ನವದೆಹಲಿ: ಇಂದು ಲೋಕಸಭಾ ಚುನಾವಣೆ 2024 ಗಾಗಿ ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಎರಡನೇ ಪಟ್ಟಿಯಲ್ಲಿ, ಕೇಸರಿ ಪಕ್ಷವು ಕರ್ನಾಟಕ ಮತ್ತು ಇತರ ರಾಜ್ಯಗಳಿಗೆ ಅಭ್ಯರ್ಥಿಗಳನ್ನು ಘೋಷಿಸಬಹುದು ಎನ್ನಲಾಗಿದೆ.
ಬೆಂಗಳೂರು ಕೇಂದ್ರದಿಂದ ಪಿ.ಸಿ.ಮೋಹನ್, ಬೆಂಗಳೂರು ದಕ್ಷಿಣದಿಂದ ತೇಜಸ್ವಿ ಸೂರ್ಯ ಕಣಕ್ಕಿಳಿಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಧಾರವಾಡದಿಂದ ಪ್ರಹ್ಲಾದ್ ಜೋಶಿ, ಬೆಂಗಳೂರು ಗ್ರಾಮಾಂತರದಿಂದ ಸಿ.ಎನ್.ಮಂಜುನಾಥ್ ಕಣಕ್ಕಿಳಿಯುವ ಸಾಧ್ಯತೆ ಇದೆ. ವಿ.ಸೋಮಣ್ಣ ಅವರನ್ನು ತುಮಕೂರಿನಿಂದ ಕಣಕ್ಕಿಳಿಸುವ ಸಾಧ್ಯತೆ ಇದೆ. ಎನ್ನಲಾಗಿದೆ. ಇದಲ್ಲದೇ ಹಲವು ಮಂದಿ ಹಾಲಿ ಸಚಿವರಿಗೆ ಟಿಕೆಟ್ ಮಿಸ್ ಆಗಲಿದೆ ಎನ್ನಲಾಗಿದೆ.