Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರೈಲು ಪ್ರಯಾಣಿಕರಿಗೆ ಶುದ್ಧ ಆಹಾರದ ಭರವಸೆ: ಐಆರ್‌ಸಿಟಿಸಿಯಿಂದ AI ತಂತ್ರಜ್ಞಾನದ ಮೂಲಕ ಅಡುಗೆ ಮನೆಗಳ ಮೇಲೆ ನಿಗಾ!

BREAKING : ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

GOOD NEWS :ರಾಜ್ಯದಲ್ಲಿ 56 ಸಾವಿರಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳ ಭರ್ತಿಗೆ ಸಿಎಂ ಡಿ.ಕೆ. ಶಿವಕುಮಾರ್ ಆದೇಶ.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಿಜೆಪಿಗರೇ ನೀವು ಆಗ ಕರ್ನಾಟಕದ ಸಂಪತ್ತನ್ನು ಆ ಚುನಾವಣೆಗಳಿಗೆ ಹಂಚಿ ಕಳುಹಿಸಿದ್ದೀರಾ?: ಸಚಿವ ರಾಮಲಿಂಗಾರೆಡ್ಡಿ ಪ್ರಶ್ನೆ
KARNATAKA

ಬಿಜೆಪಿಗರೇ ನೀವು ಆಗ ಕರ್ನಾಟಕದ ಸಂಪತ್ತನ್ನು ಆ ಚುನಾವಣೆಗಳಿಗೆ ಹಂಚಿ ಕಳುಹಿಸಿದ್ದೀರಾ?: ಸಚಿವ ರಾಮಲಿಂಗಾರೆಡ್ಡಿ ಪ್ರಶ್ನೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ನಿಮ್ಮ ಸರ್ಕಾರವೇ 2008-2013, 2019-2023 ಅವಧಿಯಲ್ಲಿ ಕರ್ನಾಟಕದಲ್ಲಿ ಇತ್ತು. ಆಗ ಮುಖ್ಯಮಂತ್ರಿಗಳಾಗಿದ್ದ ಬಿಎಸ್ ಯಡಿಯೂರಪ್ಪ, ಡಿ.ವಿ ಸದಾನಂದಗೌಡ, ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ ಅವರ ಕಾಲದಲ್ಲಿ ಮಹಾರಾಷ್ಟ್ರ, ಬಿಹಾರ, ಉತ್ತರ ಪ್ರದೇಶ, ಮಧ್ಯಪ್ರದೇಶ, ಗುಜರಾತ್ ಚುನಾವಣೆ ನಡೆದವು. ಆ ನೀವು ಕರ್ನಾಟಕದ ಸಂಪತ್ತನ್ನು ಚುನಾವಣೆಗೆ ಹಂಚಿ ಕಳುಹಿಸಿದ್ದೀರಾ ಎಂಬುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಪ್ರಶ್ನಿಸಿದ್ದಾರೆ.

ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕರ್ನಾಟಕ ಬಿಜೆಪಿಯ ಸುಳ್ಳಿನ ಕಾರ್ಖಾನೆ ಮತ್ತೆ ಓವರ್‌ಟೈಮ್ ಕೆಲಸ ಮಾಡುತ್ತಿದೆ! ಬಿಹಾರ ಚುನಾವಣೆಗೆ ನಮ್ಮ ಕಾಂಗ್ರೆಸ್ ಸರ್ಕಾರ ಹಣ ನೀಡುತ್ತಿದೆ ಎಂಬ ನಿಮ್ಮ ಕಪೋಲಕಲ್ಪಿತ ಆರೋಪ ಹಾಸ್ಯಾಸ್ಪದ. ನಿಮ್ಮ ಸುಳ್ಳಿನ ಸರಮಾಲೆಗೆ ಕೊನೆಯೇ ಇಲ್ಲವೇ? ಚುನಾವಣೆಗೆ ಅಕ್ರಮ ಭ್ರಷ್ಟಾಚಾರದ ಹಣವನ್ನು ಬಳಸುವುದು ನಿಮ್ಮ ಜಾಯಮಾನ, ಕಾಂಗ್ರೆಸ್‌ನದ್ದಲ್ಲ. ಸ್ವಾತಂತ್ರ್ಯ ಪೂರ್ವದಿಂದಲೂ ದೇಶಕ್ಕೆ ನೀಡಿದ ಕೊಡುಗೆ ಮತ್ತು ಜನಪರ ಕೆಲಸಗಳಿಂದ ಕಾಂಗ್ರೆಸ್ ಪಕ್ಷ ಇಂದಿಗೂ ಸದೃಢವಾಗಿದೆ. ನಿಮ್ಮದೇ ಆಡಳಿತದ ಕರಾಳ ಇತಿಹಾಸವನ್ನು ಒಮ್ಮೆ ನೆನಪಿಸುತ್ತೇನೆ ಎಂದಿದ್ದಾರೆ.

