Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಪೇಪರ್ ಲೀಕ್ ಸಾಕು, ಇನ್ನು ಸಹಿಸಲು ಸಾಧ್ಯವಿಲ್ಲ’: ದೇಶಾದ್ಯಂತ ಶಾಂತಿಯುತ ಪ್ರತಿಭಟನೆಗೆ Gen-Z ಯುವಕರಿಗೆ ಕೇಜ್ರಿವಾಲ್ ಕರೆ!

ಎಐಎಡಿಎಂಕೆ ಶಾಸಕರಿಗೆ ಬಿಗ್ ಶಾಕ್: TVK ಪರ ಮತ ಹಾಕಿದ 25 ಶಾಸಕರು ಪಕ್ಷದ ಹುದ್ದೆಗಳಿಂದ ವಜಾ!

ಅದಾನಿ ಗ್ರೂಪ್ ಜೊತೆ ಕೈಜೋಡಿಸಿದ ಉಬರ್: ಭಾರತದಲ್ಲಿ ತಲೆಯೆತ್ತಲಿದೆ ಮೊದಲ ಬೃಹತ್ ಡೇಟಾ ಸೆಂಟರ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆ ಹೆಚ್ಚಳಕ್ಕೆ ಬಿಜೆಪಿ ಕಾರಣ: ಸಿಎಂ ಸಿದ್ಧರಾಮಯ್ಯ
KARNATAKA

ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆ ಹೆಚ್ಚಳಕ್ಕೆ ಬಿಜೆಪಿ ಕಾರಣ: ಸಿಎಂ ಸಿದ್ಧರಾಮಯ್ಯ

By ವಸಂತ ಬಿ ಈಶ್ವರಗೆರೆ

ಬೆಂಗಳೂರು : ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆ ಹೆಚ್ಚಳದ ಬಳಿಕವೂ ಬಿಜೆಪಿ ಆಡಳಿತದ ರಾಜ್ಯಗಳಿಗಿಂತ, ದಕ್ಷಿಣ ಭಾರತದ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಇಂಧನ ಬೆಲೆ ಕಡಿಮೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಕಿ ಅಂಶಗಳ ಸಮೇತ ವಿವರಿಸಿದರು.

ಗೃಹ ಕಚೇರಿ ಕೃಷ್ಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ತೆರಿಗೆ ಹೆಚ್ಚಳದ ಅನಿವಾರ್ಯತೆಯನ್ನು ಕೇಂದ್ರದ ಮೋದಿ ಸರ್ಕಾರ ಹೇಗೆ ಸೃಷ್ಟಿಸಿತು, ರಾಜ್ಯದ ಪಾಲಿನ ಹಣವನ್ನು ಕೊಡದೇ ಇರುವುದರಿಂದ ಸೃಷ್ಟಿ ಆಗಿರುವ ಪರಿಸ್ಥಿತಿಯನ್ನು ವಿವರಿಸಿದರು.

2015 ರ ಬಳಿಕ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಅರ್ಧಕ್ಕರ್ಧ ಕಡಿಮೆ ಆದಾಗಲೂ ಅವರ ಲಾಭವನ್ನು ದೇಶದ ಜನರಿಗೆ ನೀಡದೆ ಮೋದಿ ಸರ್ಕಾರ ಇಂಧನ ಬೆಲೆಯನ್ನು ನಿರಂತರವಾಗಿ ಏರಿಸುತ್ತಾ ಹೋಗಿದ್ದರ ಅಂಕಿ ಅಂಶಗಳನ್ನು ಮುಖ್ಯಮಂತ್ರಿಗಳು ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.

ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮೌಲ್ಯವರ್ಧಿತ ತೆರಿಗೆ ಹೆಚ್ಚಳದಿಂದ ಸಂಗ್ರಹವಾಗುವ ಅಂದಾಜು ಮೂರು ಸಾವಿರ ಕೋಟಿ ರೂಪಾಯಿಗಳು ರಾಜ್ಯದ ಜಾನೆಗೆ ಸಂದಾಯವಾಗುತ್ತದೆ, ಆ ಹಣ ಜನರ ಕಲ್ಯಾಣ ಕಾರ್ಯಕ್ರಮಗಳಿಗೆ ವಿನಿಯೋಗವಾಗುತ್ತದೆ ಅದು ನಮ್ಮ ಜೇಬಿಗೆ ಹೋಗುವುದಿಲ್ಲ ಎಂದರು.

