ವಿಜಯಪುರ: ಬಿಜೆಪಿ ಪಕ್ಷಕ್ಕೆ ಡ್ಯಾಮೇಜ್ ಆಗಿದ್ದರೆ ಅದು ಬಿ ವೈ ವಿಜಯೇಂದ್ರನಿಂದ ಎಂದು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಆರೋಪ ಮಾಡಿದ್ದಾರೆ.
BREAKING NEWS: ನ. 1ರಿಂದ JDS ಪಂಚರತ್ನ ರಥಯಾತ್ರೆ ಆರಂಭ; ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ನಗರದಲ್ಲಿ ಮಾತನಾಡಿದ ಅವರು, ವಿಜಯೇಂದ್ರನಿಂದ ಬಿಜೆಪಿಯ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡಿದ್ದಾರೆ. ಇಲ್ಲದಿದ್ದರೆ ಯಡಿಯೂರಪ್ಪ ಸಿಎಂ ಸ್ಥಾನದಲ್ಲೇ ಮುಂದುವರಿಯುತ್ತಿದ್ದರು. ವಿಜಯೇಂದ್ರ ಹಗರಣ ಮಾಡಿದಾಗಲೆಲ್ಲ ಬಿಎಸ್ವೈ ರಾಜೀನಾಮೆ ನೀಡಿದ್ದಾರೆ ಎಂದು ಹೇಳಿದರು.ವಿಜಯೇಂದ್ರ ಭ್ರಷ್ಟಾಚಾರದಿಂದ ಬಿಜೆಪಿ ಪಕ್ಷದ ಹೆಸರು ಕೆಟ್ಟಿದೆ. ಯಡಿಯೂರಪ್ಪ ಜೈಲಿಗೆ ಹೋಗಿ ಬರಲು ವಿಜಯೇಂದ್ರ ಕಾರಣ. ಮಗನ ಮಾತು ಕೇಳಿ ಅಧಿಕಾರ ನಡೆಸಬಾರದು. ಬಿ ಎಸ್ ಯಡಿಯೂರಪ್ಪ ಒಳ್ಳೆಯವರು ಇದ್ದಾರೆ ಎಂದು ಹೇಳಿದ್ದಾರೆ.