ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಸದ್ಯ ಬಿಜೆಪಿ ಶಾಸಕ ಮುನಿರತ್ನರನ್ನು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ ಜನಪ್ರತಿನಿಧಿನಿಗಳ ನ್ಯಾಯಾಲಯ ಆದೇಶ ನೀಡಿದೆ.
ಪ್ರಕರಣದ ಹಿನ್ನಲೆ: ಶಾಸಕ ಮುನಿರತ್ನ ಸೇರಿದಂತೆ ಒಟ್ಟು 7 ಆರೋಪಿಗಳ ವಿರುದ್ಧ ಬುಧವಾರ ಸಂಜೆ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆಯಲ್ಲಿ ಅತ್ಯಾಚಾರ ಕೇಸ್ ದಾಖಲಾಗಿತ್ತು. ಕಗ್ಗಲೀಪುರದ ಖಾಸಗಿ ರೆಸಾರ್ಟ್ನಲ್ಲಿ (Private Resort) ಅತ್ಯಾಚಾರ ನಡೆದಿರುವುದಾಗಿ 40 ವರ್ಷ ವಯಸ್ಸಿನ ಮಹಿಳೆಯೊಬ್ಬರು ದೂರು ದಾಖಲಿಸಿದ್ದರು. ದೂರಿನ ಅನ್ವಯ ಪೊಲೀಸರು Information Technology Act 2000, ಐಪಿಸಿ ಸೆಕ್ಷನ್ 354ಎ, 354ಸಿ, 376, 506, 504, 120(ಬಿ), 149, 384, 406, 308 ಅಡಿಯಲ್ಲಿ ಕೇಸ್ ದಾಖಲಿಸಿದ್ದರು. ಮುನಿರತ್ನ ನಾಯ್ಡು (ಎ1), ವಿಜಯ್ ಕುಮಾರ್ (ಎ2), ಸುಧಾಕರ (ಎ3), ಕಿರಣ್ ಕುಮಾರ್ (ಎ4), ಲೋಹಿತ್ ಗೌಡ (ಎ5), ಮಂಜುನಾಥ (ಎ6), ಲೋಕಿ (ಎ7) ಎಂದು ಎಫ್ಐಆರ್ನಲ್ಲಿ ಉಲ್ಲೇಖ ಮಾಡಲಾಗಿದೆ.