2008-2013 ಮತ್ತು 2019-2023: ಈ ಅವಧಿಗಳಲ್ಲಿ ಕರ್ನಾಟಕದಲ್ಲಿ ನಿಮ್ಮದೇ ಸರ್ಕಾರವಿತ್ತು. ಆಗ ಮುಖ್ಯಮಂತ್ರಿಗಳಾಗಿದ್ದ ಶ್ರೀ ಬಿ.ಎಸ್. ಯಡಿಯೂರಪ್ಪ, ಡಿ.ವಿ. ಸದಾನಂದ ಗೌಡ, ಜಗದೀಶ್ ಶೆಟ್ಟರ್ ಮತ್ತು ಬಸವರಾಜ ಬೊಮ್ಮಾಯಿ ಅವರ ಕಾಲದಲ್ಲಿ ಮಹಾರಾಷ್ಟ್ರ, ಬಿಹಾರ, ಉತ್ತರ ಪ್ರದೇಶ, ಮಧ್ಯಪ್ರದೇಶ, ಗುಜರಾತ್ ಸೇರಿದಂತೆ ದೇಶದ ಬಹುತೇಕ ರಾಜ್ಯಗಳಲ್ಲಿ ಚುನಾವಣೆಗಳು ನಡೆದವು. ಆಗ ಕರ್ನಾಟಕದ ಸಂಪತ್ತನ್ನು ಆ ಚುನಾವಣೆಗಳಿಗೆ ನೀವೆಲ್ಲರೂ ಹಂಚಿ ಕಳುಹಿಸಿದ್ದೀರಾ? ರಾಜ್ಯದ ಜನತೆಯ ಮುಂದೆ ಉತ್ತರಿಸುವ ಧೈರ್ಯ ನಿಮಗಿದೆಯೇ? ಎಂದು ಕೇಳಿದ್ದಾರೆ.

ಆಪರೇಷನ್ ಕಮಲ: ಹಣದ ಹೊಳೆ ಹರಿಸಿ, ಶಾಸಕರನ್ನು ಕುದುರೆಗಳಂತೆ ಖರೀದಿಸಿ ಪ್ರಜಾಪ್ರಭುತ್ವವನ್ನೇ ಕಗ್ಗೊಲೆ ಮಾಡಿದ ‘ಆಪರೇಷನ್ ಕಮಲ’ದ ಪಿತಾಮಹರು ನೀವು ಎನ್ನುವುದು ರಾಜ್ಯದ ಮೂಲೆ ಮೂಲೆಯಲ್ಲಿರುವ ಸಾಮಾನ್ಯ ಪ್ರಜೆಗೂ ತಿಳಿದಿದೆ. ಭ್ರಷ್ಟಾಚಾರದ ಗಂಗೋತ್ರಿಯಾದ ನೀವು, ಇಂದು ಶುದ್ಧ ಹಸ್ತರೆಂದು ಬಿಂಬಿಸಿಕೊಳ್ಳಲು ಹೊರಟಿರುವುದು ಈ ಶತಮಾನದ ಅತಿದೊಡ್ಡ ಜೋಕ್! ಅಧಿಕಾರಕ್ಕಾಗಿ ನೀವು ಖರೀದಿಸಿದ ಕ್ರಿಮಿನಲ್ ಹಿನ್ನೆಲೆಯ ಶಾಸಕರನ್ನು ಕರ್ನಾಟಕ ಎಂದಿಗೂ ಮರೆಯುವುದಿಲ್ಲ ಎಂದು ತಿಳಿಸಿದ್ದಾರೆ.

