ದಕ್ಷಿಣ ಕನ್ನಡ: ಪಿಎಸ್ಐಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಇಂದು ಬೆಳ್ತಂಗಡಿ ಠಾಣೆಗೆ ಪೊಲೀಸರ ಮುಂದೆ ವಿಚಾರಣೆ ಹಾಜರಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಪಿಎಸ್ಐಗೆ ಧಮ್ಕಿ ಹಾಕಿದ ಆರೋಪದಲ್ಲಿ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಅವರನ್ನು ಇಂದು ಪೊಲೀಸರು ಬಂಧಿಸಲಿದ್ದಾರೆ ಎನ್ನಲಾಗುತ್ತಿತ್ತು.
ಇಂದು ಬೆಳ್ತಂಗಡಿಯ ಗಾರ್ಡಿಡ್ ಗ್ರಾಮದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ನಿವಾಸದ ಎದುರು ಅವರ ಬೆಂಬಲಿಗರ ದಂಡೇ ನೆರೆದು, ಭಾರೀ ಹೈಡ್ರಾಮಾವೇ ಏರ್ಪಟ್ಟಿತ್ತು. ಈ ಹಿನ್ನಲೆಯಲ್ಲಿ ಅವರನ್ನು ಬಂಧಿಸದೇ ಕಾಲಾವಕಾಶ ಕೋರಿದ್ದರ ಹಿನ್ನಲೆಯಲ್ಲಿ 3 ದಿನ ಕಾಲಾವಕಾಶ ನೀಡಿದ್ದಂತ ನೋಟಿಸ್ ನೀಡಿ ಪೊಲೀಸರು ಬಂಧಿಸದ್ದೇ ತೆರಳಿದ್ದರು.
ಈ ಬೆನ್ನಲ್ಲೇ ಬೆಳ್ತಂಗಡಿ ಠಾಣೆಗೆ ಬಿಜೆಪಿ ಶಾಸಕ ಹರೀಶ್ ಪೂಂಜಾ ಇದೀಗ ಆಗಮಿಸಿದ್ದಾರೆ. ತಮ್ಮ ವಿರುದ್ಧ ದಾಖಲಾಗಿದ್ದಂತ ಪ್ರಕರಣ ಸಂಬಂಧ ಪೊಲೀಸರ ಮುಂದೆ ವಿಚಾರಣೆಗೆ ಬಿಜೆಪಿ ಶಾಸಕ ಹರೀಶ್ ಪೂಂಜಾ ಹಾಜರಾಗಿದ್ದಾರೆ.
ಶಿವಮೊಗ್ಗ: ಇಂದು ರಾತ್ರಿ 10ರಿಂದ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ಕುಡಿಯುವ ನೀರು ಬಿಡುಗಡೆ
‘ಸೇನೆಗೆ ಅಗ್ನಿವೀರ ಬೇಡ, ನಾವದನ್ನು ಕಸದ ಬುಟ್ಟಿಗೆ ಎಸೆಯುತ್ತೇವೆ’ : ರಾಹುಲ್ ಗಾಂಧಿ