ಹಿಂದಿನ ಬಿಜೆಪಿ ಸರ್ಕಾರದಲ್ಲಿ ರಾಜ್ಯದ ಪ್ರತಿಯೊಂದು ಯೋಜನೆಗಳಲ್ಲಿಯೂ 40% ತೆರಿಗೆ ಹಣ ಬಿಜೆಪಿ ನಾಯಕರ ಜೇಬಿಗೆ ಹೋಗುತ್ತಿತ್ತು. ಈ ರೀತಿ ಅಂದಾಜು ಒಂದುವರೆ ಲಕ್ಷ ಕೋಟಿ ರೂಪಾಯಿಗಳಷ್ಟು ರಾಜ್ಯದ ಜನರ ಬೆವರಗಳಿಕೆಯ ತೆರಿಗೆ ಹಣವನ್ನು ಈ ಬಿಜೆಪಿ ನಾಯಕರ ತಮ್ಮ ಜೇಬಿಗೆ ತುಂಬಿಸಿಕೊಂಡಿದ್ದಾರೆ ಎಂದರು.

ಇಂತಹ ಲೂಟಿಕೋರ, ಭ್ರಷ್ಟ, ಜನವಿರೋಧಿ ಬಿಜೆಪಿ ನಾಯಕರಿಗೆ ಜನಕಲ್ಯಾಣಕ್ಕಾಗಿ ಸ್ಪಲ್ಪ ಪ್ರಮಾಣದ ತೆರಿಗೆ ಹೆಚ್ಚಿಸಿದ್ದನ್ನು ಪ್ರಶ್ನಿಸುವ ಯೋಗ್ಯತೆ ಎಲ್ಲಿದೆ ಎಂದು ಪ್ರಶ್ನಿಸಿದರು.

ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯ ಸರ್ಕಾರ 60 ಸಾವಿರ ಕೋಟಿ ರೂಪಾಯಿಗಳನ್ನು ವ್ಯಯ ಮಾಡುತ್ತಿದೆ. ಇಷ್ಟೂ ಹಣ ರಾಜ್ಯದ ಎಲ್ಲಾ ಜಾತಿ-ಸಮುದಾಯಗಳ ಬಡವರು ಮತ್ತು ಮಧ್ಯಮ ವರ್ಗದವರಿಗೆ ಹೋಗುತ್ತದೆ. ಸದ್ಯದ ಅಲ್ಪ ಪ್ರಮಾಣದ ಡೀಸೆಲ್-ಪೆಟ್ರೋಲ್ ತೆರಿಗೆ ಹೆಚ್ಚಳದಿಂದ ನಮಗೆ ಹೆಚ್ಚುವರಿಯಾಗಿ ಸಂಪನ್ಮೂಲ ಸಂಗ್ರಹ ಆಗುವುದು ಕೇವಲ 3 ಸಾವಿರ ಕೋಟಿ ರೂಪಾಯಿ ಮಾತ್ರ. ಆದರೆ ಗ್ಯಾರಂಟಿಗಳಿಗೆ ನಾವು ಕೊಡುತ್ತಿರುವುದು 60 ಸಾವಿರ ಕೋಟಿ ರೂಪಾಯಿ. ಹೀಗಾಗಿ ಆರ್.ಅಶೋಕ್ ಅವರ ಪೆದ್ದುತನದ ಮಾತುಗಳಿಗೆ ಅರ್ಥವಿಲ್ಲ. ಆರ್.ಅಶೋಕ್ ಗೆ ಇದೆಲ್ಲಾ ಅರ್ಥ ಆಗಲ್ಲ , ಅರ್ಥ ಮಾಡಿಕೊಳ್ಳುವ ಸಾಮರ್ಥ್ಯವೂ ಇಲ್ಲ ಎಂದು ವ್ಯಂಗ್ಯವಾಡಿದರು.

