Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದ ನ್ಯಾಯವಾದಿ ಶ್ರಾವ್ಯ ಸಾಗರ್ ನಿರ್ಮಿಸಿದ ಸಾಕ್ಷ್ಯಚಿತ್ರಕ್ಕೆ ರಾಜ್ಯಮಟ್ಟದ ‘ಜೀವವೈವಿಧ್ಯ ಪ್ರಶಸ್ತಿ’ ಗರಿ!

ಸಾಗರ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಮಾಲತೇಶಪ್ಪ ಅವಿರೋಧ ಆಯ್ಕೆ: ಗುರುಭವನ ನಿರ್ಮಾಣಕ್ಕೆ ಸಂಕಲ್ಪ

ಸಾಗರದಲ್ಲಿ ಹಾಸ್ಟೆಲ್‌ಗೆ ಶಾಸಕ ಗೋಪಾಲಕೃಷ್ಣ ಬೇಳೂರು ದಿಢೀರ್ ಭೇಟಿ: ಅವ್ಯವಸ್ಥೆ ಕಂಡು ಸಿಬ್ಬಂದಿಗಳನ್ನು ತರಾಟೆಗೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಿಜೆಪಿ ನಾಯಕರಿಗೆ ‘ಕ್ರಿಮಿನಲ್ ಹಿನ್ನೆಲೆ’ಯವರನ್ನು ಹೋರಾಟಕ್ಕೆ ಕರೆದೊಯ್ಯದಿದ್ದರೇ ಆತ್ಮತೃಪ್ತಿ ಇರುವುದಿಲ್ಲ: ರಮೇಶ್ ಬಾಬು
KARNATAKA

ಬಿಜೆಪಿ ನಾಯಕರಿಗೆ ‘ಕ್ರಿಮಿನಲ್ ಹಿನ್ನೆಲೆ’ಯವರನ್ನು ಹೋರಾಟಕ್ಕೆ ಕರೆದೊಯ್ಯದಿದ್ದರೇ ಆತ್ಮತೃಪ್ತಿ ಇರುವುದಿಲ್ಲ: ರಮೇಶ್ ಬಾಬು

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಬಿಜೆಪಿ ನಾಯಕರು ಬೀದಿ ಹೋರಾಟ ನಡೆಸಿರುವುದು ವಿಪರ್ಯಾಸ! ಬಿಜೆಪಿ ನಾಯಕರಿಗೆ ಕಳಂಕಿತರನ್ನು, ಆರೋಪಿತರನ್ನು ಮತ್ತು ಕ್ರಿಮಿನಲ್ ಹಿನ್ನೆಲೆ ಉಳ್ಳವರನ್ನೂ ತಮ್ಮ ಹೋರಾಟಗಳಲ್ಲಿ ಜೊತೆ ಜೊತೆಯಲಿ ಕರೆದುಕೊಂಡು ಹೋಗದೆ ಇದ್ದರೆ ಆತ್ಮತೃಪ್ತಿ ಇರುವುದಿಲ್ಲ ಎಂಬುದಾಗಿ ಮಾಜಿ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ವಾಗ್ಧಾಳಿ ನಡೆಸಿದ್ದಾರೆ.

ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಮೂರನ್ನು ಬಿಟ್ಟವರು ಊರಿಗೆ ದೊಡ್ಡವರು ಎಂಬ ಗಾದೆ ಮಾತಿನಂತೆ ಕರ್ನಾಟಕದ ಭಾರತೀಯ ಜನತಾ ಪಕ್ಷದ ನಾಯಕರು ತಮ್ಮ ವರ್ತನೆಯನ್ನು ಮಾಡುತ್ತಿದ್ದಾರೆ. ತಮ್ಮ ರಾಜಕೀಯ ಹೋರಾಟಗಳಿಗೆ ಬಿಜೆಪಿ ನಾಯಕರು ಕ್ರಿಮಿನಲ್ ಆರೋಪದ ಮುಖಂಡರನ್ನು ಜೊತೆಯಲ್ಲಿ ತೆಗೆದು ಕೊಂಡು ಹೋಗುತ್ತಿರುವುದು ನಾಚಿಕೆಗೇಡಿನ ಪರಮಾವಧಿ. ಇಡೀ ರಾಷ್ಟ್ರ ನೋಡುವಂತೆ ಪಿಎಸ್ಐ ಹಗರಣದಲ್ಲಿ ಗಂಭೀರ ಆರೋಪವನ್ನು ಹೊತ್ತಿದ್ದ ಭಾರತೀಯ ಜನತಾ ಪಕ್ಷ ತದನಂತರ ಸದರಿ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಿ ಕೈ ತೊಳೆದುಕೊಳ್ಳುವ ಪ್ರಯತ್ನವನ್ನು ಮಾಡಿತ್ತು. ಕರ್ನಾಟಕದ ಸಾವಿರಾರು ಯುವಕರ ಭವಿಷ್ಯವನ್ನು ಕಸಿ ದಂತಹ ಕರ್ನಾಟಕ ಪಿಎಸ್ಐ ಹಗರಣ, ಕಾಂಗ್ರೆಸ್ ಪಕ್ಷದ ಮತ್ತು ಪ್ರಿಯಾಂಕ ಖರ್ಗೆ ರವರ ಪ್ರಯತ್ನದಿಂದ ಆಚೆ ಬಂದಿತ್ತು, ಇಡೀ ರಾಜ್ಯದಲ್ಲಿ ಒಬ್ಬ ಹಿರಿಯ ದರ್ಜೆಯ ಐಪಿಎಸ್ ಅಧಿಕಾರಿ ಮತ್ತು ಐಎಎಸ್ ಅಧಿಕಾರಿ ಅಮಾನತು ಶಿಕ್ಷೆಗೆ ಒಳಗಾದಂತಹ ಪ್ರಕರಣವಿದು ಎಂದಿದ್ದಾರೆ.

ಇದೇ ಪ್ರಕರಣದಲ್ಲಿ ಅಂದಿನ ಗೃಹ ಸಚಿವರಾದ ಅರಗ ಜ್ಞಾನೇಂದ್ರ ರವರು ಪ್ರಮುಖ ಆರೋಪಿ ಬಿಜೆಪಿಯ ಅಂದಿನ ಮುಖಂಡರಾದ ಶ್ರೀಮತಿ ದಿವ್ಯ ಹಾದರಗಿ ಅವರ ಮನೆಗೆ ಮತ್ತು ಶಾಲೆಗೆ ಭೇಟಿ ನೀಡಿದ ಭಾವಚಿತ್ರಗಳು/ ಫೋಟೋಗಳು ಮಾಧ್ಯಮದಲ್ಲಿ ಪ್ರಕಟಗೊಂಡಿದ್ದವು. ಆಕೆಯ ಬಂಧನದ ನಂತರ ಭಾರತೀಯ ಜನತಾ ಪಕ್ಷ ಆಕೆಯನ್ನು ಪಕ್ಷದಿಂದ ಉಚ್ಛಾಟಿಸಿರುವ ಹೇಳಿಕೆಯನ್ನು ನೀಡಿತ್ತು. ಆದರೆ ಮತ್ತೆ ಗುಲ್ಬರ್ಗಾದ ಪ್ರತಿಭಟನೆಯಲ್ಲಿ ಆಕೆಗೆ ಆದ್ಯತೆಯನ್ನು ನೀಡಿ ಅವರ ಜೊತೆಯಲ್ಲಿ ಬಿಜೆಪಿ ನಾಯಕರು ಬೀದಿ ಹೋರಾಟ ನಡೆಸಿರುವುದು ವಿಪರ್ಯಾಸ ಎಂಬುದಾಗಿ ತಿಳಿಸಿದ್ದಾರೆ.

