ಗದಗ: ಜಿಲ್ಲೆಯ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರ ಬಳಿಯಲ್ಲಿ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದಂತ ವ್ಯಕ್ತಿಯೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.
ಗದಗ ಜಿಲ್ಲೆಯ ಶಿರಹಟ್ಟಿಯ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರ ಕಾರು ಚಾಲಕ ಸುನೀಲ್ ಲಮಾಣಿ(25) ಎಂಬಾತ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರಿಗೆ ಸೇರಿದಂತ ನಿವಾಸದಲ್ಲೇ ಚಾಲಕ ಸುನೀಲ್ ಲಮಾಣಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಲಕ್ಷ್ಮೇಶ್ವರ ಪಟ್ಟಣದಲ್ಲಿರುವಂತ ಚಂದ್ರು ಲಮಾಣಿ ಅವರಿಗೆ ಸೇರಿದ ನಿವಾಸದಲ್ಲಿ ಈ ಘಟನೆ ನಡೆದಿದೆ.
ಸುನೀಲ್ ಲಮಾಣಿ ಅವರು ಕೌಟುಂಬಿಕ ಕಲಹದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದಾಗಿ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.
ಭಾರತೀಯ ಸೇನೆ ಸೇರ ಬಯಸುವವರ ಗಮನಕ್ಕೆ: ಜ.29ರಿಂದ ಶಿವಮೊಗ್ಗದಲ್ಲಿ ಏರ್ ಮೆನ್ ಆಯ್ಕೆಗೆ ‘ನೇಮಕಾತಿ ರ‍್ಯಾಲಿ’
Electricity Bill: 2 ಬಿಲಿಯನ್ ರೂಪಾಯಿ ವಿದ್ಯುತ್ ಬಿಲ್ ಕಂಡು ಆಘಾತಕ್ಕೊಳಗಾದ ವ್ಯಕ್ತಿ!