ಬೆಂಗಳೂರು: ದೂರು ಹೇಳಲು ಮಹಿಳೆಯನ್ನು ಅವಾಚ್ಯ ಶಬ್ದಗಳಿಂದ ಬಿಜೆಪಿ ಶಾಸಕ ನಿಂದಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಹದೇವಪುರ ಕ್ಷೇತ್ರ ವ್ಯಾಪ್ತಿಯ ಹಲವೆಡೆ ಮಳೆಯಿಂದ ಉಂಟಾಗಿರುವ ಅನಾಹುತಗಳ ಬಗ್ಗೆ ಪರಿಶೀಲನೆ ನಡೆಸಲು ಶಾಸಕರು ಆಗಮಿಸಿದ್ದ ವೇಳೆಯಲ್ಲಿ ತಮ್ಮ ದೂರನ್ನು ನೀಡಲು ರುತ್ ಸಗಾಯಿ ಮೇರಿ ಅಮೀಲಾ ದಾಖಲೆ ಪತ್ರಗಳನ್ನು ಹಿಡಿದುಕೊಂಡು ಹೋಗಿ ಮನವಿ ಸಲ್ಲಿಸಲು ಮುಂದಾಗಿದ್ದಾರೆ. ಈ ವೇಳೆಯಲ್ಲಿ ದ ಮಹಿಳೆಯ ಮೇಲೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಅರವಿಂದ ಲಿಂಬಾವಳಿ ಏಕವಚನದಲ್ಲಿ ಮಾತನಾಡಿರುವ ವಿಡಯೋವೊಂದು ವೈರಲ್ ಆಗಿದೆ.