ಜನರಿಗೆ ಹೆಚ್ಚಿನ ಹೊರೆಯಾಗದ ರೀತಿಯಲ್ಲಿ ರಾಜ್ಯದ ಅಭಿವೃದ್ಧಿ ಕೆಲಸಗಳಿಗೆ ಸಂಪನ್ಮೂಲ ಕ್ರೋಢೀಕರಣದ ಉದ್ದೇಶದೊಂದಿಗೆ ಪೆಟ್ರೋಲ್‌, ಡೀಸೆಲ್‌ ಮಾರಾಟ ತೆರಿಗೆಯಲ್ಲಿ 3 ರೂ. ಗಳಷ್ಟು ಹೆಚ್ಚಿಸಲಾಗಿದೆ

*ಅವರು ಇಂದು ಗೃಹ ರಾಜ್ಯ ಸರ್ಕಾರ 3 ರೂ. ಗಳಷ್ಟು ಪೆಟ್ರೋಲ್‌ ಡೀಸೆಲ್‌ ದರ ಏರಿಕೆ ಮಾಡಿದ್ದರೂ, ದಕ್ಷಿಣದ ಇತರ ರಾಜ್ಯಗಳು ಹಾಗೂ ಬಿಜೆಪಿ ಆಡಳಿತ ಇರುವ ರಾಜ್ಯಗಳಿಗಿಂತ ಕಡಿಮೆ ಇದೆ ಎಂದು ಅಂಕಿ-ಅಂಶಗಳೊಂದಿಗೆ ಸ್ಪಷ್ಟ ಪಡಿಸಿದರು.

ಕೇಂದ್ರ ಸರ್ಕಾರ ಜಿ.ಎಸ್.ಟಿ. ವ್ಯವಸ್ಥೆ ಜಾರಿಗೊಳಿಸಿದ ನಂತರ ರಾಜ್ಯ ಸರ್ಕಾರಗಳ ಸಂಪನ್ಮೂಲ ಕ್ರೋಢೀಕರಣಕ್ಕೆ ಇರುವ ಅವಕಾಶ ಸೀಮಿತಗೊಂಡಿದೆ. ಕೇಂದ್ರ ಸರ್ಕಾರ ಜಿ.ಎಸ್.ಟಿ. , ಆದಾಯ ತೆರಿಗೆ, ಕೇಂದ್ರ ಅಬಕಾರಿ ಸುಂಕ ಮೊದಲಾದ ಮೂಲಗಳಿಂದ ತೆರಿಗೆ ಸಂಗ್ರಹಿಸುತ್ತದೆ. ರಾಜ್ಯ ಸರ್ಕಾರಕ್ಕೆ ಕೇವಲ ನೋಂದಣಿ ಮತ್ತು ಮುದ್ರಾಂಕ ಶುಲ್ಕ, ವಾಹನ ತೆರಿಗೆ, ಪೆಟ್ರೋಲ್‌, ಡೀಸೆಲ್‌ ಮೇಲಿನ ಮಾರಾಟ ತೆರಿಗೆ ಹಾಗೂ ಮದ್ಯದ ಮೇಲಿನ ಮಾರಾಟ ತೆರಿಗೆ ಹೊರತು ಪಡಿಸಿ ಯಾವುದೇ ಮೂಲಗಳಿಲ್ಲ.

ಈ ಹಿನ್ನೆಲೆಯಲ್ಲಿ ಇತರ ರಾಜ್ಯಗಳ ಪೆಟ್ರೋಲ್‌ ಡೀಸೆಲ್‌ ಬೆಲೆಗೆ ಹೋಲಿಸಿದರೆ ರಾಜ್ಯದ ದರಗಳು ಕಡಿಮೆ ಇರುವುದು ಗಮನಿಸಿ, ರಾಜ್ಯ ಸರ್ಕಾರ ಅಲ್ಪ ಪ್ರಮಾಣದ ತೆರಿಗೆ ಹೆಚ್ಚಳ ಮಾಡಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟ ಪಡಿಸಿದರು.