ಬಿಜೆಪಿ ನಾಯಕರಿಗೆ ಕಳಂಕಿತರನ್ನು, ಆರೋಪಿತರನ್ನು ಮತ್ತು ಕ್ರಿಮಿನಲ್ ಹಿನ್ನೆಲೆ ಉಳ್ಳವರನ್ನೂ ತಮ್ಮ ಹೋರಾಟಗಳಲ್ಲಿ ಜೊತೆ ಜೊತೆಯಲಿ ಕರೆದುಕೊಂಡು ಹೋಗದೆ ಇದ್ದರೆ ಆತ್ಮತೃಪ್ತಿ ಇರುವುದಿಲ್ಲ! ಕಳಂಕಿತರನ್ನು ಜೊತೆಯಲ್ಲಿ ಇಟ್ಟುಕೊಂಡು ಬಿಜೆಪಿ ನಾಯಕರು ಗುಲ್ಬರ್ಗದಲ್ಲಿ ಪ್ರತಿಭಟನೆಯನ್ನು ಮಾಡುವುದರ ಮೂಲಕ ಮತ್ತೊಮ್ಮೆ ತಮ್ಮ ವ್ಯಕ್ತಿತ್ವವನ್ನು ಮತ್ತು ಸಂಘ ಪರಿವಾರದ ಆದರ್ಶಗಳನ್ನು ಸಾಬೀತುಪಡಿಸಿಕೊಂಡಿದ್ದಾರೆ. ಕ್ರಿಮಿನಲ್ ಅಪರಾಧಿಗಳ ಜೊತೆ ಕಾಣಿಸಿಕೊಳ್ಳುವುದರ ಮೂಲಕ ತಮ್ಮ ಹವ್ಯಾಸವನ್ನು ಬೆತ್ತಲೆ ಗೊಳಿಸಿಕೊಂಡಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷವು ಬಿಜೆಪಿ ನಾಯಕರ ಇಂತಹ ನಡೆಯನ್ನು ಖಂಡಿಸುವುದಾಗಿ ಹೇಳಿದ್ದಾರೆ.

ರಾಜ್ಯದಲ್ಲಿ ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಬಹುದೊಡ್ಡ ಹಗರಣ ಪಿಎಸ್ಐ ಹಗರಣ, 545 ಪೊಲೀಸ್ ಸಬ್ ಇನ್ಸೆಕ್ಟರ್ ನೇಮಕಾತಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿತ್ತು. ಪಿಎಸ್ಐ ನೇಮಕಾತಿಗಾಗಿ ವರ್ಷಗಟ್ಟಲೆ ಶ್ರಮ ಪಟ್ಟು ಪರೀಕ್ಷೆ ಬರೆದ ನಾಡಿದ ಸಾವಿರಾರು ಯುವಕರಿಗೆ ಇದರಿಂದ ಅನ್ಯಾಯವಾಗುತ್ತಿತ್ತು ಈ ಭ್ರಷ್ಟಾಚಾರದ ಸುಳಿವು ಸಿಗುತ್ತಿದಂತೆ ಶಾಸಕರಾಗಿದ್ದ ಪ್ರಿಯಾಂಕ್ ಖರ್ಗೆಯವರು ಅಂದು ನಾಡಿನ ಯುವಕರ ಪರ ನಿಂತು ಈ ಅಕ್ರಮದ ವಿರುದ್ಧ ದಾಖಲೆ ಸಮೇತ ಹೋರಾಟ ನಡೆಸಿ ಅಕ್ರಮವನ್ನು ಬಯಲಿಗೆಳೆದರು. ಆರಂಭದಲ್ಲಿ ಬಿಜೆಪಿ ಸರ್ಕಾರ ಮತ್ತು ನಾಯಕರು ಇದನ್ನು ಅಲ್ಲಗಳೆದರಾದರೂ ಒತ್ತಡಕ್ಕೆ ಮಣಿದು ತನಿಖೆ ನಡೆಸಿದಾಗ ಸ್ವತಃ ಬಿಜೆಪಿ ನಾಯಕರೇ ಈ ಪಿಎಸ್ಐ ಅಕ್ರಮದಲ್ಲಿ ಭಾಗಿಯಾಗಿರುವುದು ಜಗಜ್ಜಾಹೀರಾಯಿತು. ದಿವ್ಯಾ ಹಾಗರಗಿ ಸೇರಿದಂತೆ ಅನೇಕ ಬಿಜೆಪಿ ನಾಯಕರು ಜೈಲು ಪಾಲಾದರು. ಪ್ರಿಯಾಂಕ್ ಖರ್ಗೆಯವರ ನಿರಂತರ ಪರಿಶ್ರಮದಿಂದ ಪಿಎಸ್ಐ ಹುದ್ದೆಗಳಿಗೆ ಮರುಪರೀಕ್ಷೆಯೂ ನಡೆಯಿತು ಎಂಬುದಾಗಿ ತಿಳಿಸಿದ್ದಾರೆ.

