ಬೆಂಗಳೂರು: ಕೊಲೆ ಬೆದರಿಕೆ, ಜಾತಿ ನಿಂದನೆ ಪ್ರಕರಣದಲ್ಲಿ ಜೈಲುಪಾಲಾಗಿದ್ದಂತ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿ, ಬಿಗ್ ರಿಲೀಫ್ ನೀಡಿದೆ.
ಇಂದು ಬಿಜೆಪಿ ಶಾಸಕ ಮುನಿರತ್ನ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ 82ನೇ ಸಿಸಿಹೆಚ್ ಕೋರ್ಟ್ ನಡೆಸಿತು. 2 ಲಕ್ಷ ಬಾಂಡ್ ಹಾಗೂ ಇಬ್ಬರ ಶೂರಿಟಿಯೊಂದಿಗೆ ಬಿಜೆಪಿ ಶಾಸಕ ಮುನಿರತ್ನಗೆ ಷರತ್ತು ಬದ್ಧ ಜಾಮೀನು ನೀಡಿದೆ.
ಅಂದಹಾಗೇ ಗುತ್ತಿಗೆದಾರನಿಗೆ ಬೆದರಿಕೆ, ಜಾತಿ ನಿಂದನೆ ಪ್ರಕರಣದಲ್ಲಿ ಶಾಸಕ ಮುನಿರತ್ನ ಬಂಧಿಸಲಾಗಿತ್ತು. ಅವರಿಗೆ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿತ್ತು. ಹೀಗಾಗಿ ಅವರನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರಿಸಲಾಗಿತ್ತು. ಈಗ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಮುಂದುವರಿದ ಟೆಕ್ ಕಂಪನಿಗಳ ಉದ್ಯೋಗ ಕಡಿತ: ಸಾವಿರಾರು ಉದ್ಯೋಗಿಗಳನ್ನು ವಜಾಗೊಳಿಸಿದ CISCO | Lay offs