ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರವನ್ನು ಇಂದಿನಿಂದ ಜಾರಿಗೆ ಬರುವಂತೆ ಬಿಎಂ ಆರ್ ಸಿ ಎಲ್ ಹೆಚ್ಚಳ ಮಾಡಲಾಗಿತ್ತು. ಶೇ.47ರಷ್ಟು ಮೆಟ್ರೋ ಪ್ರಯಾಣ ದರ ಹೆಚ್ಚಳ ಮಾಡಿದ್ದರ ವಿರುದ್ಧ ಬಿಜೆಪಿ ಸಿಡಿದೆದ್ದಿದೆ. ಬೆಂಗಳೂರಿನ ವಿವಿಧ ಮೆಟ್ರೋ ನಿಲ್ದಾಣಗಳ ಎದುರು ಪ್ರತಿಭಟನೆ ನಡೆಸುತ್ತಿದೆ.
ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಮೆಟ್ರೋ ನಿಲ್ದಾಣದ ಬಳಿಯಲ್ಲಿ ಶಾಸಕ ಗೋಪಾಲಯ್ಯ ನೇತೃತ್ವದಲ್ಲಿ ಮೆಟ್ರೋ ದರ ಹೆಚ್ಚಳ ಖಂಡಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಜಯನಗರದ ಮೆಟ್ರೋ ಶಾಸಕ ಸಿಕೆ ರಾಮಮೂರ್ತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ.
ಬೆಂಗಳೂರಿನ ಸಿ.ವಿ. ರಾಮನ್ ನಗರ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರು ಮೆಟ್ರೋ ದರ ಏರಿಕೆಯನ್ನು ಖಂಡಿಸಿ ಎಂಜಿ ರೋಡ್ ಮೆಟ್ರೋ ನಿಲ್ದಾಣ ಬಳಿ ಪ್ರತಿಭಟನೆ ನಡೆಸಿದರು. ಕೂಡಲೇ ನಮ್ಮ ಮೆಟ್ರೋ ದರ ಹೆಚ್ಚಳವನ್ನು ಇಳಿಸುವಂತೆ ಆಗ್ರಹಿಸಿದರು.
Shocking News: ಆಸ್ಪತ್ರೆಯಲ್ಲಿ ಸತ್ತಿದ್ದಾನೆಂದು ಊರಿಗೆ ತರುವಾಗ ಬದುಕಿದ ವ್ಯಕ್ತಿ: ಶಾಕ್ ಆದ ಹಾವೇರಿ ಜನರು
‘ಆಧಾರ್’ ಇದ್ರೆ ಸಾಕು 50,000 ರೂ.ಗಳವರೆಗೆ ತ್ವರಿತ ಸಾಲ.! ಈಗಲೇ ಆನ್ ಲೈನ್’ನಲ್ಲಿ ಅರ್ಜಿ ಸಲ್ಲಿಸಿ!