40% ಸರ್ಕಾರ: ರಾಜ್ಯ ಗುತ್ತಿಗೆದಾರರ ಸಂಘವು ‘40% ಕಮಿಷನ್’ ಆರೋಪ ಮಾಡಿ ಪ್ರಧಾನಿಗೆ ಪತ್ರ ಬರೆದು ನಿಮ್ಮ ಸರ್ಕಾರದ ಭ್ರಷ್ಟಾಚಾರವನ್ನು ಜಗಜ್ಜಾಹೀರು ಮಾಡಿತ್ತು. ಆ ಕಮಿಷನ್ ಹಣ ಯಾವ ಯಾವ ರಾಜ್ಯಗಳಿಗೆ ಹೋಯಿತು ಎಂದು ಜನತೆಗೆ ಈಗಲಾದರೂ ಲೆಕ್ಕ ಕೊಡುವಿರ? ನಮ್ಮ ಸರ್ಕಾರ ‘ಗ್ಯಾರಂಟಿ’ಗಳ ಮೂಲಕ ರಾಜ್ಯದ ಬಡವರ ಖಾತೆಗೆ ನೇರವಾಗಿ ಹಣ ಜಮೆ ಮಾಡುತ್ತಿದೆ. ನಿಮ್ಮಂತೆ ಚುನಾವಣಾ ಬಾಂಡ್‌ಗಳ ಹೆಸರಿನಲ್ಲಿ ಕಪ್ಪು ಹಣವನ್ನು ಬಿಳಿ ಮಾಡುವ ಚಾಳಿ ನಮಗಿಲ್ಲ ಎಂಬುದಾಗಿ ಗುಡುಗಿದ್ದಾರೆ.

ವಾಸ್ತವವಾಗಿ, 2019ರಿಂದ ಬಿಜೆಪಿ ಚುನಾವಣಾ ಬಾಂಡ್‌ಗಳ ಮೂಲಕ ಬರೋಬ್ಬರಿ ₹6,060 ಕೋಟಿ ಸಂಗ್ರಹಿಸಿದ್ದು, ಅದರಲ್ಲಿ ಇಡಿ-ಐಟಿ ತನಿಖೆ ಎದುರಿಸುತ್ತಿದ್ದ ಕಂಪನಿಗಳಿಂದಲೇ ₹2746 ಕೋಟಿಗೂ ಹೆಚ್ಚು ದೊಡ್ಡ ಮೊತ್ತದ ದೇಣಿಗೆ ಪಡೆದಿದ್ದೀರಿ. ಈ ಭ್ರಷ್ಟ ಹಣವನ್ನೇ ನೀವು ಬೇರೆ ರಾಜ್ಯಗಳ ಚುನಾವಣೆಗೆ ಬಳಸುತ್ತಿರುವುದು ಅಲ್ಲವೇ? ನೀವು ನಮಗೆ ಪಾಠ ಹೇಳುವ ನೈತಿಕತೆ ಉಳಿಸಿಕೊಂಡಿಲ್ಲ. ಮೊದಲು ನಿಮ್ಮ ಆಡಳಿತದ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಿ ಎಂಬುದಾಗಿ ತಿರುಗೇಟು ನೀಡಿದ್ದಾರೆ.

ಕರ್ನಾಟಕ ಬಿಜೆಪಿಯ ಸುಳ್ಳಿನ ಕಾರ್ಖಾನೆ ಮತ್ತೆ ಓವರ್‌ಟೈಮ್ ಕೆಲಸ ಮಾಡುತ್ತಿದೆ! ಬಿಹಾರ ಚುನಾವಣೆಗೆ ನಮ್ಮ ಕಾಂಗ್ರೆಸ್ ಸರ್ಕಾರ ಹಣ ನೀಡುತ್ತಿದೆ ಎಂಬ ನಿಮ್ಮ ಕಪೋಲಕಲ್ಪಿತ ಆರೋಪ ಹಾಸ್ಯಾಸ್ಪದ.
ನಿಮ್ಮ ಸುಳ್ಳಿನ ಸರಮಾಲೆಗೆ ಕೊನೆಯೇ ಇಲ್ಲವೇ?

