ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಪೊಲೀಸ್ ವಶದಲ್ಲಿರುವ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಅಕ್ರಮಗಳಿಗೆ ಸಂಬಂಧಿಸಿದ ಒಂದೊಂದೇ ವಿಚಾರಗಳು ಈಗ ಬಯಲಾಗುತ್ತಿವೆ. ಹೂ ಗುಚ್ಛ ನೀಡುವ ನೆಪದಲ್ಲಿ ಇಂಜೆಕ್ಟ್ ಮಾಡಲು ಮುನಿರತ್ನ ಅವರು ಪ್ಲ್ಯಾನ್ ಹಾಕಿಕೊಂಡಿದ್ದರು ಎಂದು ಹೇಳಲಾಗಿದೆ.
ಹೌದು ವಿಪಕ್ಷ ನಾಯಕರದ ಆರ್ ಅಶೋಕ್ ಸೇರಿದಂತೆ ತಮ್ಮ ಪಕ್ಷದವರು ಸೇರಿದಂತೆ ವಿರೋಧಿಗಳಿಗೆ ಈ ಒಂದು ಏಡ್ಸ್ ರಕ್ತ ಬಳಸಿ ಎಚ್‌ಐವಿ ಹಬ್ಬಿಸಲು ಪ್ರಯತ್ನಿಸಿದ್ದರು ಎಂಬ ಆರೋಪ ಕೇಳಿಬಂದಿದೆ. ಇದೀಗ ಈ ಒಂದು ವಿಚಾರವಾಗಿ ಕಾಂಗ್ರೆಸ್, ಬಿಜೆಪಿ ನಾಯಕರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ವೆಂಗ್ಯವಾಡಿದೆ.
ಮುನಿರತ್ನರ ದ್ವೇಷದ ರಾಜಕೀಯಕ್ಕೆ, ಭ್ರಷ್ಟಾಚಾರಕ್ಕೆ ಗುರಿಯಾದವರಲ್ಲಿ ಬಿಜೆಪಿ ನಾಯಕರೂ ಹೊರತಾಗಿಲ್ಲ. ಮಾಧ್ಯಮ ವರದಿಗಳ ಪ್ರಕಾರ ಸ್ವತಃ ಬಿಜೆಪಿ ನಾಯಕ ಅಶೋಕ್ ಅವರಿಗೆ ಏಡ್ಸ್ ಸೋಂಕು ತಗುಲಿಸಲು ಪ್ರಯತ್ನಿಸಿದ್ದ ಅಘಾತಕಾರಿ ಸಂಗತಿ ಹೊರಬಂದಿದೆ. ಇಂತಹ ವಿಕೃತರತ್ನನನ್ನು ತಲೆ ಮೇಲೆ ಹೊತ್ತು ಮೆರೆಸುವ ಬಿಜೆಪಿ ಪಕ್ಷದ ನಾಯಕರು HIV ಪರೀಕ್ಷೆ ಮಾಡಿಸಿಕೊಂಡು ಏಡ್ಸ್ ನಿಯಂತ್ರಣದ ಅಭಿಯಾನಕ್ಕೆ ಸಹಕರಿಸಬೇಕು ಎಂದು ಕಾಂಗ್ರೆಸ್ ವ್ಯಂಗ್ಯವಾಗಿ ಟ್ವೀಟ್ ಮಾಡಿದೆ.
ಮುನಿರತ್ನರ ದ್ವೇಷದ ರಾಜಕೀಯಕ್ಕೆ, ಭ್ರಷ್ಟಾಚಾರಕ್ಕೆ ಗುರಿಯಾದವರಲ್ಲಿ ಬಿಜೆಪಿ ನಾಯಕರೂ ಹೊರತಾಗಿಲ್ಲ.
ಮಾಧ್ಯಮ ವರದಿಗಳ ಪ್ರಕಾರ ಸ್ವತಃ ಬಿಜೆಪಿ ನಾಯಕ ಅಶೋಕ್ ಅವರಿಗೆ ಏಡ್ಸ್ ಸೋಂಕು ತಗುಲಿಸಲು ಪ್ರಯತ್ನಿಸಿದ್ದ ಅಘಾತಕಾರಿ ಸಂಗತಿ ಹೊರಬಂದಿದೆ.
ಇಂತಹ ವಿಕೃತರತ್ನನನ್ನು ತಲೆ ಮೇಲೆ ಹೊತ್ತು ಮೆರೆಸುವ @BJP4Karnataka ಪಕ್ಷದ ನಾಯಕರು HIV…
— Karnataka Congress (@INCKarnataka) September 20, 2024