ದಿವ್ಯ ಹಾಗಾರಗಿ ಅಂದಿನ ಗೃಹ ಸಚಿವ ಅರಗ ಜ್ಞಾನೇಂದ್ರ ಹಾಗೂ ಇತರ ಬಿಜೆಪಿ ನಾಯಕರೊಂದಿಗೆ ನಿಕಟ ಸಂಪರ್ಕ ಹೊಂದಿದ್ದರೂ ಬಿಜೆಪಿ ಅದನ್ನು ನಿರಾಕರಿಸಿ ಲೋಕದ ಕಣ್ಣಿಗೆ ಸುಳ್ಳಿನ ಸುಣ್ಣ ಸುರಿದಿತ್ತು. ಪಿ ಎಸ್ ಐ ಹಗರಣದ ಪ್ರಮುಖ ಆರೋಪಿ ಸಚಿವ ಪ್ರಿಯಾಂಕ್ ಖರ್ಗೆಯವರ ವಿರುದ್ಧ ಬಿಜೆಪಿ ನಡೆಸಿದ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಾರೆ, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು, ವಿಧಾನ ಪರಿಷತ್ ಸದಸ್ಯ ರವಿ ಕುಮಾರ್ ಅವರು ಸೇರಿದಂತೆ ಹಲವು ಬಿಜೆಪಿ ನಾಯಕರೊಂದಿಗೆ ಕಾಣಿಸಿಕೊಂಡಿದ್ದಾರೆ. ಪಿಎಸ್ಐ ಹಗರಣದಲ್ಲಿ ಜೈಲು ಪಾಲಾಗಿ, ಈಗ ಜಾಮೀನಿನ ಮೇಲೆ ಹೊರಗೆ ಇರುವ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಸೇರಿದಂತೆ ಹಲವಾರು ಪಾಲ್ಗೊಂಡಿದ್ದು ನಾಚಿಕೆಗೇಡಿನ ವಿಷಯವಾಗಿದೆ. ಗುಲ್ಬರ್ಗದಲ್ಲಿ ಆರೋಪಿತರ ಜೊತೆ ಪಾದಯಾತ್ರೆಯ ಬೆವರು ಹರಿಸಿರುವ ಬಿಜೆಪಿ ನಾಯಕರು, ಕಳಂಕಿತರಿಗೆ ಪಕ್ಷದ ಉನ್ನತ ಸ್ಥಾನಗಳನ್ನು ನೀಡಿ ತಮ್ಮ ಪಕ್ಷದ ಸಿದ್ದಾಂತವನ್ನು ಬಹಿರಂಗವಾಗಿ ಜಾರಿಗೊಳಿಸಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷವು ಒತ್ತಾಯಿಸುವುದಾಗಿ ಹೇಳಿದ್ದಾರೆ.

ಮೈಸೂರಿನ ಕೆ.ಆರ್.ನಗರದಲ್ಲಿ ‘ರೈಲ್ವೆ ರಕ್ಷಣಾ ಪಡೆ ತರಬೇತಿ ಕೇಂದ್ರ’ ಸ್ಥಾಪನೆ: HDK

BIG NEWS: ನಾನು ಕೊನೆಯವರೆಗೂ ಜನಪರವಾಗಿ ಹೋರಾಟ: ನಕ್ಸಲ್ ನಾಯಕಿ ಮುಂಡಗಾರು ಲತಾ ಘೋಷಣೆ

Share. Facebook Twitter LinkedIn WhatsApp Email

Related Posts

ಸಾಗರದ ನ್ಯಾಯವಾದಿ ಶ್ರಾವ್ಯ ಸಾಗರ್ ನಿರ್ಮಿಸಿದ ಸಾಕ್ಷ್ಯಚಿತ್ರಕ್ಕೆ ರಾಜ್ಯಮಟ್ಟದ ‘ಜೀವವೈವಿಧ್ಯ ಪ್ರಶಸ್ತಿ’ ಗರಿ!

