ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಲಕ್ಷ ಲಕ್ಷ ಹಣ ಲೂಟಿ ಮಾಡುತ್ತಿದ್ದಾರೆ ಎಂದು ಬಿಜೆಪಿ ಟ್ವೀಟ್ ಮೂಲಕ ವಾಗ್ಧಾಳಿ ನಡೆದಿದೆ.
2018ರಲ್ಲಿ ನಾಮಪತ್ರ ಸಲ್ಲಿಸಲು ಕಾರ್ಯಕರ್ತರಿಂದ ಡಿ.ಕೆ ಶಿವಕುಮಾರ್ 50-100 ಎಂದು ಭಿಕ್ಷೆ ಬೇಡಿದರು. ಕೋಟಿ ಕೋಟಿ ರೂಪಾಯಿ ಆಸ್ತಿ ಇದ್ದರೂ ಇದೀಗ ಪ್ರೆಸಿಡೆಂಟ್ ಅದಮೇಲೆ ಟಿಕೆಟ್ ಆಕಾಂಕ್ಷಿಗಳಿಂದ ಕಾಂಗ್ರೆಸ್ ಲಕ್ಷ ಲಕ್ಷ ಲೂಟಿ ಮಾಡಲು ಹೊರಟಿದೆ. ಇದರಿಂದ ಆಕಾಂಕ್ಷಿಗಳ ಜೇಬು ಖಾಲಿಯಾಗಲಿದೆಯೇ ಹೊರತು ಖಾಲಿಯಾದ ಜೇಬಿಗೆ ಟಿಕೆಟ್ ಬರುವುದಿಲ್ಲ ಎಂದು ಕಿಡಿಕಾರಿದೆ.
ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡ ಕಾಂಗ್ರೆಸ್ ನ ದುಷ್ಟರೆಲ್ಲ ಜಾಮೀನಿನ ಮೇಲೆ ಜೀವನ ಸಾಗಿಸುತ್ತಿದ್ದಾರೆ. ನಾಡನ್ನು ಅರಾಜಕತೆಯಿಂದ ತಪ್ಪಿಸಿದ ಬಿಜೆಪಿಯ ದಕ್ಷ ಆಡಳಿತವು ಭ್ರಷ್ಟರಿಗೆ ಸೆರೆಮನೆಯ ದಾರಿ ತೋರಿಸಿ, ಜನತೆಗೆ ನೆಮ್ಮದಿ ನೀಡುತ್ತಿದೆ ಎಂದು ಟ್ವೀಟ್ ಮಾಡಿದೆ.
ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡ @INCKarnatakaದ ದುಷ್ಟರೆಲ್ಲ ಜಾಮೀನಿನ ಮೇಲೆ ಜೀವನ ಸಾಗಿಸುತ್ತಿದ್ದಾರೆ. ನಾಡನ್ನು ಅರಾಜಕತೆಯಿಂದ ತಪ್ಪಿಸಿದ ಬಿಜೆಪಿಯ ದಕ್ಷ ಆಡಳಿತವು ಭ್ರಷ್ಟರಿಗೆ ಸೆರೆಮನೆಯ ದಾರಿ ತೋರಿಸಿ, ಜನತೆಗೆ ನೆಮ್ಮದಿ ನೀಡುತ್ತಿದೆ. #BharavaseBJP pic.twitter.com/uMyUyHq1PG
— BJP Karnataka (@BJP4Karnataka) November 4, 2022
2018ರಲ್ಲಿ ನಾಮಪತ್ರ ಸಲ್ಲಿಸಲು ಕಾರ್ಯಕರ್ತರಿಂದ @DKShivakumar ₹50-100 ಎಂದು ಭೀಕ್ಷೆ ಬೇಡಿದರು. ಕೋಟಿ ಕೋಟಿ ರೂಪಾಯಿ ಆಸ್ತಿ ಇದ್ದರೂ ಇದೀಗ @KPCCPresident ಅದಮೇಲೆ ಟಿಕೆಟ್ ಆಕಾಂಕ್ಷಿಗಳಿಂದ ಕಾಂಗ್ರೆಸ್ ಲಕ್ಷ ಲಕ್ಷ ಲೂಟಿ ಮಾಡಲು ಹೊರಟಿದೆ. ಇದರಿಂದ ಆಕಾಂಕ್ಷಿಗಳ ಜೇಬು ಖಾಲಿಯಾಗಲಿದೆಯೇ ಹೊರತು ಖಾಲಿಯಾದ ಜೇಬಿಗೆ ಟಿಕೆಟ್ ಬರುವುದಿಲ್ಲ. pic.twitter.com/XBdTC6uWu7
— BJP Karnataka (@BJP4Karnataka) November 4, 2022
ಅಮಿತ್ ಶಾ ಗೃಹ ಸಚಿವರೋ ಅಥವಾ ಪ್ರಜಾಪ್ರಭುತ್ವವನ್ನು ಕೊಲ್ಲುತ್ತಿರುವ ಕುದುರೆ ವ್ಯಾಪಾರದ ದಲ್ಲಾಳಿಯೋ? – ಕಾಂಗ್ರೆಸ್
ಬೆಂಗಳೂರಿಗರೇ ಗಮನಿಸಿ : ನ.5, 6 ರಂದು ಈ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ |Power Cut