ತುಮಕೂರು : ರಾಜ್ಯ ಬಿಜೆಪಿ ಸ್ಥಿತಿ ಕಂಡು ಮತ್ತೆ ಬೇಸರ ವ್ಯಕ್ತಪಡಿಸಿದ ಜೆಸಿ ಮಾಧುಸ್ವಾಮಿ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಜೆ ಸಿ ಮಧು ಸ್ವಾಮಿ ರಾಜಕ್ಕೆ ಅನ್ಯಾಯವಾಗಿದೆ ಎಂದು ಸಿದ್ದರಾಮಯ್ಯ ಹೇಳುತ್ತಿದ್ದು ಅವರು ಹೇಳಿಕೆಗೆ ಬಿಜೆಪಿ ತಿರುಗೇಟು ನೀಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಚಿಕ್ಕನಾಯಕನಹಳ್ಳಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು,ರಾಜ್ಯಕ್ಕೆ ಅನ್ಯಾಯವಾಗಿದೆ ಅಂತ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ ಸಿದ್ದರಾಮಯ್ಯ ಹೇಳಿಕೆಗೆ ರಾಜ್ಯ ಬಿಜೆಪಿಯಿಂದ ತಿರುಗೇಟು ನೀಡುತ್ತಿಲ್ಲ ಮಾತು ಎತ್ತಿದರೆ ಸಾಕು ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸುತ್ತಾರೆ ರಾಜ್ಯ ಬಿಜೆಪಿ ನಾಯಕರು ಸರಿಯಾಗಿ ತಿರುಗೇಟು ನೀಡುತ್ತಿಲ್ಲ ಈ ಪರಿಸ್ಥಿತಿ ನೋಡಿ ನನಗೆ ತುಂಬಾ ನೋವಾಗುತ್ತಿದೆ.
40% ಕಮಿಷನ್ ಎಂದು ಸುಳ್ಳು ಹೇಳಿ ಅದನ್ನೇ ಸತ್ಯ ಎಂದು ಬಿಂಬಿಸಿದರು.ಈ ಹಿಂದೆ ಬೊಮ್ಮಾಯಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಸುಳ್ಳು ಆರೋಪ ಮಾಡಿತ್ತು.ಈ ಬಾರಿ ಕೇಂದ್ರ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ಜೆ ಸಿ ಮಧುಸ್ವಾಮಿ ಹೇಳಿದರು.
ಫೆ.25 ರಂದು ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಲಿಖಿತ ಪರೀಕ್ಷೆ: ಅಭ್ಯರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ
ಬಿಜೆಪಿ ಶಾಸಕ ಕೆ.ಗೋಪಾಲಯ್ಯಗೆ ಕೊಲೆ ಬೆದರಿಕೆ ಕೇಸ್ : ಆರೋಪಿ ಪದ್ಮರಾಜು ಪೊಲೀಸ್ ವಶಕ್ಕೆ
ಫೆ.17ರಂದು ರಾಜ್ಯಾಧ್ಯಂತ ‘ಎಲ್ಲಾ ಸರ್ಕಾರಿ ಕಚೇರಿ’ಗಳಲ್ಲಿ ‘ಬಸವಣ್ಣ’ನವರ ಭಾವಚಿತ್ರ ಅನಾವರಣ