ಬೆಂಗಳೂರು: ಗುತ್ತಿಗೆದಾರನಿಂದ ಲಂಚ ಸ್ವೀಕರಿಸಿದ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.
ಪ್ರಕರಣದ ಹಿನ್ನೆಲೆ:
ರಸ್ತೆ ಕಾಮಗಾರಿಯ ಬಿಲ್ ವಿಲೇವಾರಿ ಮಾಡಲು ಗುತ್ತಿಗೆದಾರ ವಿಜಯ್ ಪೂಜಾರ್ ಅವರಿಂದ 11 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟು, ಆ ಪೈಕಿ 5 ಲಕ್ಷ ರೂಪಾಯಿ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ಶಾಸಕರನ್ನು ರೆಡ್‌ಹ್ಯಾಂಡ್ ಆಗಿ ಹಿಡಿದಿದ್ದರು. ಕಳೆದ ಫೆಬ್ರವರಿ 21ರಂದು ಈ ದಾಳಿ ನಡೆದಿತ್ತು. ಶಾಸಕರ ಜೊತೆಗೆ ಅವರ ಇಬ್ಬರು ಆಪ್ತ ಸಹಾಯಕರನ್ನೂ ಬಂಧಿಸಲಾಗಿತ್ತು.
ನ್ಯಾಯಾಲಯದ ಆದೇಶ:
ಈ ಮೊದಲು ಶಾಸಕರಿಗೆ ನ್ಯಾಯಾಂಗ ಬಂಧನ ವಿಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿತ್ತು. ಜಾಮೀನು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಇಂದು ಶಾಸಕರಿಗೆ ಷರತ್ತುಬದ್ಧ ಜಾಮೀನು ನೀಡಿ ಆದೇಶಿಸಿದ್ದಾರೆ.
ಈ ಬೆಳವಣಿಗೆಯಿಂದಾಗಿ ಕಳೆದ ಕೆಲವು ದಿನಗಳಿಂದ ಜೈಲಿನಲ್ಲಿದ್ದ ಚಂದ್ರು ಲಮಾಣಿ ಅವರಿಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದೆ.
ಭಾರತದ ಯಾವೆಲ್ಲ ರಾಜ್ಯಗಳಲ್ಲಿ ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಯ? ಇಲ್ಲಿದೆ ನಗರಗಳ ಸಂಪೂರ್ಣ ಪಟ್ಟಿ
ಯಾವುದೇ ಹೂಡಿಕೆ ಮಾಡುವ ಅಗತ್ಯವಿಲ್ಲ ; ದಿನಕ್ಕೆ 2 ಗಂಟೆ ಹೀಗೆ ಮಾಡಿ, ತಿಂಗಳಿಗೆ 1 ಲಕ್ಷ ರೂ. ಖಚಿತ.!