1 Min Read

ಸಾಗರ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಮಾಲತೇಶಪ್ಪ ಅವಿರೋಧ ಆಯ್ಕೆ: ಗುರುಭವನ ನಿರ್ಮಾಣಕ್ಕೆ ಸಂಕಲ್ಪ

2 Mins Read

ಸಾಗರದಲ್ಲಿ ಹಾಸ್ಟೆಲ್‌ಗೆ ಶಾಸಕ ಗೋಪಾಲಕೃಷ್ಣ ಬೇಳೂರು ದಿಢೀರ್ ಭೇಟಿ: ಅವ್ಯವಸ್ಥೆ ಕಂಡು ಸಿಬ್ಬಂದಿಗಳನ್ನು ತರಾಟೆಗೆ

1 Min Read
Recent News

ಸಾಗರದ ನ್ಯಾಯವಾದಿ ಶ್ರಾವ್ಯ ಸಾಗರ್ ನಿರ್ಮಿಸಿದ ಸಾಕ್ಷ್ಯಚಿತ್ರಕ್ಕೆ ರಾಜ್ಯಮಟ್ಟದ ‘ಜೀವವೈವಿಧ್ಯ ಪ್ರಶಸ್ತಿ’ ಗರಿ!

ಸಾಗರ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಮಾಲತೇಶಪ್ಪ ಅವಿರೋಧ ಆಯ್ಕೆ: ಗುರುಭವನ ನಿರ್ಮಾಣಕ್ಕೆ ಸಂಕಲ್ಪ

ಸಾಗರದಲ್ಲಿ ಹಾಸ್ಟೆಲ್‌ಗೆ ಶಾಸಕ ಗೋಪಾಲಕೃಷ್ಣ ಬೇಳೂರು ದಿಢೀರ್ ಭೇಟಿ: ಅವ್ಯವಸ್ಥೆ ಕಂಡು ಸಿಬ್ಬಂದಿಗಳನ್ನು ತರಾಟೆಗೆ

BREAKING: ಉತ್ತರ ಕನ್ನಡದ ಕಾಳಿ ನದಿಯಲ್ಲಿ ರಿವರ್ ರ್ಯಾಫ್ಟಿಂಗ್ ವೇಳೆ ವಿದ್ಯುತ್ ಪ್ರವಹಿಸಿ ಓರ್ವ ಸಾವು, ನಾಲ್ವರು ಬಚಾವ್

State News
KARNATAKA

ಸಾಗರದ ನ್ಯಾಯವಾದಿ ಶ್ರಾವ್ಯ ಸಾಗರ್ ನಿರ್ಮಿಸಿದ ಸಾಕ್ಷ್ಯಚಿತ್ರಕ್ಕೆ ರಾಜ್ಯಮಟ್ಟದ ‘ಜೀವವೈವಿಧ್ಯ ಪ್ರಶಸ್ತಿ’ ಗರಿ!

By ವಸಂತ ಬಿ ಈಶ್ವರಗೆರೆ KARNATAKA 1 Min Read

ಶಿವಮೊಗ್ಗ: ಜಿಲ್ಲೆಯ ಸಾಗರದ ಯುವ ನ್ಯಾಯವಾದಿ ಶ್ರಾವ್ಯ ಸಾಗರ್ ಅವರು ನಿರ್ಮಿಸಿರುವ ಸಾಕ್ಷ್ಯಚಿತ್ರಕ್ಕೆ ರಾಜ್ಯಮಟ್ಟದ ಪ್ರತಿಷ್ಠಿತ ಜೀವವೈವಿಧ್ಯ ಪ್ರಶಸ್ತಿ ಲಭಿಸಿದೆ.…

ಸಾಗರ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಮಾಲತೇಶಪ್ಪ ಅವಿರೋಧ ಆಯ್ಕೆ: ಗುರುಭವನ ನಿರ್ಮಾಣಕ್ಕೆ ಸಂಕಲ್ಪ

ಸಾಗರದಲ್ಲಿ ಹಾಸ್ಟೆಲ್‌ಗೆ ಶಾಸಕ ಗೋಪಾಲಕೃಷ್ಣ ಬೇಳೂರು ದಿಢೀರ್ ಭೇಟಿ: ಅವ್ಯವಸ್ಥೆ ಕಂಡು ಸಿಬ್ಬಂದಿಗಳನ್ನು ತರಾಟೆಗೆ

BREAKING: ಉತ್ತರ ಕನ್ನಡದ ಕಾಳಿ ನದಿಯಲ್ಲಿ ರಿವರ್ ರ್ಯಾಫ್ಟಿಂಗ್ ವೇಳೆ ವಿದ್ಯುತ್ ಪ್ರವಹಿಸಿ ಓರ್ವ ಸಾವು, ನಾಲ್ವರು ಬಚಾವ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.