ಉಡುಪಿ: ಬೆಳ್ತಂಗಡಿಯ ಬಿಜೆಪಿ ಕಾರ್ಯಕರ್ತರನ್ನ ಮುಟ್ಟಿದ್ರೆ ಪೊಲೀಸರ ಕಾಲರ್ ಹಿಡಿಯಲೂ ರೆಡಿ ಅಂತ BJP ಹರೀಶ್ ಪೂಂಜಾ ವಿವಾದಕ ಹೇಳಿಕೆ ನೀಡಿದ್ದಾರೆ.
ಅವರು ಬೆಳ್ತಂಗಡಿ ತಾಲೂಕು ಕಚೇರಿ ಮುಂಭಾಗದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಎಸ್‍ಪಿಗೆ ಬುದ್ಧಿ ಇಲ್ಲ. ಕಾಂಗ್ರೆಸ್ ಏಜೆಂಟ್ ರೀತಿ ಕೆಲಸ ಮಾಡುತ್ತಿದ್ದಾರೆ ಅಂಥ ಆರೋಪಿಸಿದರು.
ಇದೇ ವೇಳೆ ಅವರು ಮಾತನಾಡುತ್ತ ಇದೇ ವೇಳೇ ಅವರು’ಕಾರ್ಯಕರ್ತರನ್ನು ಮುಟ್ಟಿದರೆ ಕಾಲರ್ ಹಿಡಿದು ಎಳೆದು ಹಾಕುತ್ತೇನೆ’ ಎಂದು ಪೊಲೀಸರ ವಿರುದ್ಧ ಅವಾಜ್ ಹಾಕಿದ್ದಾರೆ. ಕಾರ್ಯಕರ್ತರಿಗೆ, ಮತದಾರರಿಗೆ ಅನ್ಯಾಯವಾದದಲ್ಲಿ ತಾನು ಜೈಲಿನಲ್ಲಿ ಕುಳಿತುಕೊಳ್ಳಲು ರೆಡಿಯಿದ್ದೇನೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯ ತಲೆಯಲ್ಲಿ ಕೂದಲು ಮಾತ್ರವಲ್ಲ ಬುದ್ಧಿಯೂ ಇಲ್ಲ. ತಾನು ಅವರಿಗೆ ರಾತ್ರಿ ಎಷ್ಟು ಸಲ ಕಾಲ್ ಮಾಡಿದರೂ ನನ್ನ ಫೋನ್ ಕರೆಗೆ ಉತ್ತರಿಸಲಿಲ್ಲ ಅಂತ ಹೇಳಿದರು.