ಗದಗ: ರಾಜ್ಯದ ಇತಿಹಾಸದಲ್ಲೇ ಮೊದಲು ಎನ್ನುವಂತೆ ಗುತ್ತಿಗೆದಾರರೊಬ್ಬರಿಂದ 5 ಲಕ್ಷ ಲಂಚ ಪಡೆಯುತ್ತಿದ್ದಾಗಲೇ ಬಿಜೆಪಿ ಶಾಸಕ ಹಾಗೂ ಅವರ ಇಬ್ಬರು ಪಿಎಗಳು ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಗದಗ ಜಿಲ್ಲೆಯ ಶಿರಹಟ್ಟಿಯ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರು ರಸ್ತೆ ತಡೆಗೋಡೆ ನಿರ್ಮಿಸಿದ್ದಂತ ಕಾಮಗಾರಿ ಬಿಲ್ ನಲ್ಲಿ ಕಮೀಷನ್ ನೀಡುವಂತೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಕ್ಲಾಸ್-1 ಗುತ್ತಿಗೆದಾರ ವಿಜಯ್ ಎಂಬುವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.
ಇಂದು 1 ಲಕ್ಷ ಕಮೀಷನ್ ಅನ್ನು ಬಿಜೆಪಿ ಶಾಸಕ ಚಂದ್ರು ಲಮಾಣಿಗೆ ಸೇರಿದಂತ ಲಕ್ಷ್ಮೇಶ್ವರ ಪಟ್ಟಣದಲ್ಲಿರುವ ಬಾಲಾಜಿ ಆಸ್ಪತ್ರೆಯಲ್ಲಿ ಕೊಡುತ್ತಿದ್ದಾಗ, ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ಅವರ ನೇತೃತ್ವದಲ್ಲಿ ದಾಳಿ ನಡೆಸಿ ರೆಡ್ ಹ್ಯಾಂಡ್ ವಶಕ್ಕೆ ಪಡೆದಿದ್ದಾರೆ.
ಬಿಜೆಪಿ ಶಾಸಕ ಚಂದ್ರ ಲಮಾಣಿ ಹಾಗೂ ಅವರ ಪಿಎಗಳಾದಂತ ಮಂಜುನಾಥ್ ಹಾಗೂ ಗುರು ಎಂಬುವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ವಿಚಾರಣೆ ನಡೆಸುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.
ನೇಮಕಾತಿ ಹಾಗೂ ವರ್ಗಾವಣೆಗಳಲ್ಲಿ ಭ್ರಷ್ಠಾಚಾರ ತಡೆಯುವುದು ಸರ್ಕಾರದ ಆಶಯ: ಸಿಎಂ ಸಿದ್ಧರಾಮಯ್ಯ








