಖಿ ಡಿಕ್ಕಿ; ಸ್ಥಳದಲ್ಲೇ ಖ್ಯಾತ ವಕೀಲ, ಹೋರಾಟಗಾರ ಕಣಿವೆ ಯೋಗೇಶ್ ಸಾವು

BREAKING: ವಿನೇಶ್ ಫೋಗಟ್‌ಗೆ ಬಿಗ್ ಶಾಕ್: ಏಷ್ಯನ್ ಗೇಮ್ಸ್ ಕನಸು ಭಗ್ನ! ಮಧ್ಯಂತರ ಪರಿಹಾರ ನೀಡಲು ದೆಹಲಿ ಹೈಕೋರ್ಟ್ ನಿರಾಕರಣೆ!

ಒಂದೂ ಕ್ಲಾಸ್‌ಗೆ ಹಾಜರಾಗದ ಕಾನೂನು ವಿದ್ಯಾರ್ಥಿಗಳಿಗೆ ಅಟೆಂಡೆನ್ಸ್ ಸಡಿಲಿಕೆ ಇಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ಹಗಲಿಗಿಂತ ರಾತ್ರಿಯ ಬಿಸಿಯೇ ಹೆಚ್ಚು ಅಪಾಯಕಾರಿ! ‘ನೈಟ್‌ಟೈಮ್ ಹೀಟ್‌ವೇವ್’ನಿಂದ ನಿದ್ದೆಗೆ ಭಂಗ, ಹಾರ್ಟ್ ಹೆಲ್ತ್‌ಗೆ ಕಂಟಕ! ಶಾಕಿಂಗ್ ವರದಿ!

State News
KARNATAKA

BREAKING: ಮಂಡ್ಯದಲ್ಲಿ ಕಾರು-ಬಸ್ ಮುಖಾಮುಖಿ ಡಿಕ್ಕಿ; ಸ್ಥಳದಲ್ಲೇ ಖ್ಯಾತ ವಕೀಲ, ಹೋರಾಟಗಾರ ಕಣಿವೆ ಯೋಗೇಶ್ ಸಾವು

By ವಸಂತ ಬಿ ಈಶ್ವರಗೆರೆ KARNATAKA 1 Min Read

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಚಿನಕುರುಳಿ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಮತ್ತು ಬಸ್ ಮುಖಾಮುಖಿ…

ಗೃಹಲಕ್ಷ್ಮಿ ಯೋಜನೆಯ 30ನೇ ಕಂತು ಬಿಡುಗಡೆ:3 ವರ್ಷದಲ್ಲಿ ಮಹಿಳೆಯರಿಗೆ ತಲಾ 60,000 ರೂ. ಪಾವತಿ | Gruhalakshmi

ಆನೆಗಳ ಸ್ನಾನ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:ಸಾಕಾನೆ ಶಿಬಿರಗಳಲ್ಲಿ ಪ್ರವಾಸಿಗರ ಸುರಕ್ಷತೆಗಾಗಿ ಎಸ್.ಓ.ಪಿ.: ಈಶ್ವರಖಂಡ್ರೆ ಸೂಚನೆ

RAIN ALEART : ರಾಜ್ಯದ 7 ಜಿಲ್ಲೆಗಳಲ್ಲಿ ನಾಳೆ ಆರೆಂಜ್ ಅಲರ್ಟ್ ಘೋಷಣೆ, ಮೇ 21ರವರೆಗೆ ಭಾರೀ ಮಳೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.