ಈ ಬಗ್ಗೆ ಬಿಜೆಪಿಯವರು ಪ್ರತಿಭಟನೆ ಮಾಡುತ್ತಿದ್ದಾರೆ. ಆದರೆ ಅವರಿಗೆ ಪ್ರತಿಭಟನೆ ಮಾಡುವ ನೈತಿಕ ಹಕ್ಕು ಎಲ್ಲಿದೆ ಎಂದು ಪ್ರಶ್ನಿಸಿದರು. ಡಾ. ಮನಮೋಹನ್‌ ಸಿಂಗ್‌ ಅವರ ಅವಧಿಯಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ 113 ಡಾಲರ್‌ ಇತ್ತು. 2015 ರಲ್ಲಿ ಈ ಬೆಲೆ ಅರ್ಧಕ್ಕರ್ಧ ಕಡಿಮೆಯಾದರೂ, ಬೆಲೆ ಇಳಿಸಿ, ಜನರ ಹೊರೆ ಕಡಿಮೆ ಮಾಡುವ ಕಾಳಜಿಯನ್ನು ನರೇಂದ್ರ ಮೋದಿಯವರು ತೋರಲಿಲ್ಲ. ಬಿಜೆಪಿಯವರು ಯಾರ ವಿರುದ್ಧ ಹೋರಾಡಬೇಕು ಎಂದು ಪ್ರಶ್ನಿಸಿದರು?
ಕರ್ನಾಟಕ ರಾಜ್ಯಕ್ಕೆ ಬಿಜೆಪಿ ಸರ್ಕಾರದಿಂದ ನಿರಂತರ ಅನ್ಯಾಯವಾಗುತ್ತ ಬಂದಿದ್ದರೂ, ಬಿಜೆಪಿಯವರು ದನಿ ಎತ್ತಿಲ್ಲ? ತೆರಿಗೆ ಅನ್ಯಾಯವಾದಾಗ ಸಂಸದರು ಈ ವಿಷಯದ ಕುರಿತು ಮಾತನಾಡಿಲ್ಲ; ರಾಜ್ಯಕ್ಕೆ 15ನೇ ಹಣಕಾಸು ಆಯೋಗವು ವಿಶೇಷ ಅನುದಾನ ನೀಡುವಂತ ಶಿಫಾರಸು ಮಾಡಿದ್ದರೂ, ಕೇಂದ್ರ ಸರ್ಕಾರ ನೀಡಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ ಆಯವ್ಯಯದಲ್ಲಿ ನಿರ್ಮಲಾ ಸೀತಾರಾಮನ್‌ ಅವರು 5,000 ಕೋಟಿ ರೂ. ಒದಗಿಸುವುದಾಗಿ ಘೋಷಿಸಿದರೂ, ಬಿಡಿಗಾಸೂ ನೀಡಿಲ್ಲ. ಈ ವಿಷಯಗಳ ಕುರಿತು ಬಿಜೆಪಿಯವರು ದನಿ ಎತ್ತಿದ್ದಾರೆಯೇ? ಬಿಜೆಪಿಯು ಬಡವರು, ದಲಿತರ ವಿರೋಧಿ ಧೋರಣೆ ಹೊಂದಿದೆ ಎಂದು ಅವರು ನುಡಿದರು.

ದೇಶದ ರೈತರಿಗೆ ಗುಡ್ ನ್ಯೂಸ್ ; ನಾಳೆ ‘ಪಿಎಂ ಕಿಸಾನ್ 17ನೇ ಕಂತು’ ಬಿಡುಗಡೆ, ಅನ್ನದಾತರ ಖಾತೆಗೆ ₹2000 ಜಮೆ

BREAKING : ಜಾರ್ಖಂಡ್’ನಲ್ಲಿ ಭದ್ರತಾ ಪಡೆ ಕಾರ್ಯಾಚರಣೆ ; ನಾಲ್ವರು ನಕ್ಸಲರ ಹತ್ಯೆ, ಇಬ್ಬರ ಬಂಧನ

