ಕಲಬುರ್ಗಿ: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೆ ನ್ಯಾಯ ಒದಗಿಸುವಂತೆ, ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮಗೆ ಆಗ್ರಹಿಸಿ ಬಿಜೆಪಿಯಿಂದ ಕಲಬುರ್ಗಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಅಲ್ಲದೇ ಸಚಿವ ಪ್ರಿಯಾಂಕ್ ಖರ್ಗೆ ನಿವಾಸಕ್ಕೂ ಮುತ್ತಿಗೆ ಹಾಕೋದಕ್ಕೆ ಯತ್ನಿಸಲಾಯಿತು. ಇಂತಹ ಬಿಜೆಪಿ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಲಬುರ್ಗಿಯ ಜಿಲ್ಲಾಧಿಕಾರಿಗಳ ಕಚೇರಿಯ ಬಳಿಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಪರಿಷತ್ ಸದಸ್ಯ ಸಿ.ಟಿ ರವಿ, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಇತರೆ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸುತ್ತಿದ್ದರು.
ಆ ಬಳಿಕ ಸಚಿವ ಪ್ರಿಯಾಂಕ್ ಖರ್ಗೆ ನಿವಾಸಕ್ಕೆ ತೆರಳಿ ಮುತ್ತಿಗೆ ಹಾಕಲು ಯತ್ನಿಸಿದರು. ಹೀಗೆ ಯತ್ನಿಸಿದಂತ ಪ್ರತಿಭಟನಾಕಾರರನ್ನು ಡಿಸಿ ಕಚೇರಿ ಬಳಿಯಲ್ಲಿ ಪೊಲೀಸರು ವಶಕ್ಕೆ ಪಡೆದರು. ಸಿಟಿ ರವಿ, ಛಲವಾದಿ ನಾರಾಯಣಸ್ವಾಮಿ, ಎನ್ ರವಿಕುಮಾರ್ ಸೇರಿದಂತೆ ಇತರೆ ಬಿಜೆಪಿ ಮುಖಂಡರನ್ನು ಸಾರಿಗೆ ಬಸ್ಸುಗಳಲ್ಲಿ ವಶಕ್ಕೆ ಪಡೆದು, ತುಂಬಿಸಿಕೊಂಡು ಕರೆದೊಯ್ದರು.
BREAKING : ಭಾರತದ ಖ್ಯಾತ ಭೌತಶಾಸ್ತ್ರಜ್ಞ `ರಾಜಗೋಪಾಲ ಚಿದಂಬರಂ’ ವಿಧಿವಶ | Rajagopala Chidambaram