ಬೆಂಗಳೂರು : ಬಿಜೆಪಿಯವ್ರಿಗೆ ಲವ್ ಮಾಡಿ ಗೊತ್ತಿಲ್ಲ, ನಳೀನ್ ಕುಮಾರ್ ಕಟೀಲ್ ಪೋಲಿ ಹುಡುಗರ ಥರ ಮಾತಾಡ್ತಾರೆ ಎಂದು ಜೆಡಿಎಸ್ (JDS) ರಾಜಾಧ್ಯಕ್ಷ ಸಿಎಂ ಇಬ್ರಾಹಿಂ ಕಿಡಿಕಾರಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಇಬ್ರಾಹಿಂ ಕಟೀಲ್ ರಸ್ತೆ, ಚರಂಡಿ ಅಭಿವೃದ್ದಿ ಬಿಟ್ಟು ಲವ್ ಜಿಹಾದ್ ಕಡೆ ಗಮನ ಕೊಡಿ ಎಂಬ ನಳೀನ್ ಕುಮಾರ್ ಕಟೀಲ್ ಹೇಳಿಕೆಗೆ ಇಬ್ರಾಹಿಂ ತಿರುಗೇಟು ನೀಡಿದ್ದಾರೆ.
ಬಿಜೆಪಿಯಲ್ಲಿ ಹಲವರಿಗೆ ಮದ್ವೆನೇ ಆಗಿಲ್ಲ, ಇನ್ನು ಲವ್ ಬಗ್ಗೆ ಏನು ಗೊತ್ತು? ಮೊದಲು ಯುಪಿ ಸಿಎಂಗೆ ಲವ್ ಮಾಡೋಕೆ ಹೇಳಿ, ಆಮೇಲೆ ಜಿಹಾದ್ ಮಾತನಾಡಿ ಎಂದು ಕಿಡಿಕಾರಿದ್ದಾರೆ.ನಳೀನ್ ಕುಮಾರ್ ಕಟೀಲ್ ಪೋಲಿ ಹುಡುಗರ ಥರ ಮಾತಾಡ್ತಾರೆ, ಮುಂದೆ ಬೆಳೆಯೋ ಮಕ್ಕಳಿಗೆ ರಾಜ್ಯಾಧ್ಯಕ್ಷರು ಯಾವ ರೀತಿ ಸಂದೇಶ ನೀಡಿದ್ದಾರೆ. ಇಂತಹವರನ್ನು ಚುನಾವಣೆಯಲ್ಲಿ ಜನರು ಒದ್ದು ಹೊರಗೆ ಹಾಕಬೇಕು ಎಂದು ತಿರುಗೇಟು ನೀಡಿದ್ದಾರೆ.
BIGG NEWS : ಮಹಿಳಾ ಅಭ್ಯರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಪೊಲೀಸ್ ನೇಮಕಾತಿಯಲ್ಲಿ ಶೇ.25ರಷ್ಟು ಮೀಸಲಾತಿ
BIGG NEWS : ಪೊಲೀಸ್ ನೇಮಕಾತಿಯಲ್ಲಿ ಮಹಿಳೆಯರಿಗೆ ಶೇ.25ರಷ್ಟು ಮೀಸಲಾತಿ ನೀಡಲು ರಾಜ್ಯ ಸರ್ಕಾರ ಚಿಂತನೆ