ಬೀದರ್: ಗುತ್ತಿಗೆದಾರ ಸಚಿನ್ ಅವರು ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಎಂಬುವರು ಕೊಲೆ ಬೆದರಿಕೆ ಹಾಕಿದ್ದಾರೆ ಎಂಬುದಾಗಿ ಆರೋಪಿಸಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಹೀಗೆ ಮೃತಪಟ್ಟಿದ್ದಂತ ಸಚಿನ್ ನಿವಾಸಕ್ಕೆ ಇಂದು ಬಿಜೆಪಿ ಮುಖಂಡರ ನಿಯೋಗ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದೆ.
ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಕಟ್ಟಿತೊಗಾಂವ್ ಗ್ರಾಮಕ್ಕೆ ಇಂದು ಬಿಜೆಪಿ ಮುಖಂಡರ ದಂಡೇ ಆಗಮಿಸಿತ್ತು. ಗುತ್ತಿಗೆದಾರ ಸಚಿನ್ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಇತರೆ ಮುಖಂಡರು ಭೇಟಿ ನೀಡಿದರು.
ಮೃತ ಸಚಿನ್ ಪೋಟೋಗೆ ಪುಷ್ಪನಮನ ಸಲ್ಲಿಸಿದಂತ ಬಿಜೆಪಿ ಮುಖಂಡರು, ಅವರ ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವಾನ ಹೇಳಿದರು. ಇದೇ ಸಂದರ್ಭದಲ್ಲಿ ಬಿವೈ ವಿಜಯೇಂದ್ರ ಬರುತ್ತಿದ್ದಂತೆ ಮೃತ ಸಚಿನ್ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಡಿ.31ರಂದು ಅಲ್ಲಿ ಇಲ್ಲಿ ಯಾಕೆ? ‘ಫ್ಯಾಮಿಲಿ ಸಹಿತ’ ಇಲ್ಲಿಗೆ ಹೋಗಿ, ಹೊಸ ವರ್ಷಾಚರಣೆ ಮಾಡಿ
ಅಫ್ಘಾನ್ ತಾಲಿಬಾನ್ ಪಡೆಗಳ ಗುಂಡಿನ ದಾಳಿ: ಪಾಕ್ ಸೈನಿಕ ಸಾವು, 11 ಮಂದಿಗೆ ಗಾಯ