ಮೈಸೂರು: ನರೇಂದ್ರ ಮೋದಿ ಹೋದ ಕಡೆಯಲ್ಲಿ ಬಿಜೆಪಿ ಸೋತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
BIGG NEWS : ವರುಣ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ರೌಂಡ್ಸ್ : ಚಿಕ್ಕಹೊಮ್ಮ ಗ್ರಾಮದ ಕೆರೆಗೆ ಬಾಗಿನ ಅರ್ಪಣೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ರಾಹುಲ್ ಗಾಂಧಿ ಬಂದ್ರೆ ಬಿಜೆಪಿಗೆ ಲಾಭ ವಿಚಾರಕ್ಕೆ ಪ್ರತಿಕ್ರಿಯಿಸಿ, ಪಂಜಾಬ್, ತೆಲಂಗಾಣ, ಕೇರಳದಲ್ಲಿ ಮೋದಿ ಹೋಗಿದ್ದರು. ಅಲ್ಲಿ ಬಿಜೆಪಿ ಸೋತಿಲ್ವಾ? ಅವರು ಕೂಡ ಸೋಲ್ತಾರೆ. ಇದು ಕೇವಲ ರಾಜಕಾರಣಕ್ಕಾಗಿ ಹೇಳುತ್ತಿರುವಾಗಿದೆ ಎಂದು ಸಿಎಂ ಬೊಮ್ಮಾಯಿ ವಿರುದ್ಧ ಕಿಡಿಕಾರಿದರು.
BIGG NEWS : ವರುಣ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ರೌಂಡ್ಸ್ : ಚಿಕ್ಕಹೊಮ್ಮ ಗ್ರಾಮದ ಕೆರೆಗೆ ಬಾಗಿನ ಅರ್ಪಣೆ
ಡರ್ಟಿ ಪಾಲಿಟಿಕ್ಸ್ ವಿಚಾರಕ್ಕೆ ಕಿಡಿಕಾರಿದ ಅವರು, ನಾವು ಕೀಳು ಮಟ್ಟದ ರಾಜಕಾರಣ ಮಾಡಿಲ್ಲ. ಬಿಜೆಪಿ ಸರ್ಕಾರದವರು ರಾಜಕಾರಣ ಮಾಡುವ ಉದ್ದೇಶದಿಂದ ಮಾತನಾಡುತ್ತಾರೆ. ಡರ್ಟಿ ಪಾಲಿಟಿಕ್ಸ್ ಮಾಡುವುದು ಸಂಘ ಪರಿವಾರದವರು.
BIGG NEWS : ವರುಣ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ರೌಂಡ್ಸ್ : ಚಿಕ್ಕಹೊಮ್ಮ ಗ್ರಾಮದ ಕೆರೆಗೆ ಬಾಗಿನ ಅರ್ಪಣೆ
ಕಾಂಗ್ರೆಸ್ನವರು ಹೋರಾಟ ಮಾಡಿ ಸ್ವಾತಂತ್ರ್ಯ ತಂದುಕೊಟ್ಟಿದ್ದಾರೆ. ಆದರೆ ಅವರು ಮಹಾತ್ಮಗಾಂಧಿ ಕೊಂದವರನ್ನು ಇವರು ಆರಾಧಿಸುತ್ತಾರೆ ಎಂದು ವಾಗ್ದಾಳಿ ನಡೆಸಿದರು
BIGG NEWS : ವರುಣ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ರೌಂಡ್ಸ್ : ಚಿಕ್ಕಹೊಮ್ಮ ಗ್ರಾಮದ ಕೆರೆಗೆ ಬಾಗಿನ ಅರ್ಪಣೆ
ಸಂಘ ಪರಿವಾರದವರು ಗಣೇಶನ ಮೆರವಣಿಗೆಯಲ್ಲಿ ಗೋಡ್ಸೆ ಫೋಟೋ ಇಟ್ಟುಕೊಂಡು ಓಡಾಡ್ತಾರೆ. ಇವರಿಗೆ ಯಾವ ನೈತಿಕತೆ ಇದೆ? ಪಾಪ ಇವರಿಗೆ ಡರ್ಟಿ ಪಾಲಿಟಿಕ್ಸ್ ಅಂದ್ರೆ ಗೊತ್ತಿಲ್ಲ. ಭ್ರಷ್ಟಾಚಾರ ಮಾಡ್ತಿದಿರಾ ಎಂಬುದು ಡರ್ಟಿ ಪಾಲಿಟಿಕ್ಸಾ? ಎಂದು ಟೀಕಿಸಿದರು.