ಬೆಂಗಳೂರು:ರಾಮ ಜನ್ಮಭೂಮಿ ವಿಚಾರವಾಗಿ ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಪ್ರಕರಣದ ಆರೋಪಿ ಶ್ರೀಕಾಂತ್ ಪೂಜಾರಿಯನ್ನು ಪೊಲೀಸರು ಬಂದಿಸಿದ್ದು ರಾಜಕೀಯ ಸ್ವರೂಪ ಪಡೆದುಕೊಂಡಿದೆ.
ಬಿಜೆಪಿ ಮುಖಂಡರು ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಹೋರಾಟ ನಡೆಸುತ್ತಿದ್ದಾರೆ.ನನ್ನನ್ನೂ ಬಂಧಿಸಿ ಎಂದು ಪೋಸ್ಟರ್ ಹಿಡಿದು ಅಭಿಯಾನ ನಡೆಸುತ್ತಿರುವ ಬಿಜೆಪಿಗರಿಗೆ ಕಾಂಗ್ರೆಸ್ ಸರಣಿ ಟ್ವೀಟ್ ಮೂಲಕ ಟಾಂಗ್ ಕೊಟ್ಟಿದೆ.
ಅಧ್ಯಕ್ಷರಾದ ವಿಜಯೇಂದ್ರ ಅವರು ಈ ಪೋಸ್ಟರ್ ಹಿಡಿದು ಕುಳಿತರೆ ಸೂಕ್ತ. ಬಿಜೆಪಿಗರೆಲ್ಲರೂ “ನನ್ನನ್ನೂ ಬಂಧಿಸಿ“ ಎಂದು ಒತ್ತಾಯಿಸುತ್ತಿರುವುದು ತಾವು ಮಾಡಿದ ಅಕ್ರಮಗಳ, ಹಗರಣಗಳ ಪ್ರಾಯಶ್ಚಿತ್ತಕ್ಕಾಗಿಯೇ? ಎಂದು ವಿಜಯೇಂದ್ರ ಎಡಿಟೆಡ್ ಪೋಸ್ಟರ್ ನಲ್ಲಿ ನಾನು RTGS ಮೂಲಕ ಲಂಚ ಪಡೆದಿದ್ದೇನೆ, 40,000 ಕೋಟಿಯ ಅಕ್ರಮದಲ್ಲಿ ಪಾಲುದಾರ, ನನ್ನನ್ನು ಬಂಧಿಸಿ ಎಂದು ಬರೆಯಲಾಗಿದೆ.
ಸಿಟಿ ರವಿ ಅವರ ಎಡಿಟೆಡ್ ಪೋಸ್ಟರ್ನಲ್ಲಿ, ನಾನು ಕಾರು ಚಲಾಯಿಸಿ ಇಬ್ಬರ ಹತ್ಯೆ ಮಾಡಿದ್ದೇನೆ, ನನ್ನನ್ನೂ ಬಂಧಿಸಿ ಎಂದು ಎಡಿಟೆಡ್ ಪೋಸ್ಟರ್ ಹಿಡಿದಿರುವ ಫೋಟೋವನ್ನು ಹಂಚಿಕೊಂಡಿದೆ.
ನನ್ನನ್ನೂ ಬಂಧಿಸಿ ಎನ್ನುತ್ತಿರುವ ಸುನೀಲ್ ಕುಮಾರ್ ಅವರೇ, ಪರಶುರಾಮ ಮೂರ್ತಿಗೆ ಕಂಚಿನ ಬದಲು ಫೈಬರ್ ಹಾಕಿದ್ದಕ್ಕೆ ನಿಮ್ಮನ್ನು ಬಂಧಿಸಬೇಕೆ? ಅಥವಾ ಸರ್ಕಾರದ ಸಿಮೆಂಟ್ ಕಳ್ಳತನದ ಆರೋಪಕ್ಕಾಗಿ ಬಂಧಿಸಬೇಕೆ? ರಾಮನ ಹೆಸರಲ್ಲಿ ರಾವಣನ ಕೆಲಸ ಮಾಡುವ ಆರೋಪಿಗಳನ್ನು ಬಂಧಿಸಬೇಕಲ್ಲವೇ? ಎಂದು ಕಾಂಗ್ರೆಸ್ ಬರೆದುಕೊಂಡಿದೆ.
,@ikseshwarappa ಅವರು ಹಿಡಿಯಬೇಕಾದ ಪೋಸ್ಟರ್ ಇದು!
ನ್ಯಾಯಾಲಯದಲ್ಲಿ ಬಿಜೆಪಿಗರ ಅಕ್ರಮಗಳು, ಅನಾಚಾರಗಳು, ಹಗರಣಗಳು ಸಾಬೀತಾದರೆ ನನ್ನನ್ನೂ ಬಂಧಿಸಿ ಎಂದು ಹೇಳುವುದೇ ಬೇಡ, ಬಂಧನ ಆಗೇ ಆಗುತ್ತದೆ! pic.twitter.com/8Q4i4Ckcqb
— Karnataka Congress (@INCKarnataka) January 5, 2024
ನನ್ನನ್ನೂ ಬಂಧಿಸಿ ಎನ್ನುತ್ತಿರುವ @karkalasunil ಅವರೇ,
ಪರಶುರಾಮ ಮೂರ್ತಿಗೆ ಕಂಚಿನ ಬದಲು ಫೈಬರ್ ಹಾಕಿದ್ದಕ್ಕೆ ನಿಮ್ಮನ್ನು ಬಂಧಿಸಬೇಕೆ? ಅಥವಾ ಸರ್ಕಾರದ ಸಿಮೆಂಟ್ ಕಳ್ಳತನದ ಆರೋಪಕ್ಕಾಗಿ ಬಂಧಿಸಬೇಕೆ?
ರಾಮನ ಹೆಸರಲ್ಲಿ ರಾವಣನ ಕೆಲಸ ಮಾಡುವ ಆರೋಪಿಗಳನ್ನು ಬಂಧಿಸಬೇಕಲ್ಲವೇ? pic.twitter.com/bgTdrd22ZF
— Karnataka Congress (@INCKarnataka) January 5, 2024