ಹುಬ್ಬಳ್ಳಿ; ಹುಬ್ಬಳ್ಳಿಯ ಶಹರ ಪೊಲೀಸ್ ಠಾಣೆಯ ಮುಂದೆ ಗಲಭೆ ಆರೋಪಿ ಶ್ರೀಕಾಂತ್ ಪೂಜಾರಿ ಬಂಧನ ವಿರೋಧಿಸಿ ಬಿಜೆಪಿ ನಾಯಕರಿಂದ ಪ್ರತಿಭಟನೆ ನಡೆಸಲಾಗಿತ್ತು. ಅಲ್ಲದೇ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕೋದಕ್ಕೂ ಯತ್ನಿಸಲಾಗಿತ್ತು. ಹೀಗೆ ಪ್ರತಿಭಟನೆ ನಡೆಸಿದಂತ ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್ ಸೇರಿದಂತೆ 43 ಮಂದಿ ವಿರುದ್ಧ ಕಾಂಗ್ರೆಸ್ ನಿಯೋಗ ಪೊಲೀಸರಿಗೆ ದೂರು ನೀಡಿದೆ.
ಈ ಕುರಿತಂತೆ ಇಂದು ಕಾಂಗ್ರೆಸ್ ನಿಯೋಗವು ಹುಬ್ಬಳ್ಳಿಯ ಶಹರ ಪೊಲೀಸ್ ಠಾಣೆಗೆ ತೆರಳಿ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಸಿದ್ರಾಮುಲ್ಲಾ ಖಾನ್ ಎಂಬುದಾಗಿ ನಿಂದಿಸಲಾಗಿದೆ. ಕಾನೂನು ಸುವ್ಯವಸ್ಥೆ ಮೀರುವಂತೆ ಪೊಲೀಸ್ ಠಾಣೆಗೆ ನುಗ್ಗೋದಕ್ಕೆ ಯತ್ನಿಸಿ ಪ್ರತಿಭಟನೆ ನಡೆಸಲಾಗಿದೆ ಅಂತ ದೂರಿನಲ್ಲಿ ಉಲ್ಲೇಖಿಸಿ, ಬಿಜೆಪಿ ನಾಯಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.
ದೂರಿನಲ್ಲಿ ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್, ಉಪ ನಾಯಕ ಅರವಿಂದ್ ಬೆಲ್ಲದ್, ಶಾಸಕ ಮಹೇಶ್ ಟೆಂಗಿನಕಾಯಿ ಸೇರಿದಂತೆ 43 ಬಿಜೆಪಿ ಮುಖಂಡರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಒತ್ತಾಯಿಸಲಾಗಿದೆ.
ಗಮನಿಸಿ: ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ
BREAKING ; ಫೆ.13ರಂದು ಬುಬುಧಾಬಿಯಲ್ಲಿ ‘ಪ್ರಧಾನಿ ಮೋದಿ’ ಮೆಗಾ ಕಾರ್ಯಕ್ರಮ, 50,000 ಜನರು ಭಾಗಿ |Ahlan Modi