ಚುನಾವಣೆಗೆ ಅಕ್ರಮ ಭ್ರಷ್ಟಾಚಾರದ ಹಣವನ್ನು ಬಳಸುವುದು ನಿಮ್ಮ ಜಾಯಮಾನ, ಕಾಂಗ್ರೆಸ್‌ನದ್ದಲ್ಲ.… pic.twitter.com/zt05YT4DZv

— Ramalinga Reddy (@RLR_BTM) October 21, 2025

Share. Facebook Twitter LinkedIn WhatsApp Email

Related Posts

GOOD NEWS :ರಾಜ್ಯದಲ್ಲಿ 56 ಸಾವಿರಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳ ಭರ್ತಿಗೆ ಸಿಎಂ ಡಿ.ಕೆ. ಶಿವಕುಮಾರ್ ಆದೇಶ.!

1 Min Read

GOOD NEWS : ರಾಜ್ಯದ ಜನತೆಗೆ ಸಿಎಂ ಡಿಕೆಶಿ ಭರ್ಜರಿ ಗುಡ್ ನ್ಯೂಸ್ : ಫ್ರೀ ಬಸ್ ಸೇರಿ 6 ಮಹತ್ವದ ಕೊಡುಗೆ ಘೋಷಣೆ.!

3 Mins Read

GOOD NEWS: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸಿಎಂ ಡಿ.ಕೆ ಶಿವಕುಮಾರ್ ಗುಡ್ ನ್ಯೂಸ್: ಎಲ್ಲರಿಗೂ ಫ್ರಿ ಬಸ್ ಪಾಸ್

2 Mins Read
Recent News

ರೈಲು ಪ್ರಯಾಣಿಕರಿಗೆ ಶುದ್ಧ ಆಹಾರದ ಭರವಸೆ: ಐಆರ್‌ಸಿಟಿಸಿಯಿಂದ AI ತಂತ್ರಜ್ಞಾನದ ಮೂಲಕ ಅಡುಗೆ ಮನೆಗಳ ಮೇಲೆ ನಿಗಾ!

BREAKING : ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

GOOD NEWS :ರಾಜ್ಯದಲ್ಲಿ 56 ಸಾವಿರಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳ ಭರ್ತಿಗೆ ಸಿಎಂ ಡಿ.ಕೆ. ಶಿವಕುಮಾರ್ ಆದೇಶ.!

​ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿಗೆ ಇಡಿ ಸಮನ್ಸ್: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮತ್ತೆ ಸಂಕಷ್ಟ!

State News
KARNATAKA

GOOD NEWS :ರಾಜ್ಯದಲ್ಲಿ 56 ಸಾವಿರಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳ ಭರ್ತಿಗೆ ಸಿಎಂ ಡಿ.ಕೆ. ಶಿವಕುಮಾರ್ ಆದೇಶ.!

By kannadanewsnow57 KARNATAKA 1 Min Read

ಬೆಂಗಳೂರು : ರಾಜ್ಯದ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸಿಎಂ ಡಿ.ಕೆ.ಶಿವಕುಮಾರ್ ಸಿಹಿಸುದ್ದಿ ನೀಡಿದ್ದು, ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರದ ಅವಧಿಯಲ್ಲಿ ಘೋಷಣೆಯಾಗಿದ್ದ…

GOOD NEWS : ರಾಜ್ಯದ ಜನತೆಗೆ ಸಿಎಂ ಡಿಕೆಶಿ ಭರ್ಜರಿ ಗುಡ್ ನ್ಯೂಸ್ : ಫ್ರೀ ಬಸ್ ಸೇರಿ 6 ಮಹತ್ವದ ಕೊಡುಗೆ ಘೋಷಣೆ.!

GOOD NEWS: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸಿಎಂ ಡಿ.ಕೆ ಶಿವಕುಮಾರ್ ಗುಡ್ ನ್ಯೂಸ್: ಎಲ್ಲರಿಗೂ ಫ್ರಿ ಬಸ್ ಪಾಸ್

ಸಿಎಂ ಡಿಕೆಶಿ ಮೊದಲ ಕ್ಯಾಬಿನೆಟ್ ಬಿಗ್ ಗಿಫ್ಟ್: ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್ ಸೇರಿದಂತೆ 6 ಮಹತ್ವದ ಘೋಷಣೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.