‘ಬಿಜೆಪಿ ಹಗರಣ’ಗಳು ಬಯಲಿಗೆ ಬರುವ ಭಯದಿಂದ ಸದನದಲ್ಲಿ ಗದ್ದಲ ಸೃಷ್ಟಿ: ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: “ಸರ್ಕಾರದ ಮೇಲೆ ಆರೋಪ ಮಾಡಿದ ಬಿಜೆಪಿಯವರಿಗೆ ಉತ್ತರವನ್ನು ಕೇಳುವ ಸಹನೆ, ಸಂಯಮ ಇರಲಿಲ್ಲ. ಅವರ ಹಗರಣಗಳು ಬಯಲಿಗೆ ಬರುವ ಭಯದಿಂದ ಸದನದಲ್ಲಿ ಗಲಾಟೆ ಮಾಡಿ ಸದನದ ಬಾವಿಗೆ ಇಳಿದರು. ಮುಖ್ಯಮಂತ್ರಿಗಳು ಉತ್ತರವನ್ನು ಕೊಡಬೇಕಾದರೆ ತೊಂದರೆ ಮಾಡಿದರು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನಸಭೆ ಕಲಾಪವನ್ನು ಸೋಮವಾರಕ್ಕೆ ಮುಂದೂಡಿದ ನಂತರ ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಶುಕ್ರವಾರ ಉತ್ತರಿಸಿದ ಅವರು “ಬಿಜೆಪಿ ಸರ್ಕಾರದಲ್ಲಿ ಕೆಲವು ಹಗರಣಗಳನ್ನು ಮುಚ್ಚಿಹಾಕಿದ್ದಾರೆ, ಮುಚ್ಚಿಹಾಕಲು ಪ್ರಯತ್ನ ಪಟ್ಟಿದ್ದಾರೆ. ಬಿಜೆಪಿಯ ಬ್ರಹ್ಮಾಂಡ ಭ್ರಷ್ಟಾಚಾರವನ್ನು ವಿಧಾನಸಭೆಯಲ್ಲಿ ಮುಖ್ಯಮಂತ್ರಿಗಳು … Continue reading ‘ಬಿಜೆಪಿ ಹಗರಣ’ಗಳು ಬಯಲಿಗೆ ಬರುವ ಭಯದಿಂದ ಸದನದಲ್ಲಿ ಗದ್ದಲ ಸೃಷ್ಟಿ: ಡಿಸಿಎಂ ಡಿ.ಕೆ ಶಿವಕುಮಾರ್