ಚನ್ನಪಟ್ಟಣ: ಮುಡಾ ಹಗರಣ ಸೇರಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿವಿಧ ಅಕ್ರಮಗಳ ಸಂಬಂಧ ಬಿಜೆಪಿ-ಜೆಡಿಎಸ್ ನಾಯಕರು ಮೈಸೂರು ಚಲೋ ಪಾದಯಾತ್ರೆಯನ್ನು ನಡೆಸುತ್ತಿದ್ದಾರೆ. ಈ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದಂತ ಕಾರ್ಯಕರ್ತೆಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಚನ್ನಪಟ್ಟಣದ ಬನಶಂಕರಿಯ ಗೌರಮ್ಮ ಎಂಬುವರು ಬಿಜೆಪಿ-ಜೆಡಿಎಸ್ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದರು. ಪಾದಯಾತ್ರೆ ಮಾಡುತ್ತಿದ್ದಾಗಲೇ ಚನ್ನಪಟ್ಟಣದ ಬಳಿಯಲ್ಲಿ ಹೃದಯಾಘಾತವಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದರೂ, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಈ ವಿಷಯವನ್ನು ತಿಳಿದಂತ ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಗೌರಮ್ಮ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು. ಅಲ್ಲದೇ ಆರ್ಥಿಕ ನೆರವು ನೀಡುವುದಾಗಿಯೂ ಅಭಯ ನೀಡಿದ್ದಾರೆ.
ನನ್ನ ಆಸ್ತಿ ಲೆಕ್ಕ ಕೇಳ್ತಾ ಇದ್ದೀಯಾ? ಎಲ್ಲಾ ಕೊಡ್ತೀನಿ, ಮೊದಲು ನಿನ್ನ ಸಹೋದರನ ಲೆಕ್ಕ ಕೊಡು: HDKಗೆ ಡಿಕೆಶಿ ಪ್ರಶ್ನೆ
ಪುರುಷರೇ ಎಚ್ಚರ : `ಶಿಶ್ನ ಕ್ಯಾನ್ಸರ್’ ನ ಆರಂಭಿಕ ರೋಗಲಕ್ಷಣಗಳ ಬಗ್ಗೆ ತಿಳಿಯಿರಿ!
BREAKING: ಬಾಂಗ್ಲಾದೇಶದಲ್ಲಿ ಪ್ರತಿಭಟನೆ. ಇಂದೇ ಪ್ರಧಾನಿ ಹುದ್ದೆಗೆ ಶೇಖ್ ಹಸೀನಾ ರಾಜೀನಾಮೆ ಸಾಧ್ಯತೆ