ಬೆಂಗಳೂರು: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರ ಚುನಾವಣಾ ಅಕ್ರಮ ಸಂಬಂಧಿತ ಹೇಳಿಕೆಯನ್ನು ಖಂಡಿಸಿ ಬಿಜೆಪಿ ವತಿಯಿಂದ ಇಂದು ಪಕ್ಷದ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.
‘ಟುಸ್ ಪಟಾಕಿ ರಾಹುಲ್’ ಎಂಬ ಎಂಬ ಪೋಸ್ಟರ್ ಹಿಡಿದಿದ್ದ ಪ್ರಮುಖರು ಮತ್ತು ಕಾರ್ಯಕರ್ತರು ‘ಟುಸ್ ಪಟಾಕಿ ಟುಸ್ ಪಟಾಕಿ ರಾಹುಲ್ ಗಾಂಧಿ ಟುಸ್ ಪಟಾಕಿ’, ‘ಧಿಕ್ಕಾರ ಧಿಕ್ಕಾರ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ’ ‘ಶೇಮ್ ಶೇಮ್ ರಾಹುಲ್’ ಎಂಬಿತ್ಯಾದಿ ಘೋಷಣೆ ಕೂಗಿದರು. ರಾಹುಲ್ ಗಾಂಧಿ ಮುಖವಾಡ ಧರಿಸಿದ್ದ ಒಬ್ಬ ಕಾರ್ಯಕರ್ತರೂ ಭಾಗವಹಿಸಿದ್ದರು.
ಬಿಜೆಪಿ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ಶಾಸಕ ಧೀರಜ್ ಮುನಿರಾಜು, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ ಮತ್ತು ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.