Share. Facebook Twitter LinkedIn WhatsApp Email

Related Posts

ಸುಶಿಕ್ಷಿತ ಯುವಶಕ್ತಿಯಿಂದ ಮಾತ್ರ ದೇಶದ ಪ್ರಗತಿ ಸಾಧ್ಯ: ಸಚಿವ ಕೆ.ಜೆ.ಜಾರ್ಜ್

2 Mins Read

BREAKING: ಬೆಂಗಳೂರಿನಲ್ಲಿ ಬೃಹತ್ GST ವಂಚನೆ ಜಾಲ ಪತ್ತೆ: ₹410 ಕೋಟಿ ಐಟಿಸಿ ಹಗರಣದ ಕಿಂಗ್‌ಪಿನ್ ಬಂಧನ

2 Mins Read

ಬೆಂಗಳೂರಲ್ಲಿ 23 ಲಕ್ಷಕ್ಕೂ ಹೆಚ್ಚು ಖಾತಾ ಬಿಡುಗಡೆ ದೇಶದಲ್ಲೇ ದಾಖಲೆ: ಡಿಸಿಎಂ ಡಿ ಕೆ ಶಿವಕುಮಾರ್

6 Mins Read
Recent News

‘ಪೇಪರ್ ಲೀಕ್ ಸಾಕು, ಇನ್ನು ಸಹಿಸಲು ಸಾಧ್ಯವಿಲ್ಲ’: ದೇಶಾದ್ಯಂತ ಶಾಂತಿಯುತ ಪ್ರತಿಭಟನೆಗೆ Gen-Z ಯುವಕರಿಗೆ ಕೇಜ್ರಿವಾಲ್ ಕರೆ!

ಎಐಎಡಿಎಂಕೆ ಶಾಸಕರಿಗೆ ಬಿಗ್ ಶಾಕ್: TVK ಪರ ಮತ ಹಾಕಿದ 25 ಶಾಸಕರು ಪಕ್ಷದ ಹುದ್ದೆಗಳಿಂದ ವಜಾ!

ಅದಾನಿ ಗ್ರೂಪ್ ಜೊತೆ ಕೈಜೋಡಿಸಿದ ಉಬರ್: ಭಾರತದಲ್ಲಿ ತಲೆಯೆತ್ತಲಿದೆ ಮೊದಲ ಬೃಹತ್ ಡೇಟಾ ಸೆಂಟರ್!

‘ಇರಾನ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ಸಾಧಿಸಿದೆ’: ಹಾರ್ಮುಜ್ ಜಲಸಂಧಿ ಬಿಕ್ಕಟ್ಟಿನ ನಡುವೆ ಟ್ರಂಪ್ ಮತ್ತು ರಕ್ಷಣಾ ಕಾರ್ಯದರ್ಶಿ ಅಧಿಕೃತ ಘೋಷಣೆ!

State News
KARNATAKA

ಸುಶಿಕ್ಷಿತ ಯುವಶಕ್ತಿಯಿಂದ ಮಾತ್ರ ದೇಶದ ಪ್ರಗತಿ ಸಾಧ್ಯ: ಸಚಿವ ಕೆ.ಜೆ.ಜಾರ್ಜ್

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ…

BREAKING: ಬೆಂಗಳೂರಿನಲ್ಲಿ ಬೃಹತ್ GST ವಂಚನೆ ಜಾಲ ಪತ್ತೆ: ₹410 ಕೋಟಿ ಐಟಿಸಿ ಹಗರಣದ ಕಿಂಗ್‌ಪಿನ್ ಬಂಧನ

ಬೆಂಗಳೂರಲ್ಲಿ 23 ಲಕ್ಷಕ್ಕೂ ಹೆಚ್ಚು ಖಾತಾ ಬಿಡುಗಡೆ ದೇಶದಲ್ಲೇ ದಾಖಲೆ: ಡಿಸಿಎಂ ಡಿ ಕೆ ಶಿವಕುಮಾರ್

BIG BREAKING: ರಾಜ್ಯ ಸರ್ಕಾರದಿಂದ ‘ಶಾಲಾ-ಕಾಲೇಜು’ಗಳಲ್ಲಿ ‘ಹಿಜಾಬ್ ನಿಷೇಧ’ ಆದೇಶ ವಾಪಾಸ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.