ಬೆಂಗಳೂರು: ಪ್ರಧಾನಿ ಮೋದಿ ಅವರನ್ನು ಕಟುಕ ಎಂದು ಹೇಳಿರುವ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ವಿರುದ್ಧ ಬಿಜೆಪಿ ಕೆಂಡಾಮಂಡಲ ಆಗಿದ್ದಾರೆ.
BIGG NEWS: ಬೆಂಗಳೂರಿನಲ್ಲಿ ಬಾಡಿಗೆ ಮನೆ ಪಡೆದು ವೇಶ್ಯಾವಾಟಿ ದಂಧೆ; ಎಂಟು ವಿದೇಶಿಗರು ಸಿಸಿಬಿ ಪೊಲೀಸರ ವಶಕ್ಕೆ
ದೇಶಾದ್ಯಂತ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಬೆಂಗಳೂರಿನಲ್ಲಿ ಮೈಸೂರು ಸರ್ಕಲ್ ನಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಯಿತು.ಈ ವೇಳೆ ಪಾಕಿಸ್ತಾನದ ವರ್ತನೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನ ಈಗಾಗಲೇ ದಿವಾಳಿಯಾಗಿದೆ. ಅರಾಜಕತೆ ಸೃಷ್ಟಿಯಾಗಿದೆ. ಹೀಗಾಗಿ ಜಾಗತಿಕವಾಗಿ ಬೇರೆ ಕಡೆ ಗಮನ ಸೆಳೆಯಲು ಇಂತಹ ಹೇಳಿಕೆಯನ್ನು ನೀಡಲಾಗಿದೆ ಎಂದು ಬಿಜೆಪಿ ಕಿಡಿಕಾರಿದೆ.