Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪಾಕಿಸ್ತಾನದ ಡ್ರೋನ್, ಕ್ಷಿಪಣಿಗಳನ್ನು ಹೊಡೆದುರುಳಿಸಲು ಉಪಗ್ರಹಗಳು ಸೇನೆಗೆ ಸಂಪೂರ್ಣವಾಗಿ ಸಹಾಯ ಮಾಡಿದವು: ಇಸ್ರೋ

17/05/2025 1:21 PM

Rain Alert : ಮುಂದಿನ 4-5 ದಿನ ಕರ್ನಾಟಕ ಸೇರಿ ಈ ರಾಜ್ಯಗಳಲ್ಲಿ ಗುಡುಗು ಸಹಿತ ಭಾರೀ ಮಳೆ : `IMD’ ಮುನ್ಸೂಚನೆ.!

17/05/2025 1:18 PM

ಭಾರತದಲ್ಲಿ ತಾಯಿ ಮತ್ತು ಮಕ್ಕಳ ಸಾವಿನಲ್ಲಿ ಭಾರೀ ಇಳಿಕೆ: ವರದಿ

17/05/2025 1:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೀಜ-ಗೊಬ್ಬರ ಕೇಳಿದ ರೈತರನ್ನು ಗುಂಡಿಟ್ಟು ಸಾಯಿಸಿದ ಪಕ್ಷ ಬಿಜೆಪಿ: ಸಿಎಂ ಸಿದ್ದರಾಮಯ್ಯ
KARNATAKA

ಬೀಜ-ಗೊಬ್ಬರ ಕೇಳಿದ ರೈತರನ್ನು ಗುಂಡಿಟ್ಟು ಸಾಯಿಸಿದ ಪಕ್ಷ ಬಿಜೆಪಿ: ಸಿಎಂ ಸಿದ್ದರಾಮಯ್ಯ

By kannadanewsnow0729/01/2024 1:03 PM

ಬೆಂಗಳೂರು: ರಾಜ್ಯದ ಬರಪೀಡಿತ ಪ್ರದೇಶದ ರೈತರಿಗೆ ನ್ಯಾಯಬದ್ಧವಾಗಿ ನೀಡಬೇಕಾಗಿರುವ ಪರಿಹಾರದ ಹಣ ನೀಡದೆ ಕಳೆದ ಐದು ತಿಂಗಳಿನಿಂದ ಗೋಳಾಡಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಲಾಗದ ರಾಜ್ಯದ ಪುಕ್ಕಲು ಬಿಜೆಪಿ ನಾಯಕರು ನಮ್ಮ ವಿರುದ್ಧ ‘‘ಪರಿಹಾರ ಕೊಡಿ ಕುರ್ಚಿ ಬಿಡಿ’’ ಎಂಬ ನಾಟಕ ಪ್ರದರ್ಶನಕ್ಕೆ ಹೊರಟಿರುವುದು ಹಾಸ್ಯಾಸ್ಪದ ಮಾತ್ರವಲ್ಲ ನಾಡಿನ ರೈತರಿಗೆ ಬಗೆಯುತ್ತಿರುವ ದ್ರೋಹವಾಗಿದೆ ಅಂತ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಇದೇ ವೇಳೆ ಅವರು ರಾಜ್ಯದಲ್ಲಿ ಮೊದಲ ಬಾರಿ ಅಧಿಕಾರಕ್ಕೆ ಬಂದಿದ್ದಾಗ ಬೀಜ-ಗೊಬ್ಬರ ಕೇಳಿದ ರೈತರನ್ನು ಗುಂಡಿಟ್ಟು ಸಾಯಿಸಿದ ಪಕ್ಷ ಬಿಜೆಪಿ, ಪರಿಹಾರ ಕೊಡಿ ಎಂದು ಕೇಳಿದಾಗೆಲ್ಲ ನಾವೇನು ನೋಟ್ ಪ್ರಿಂಟಿಂಗ್ ಮೆಷಿನ್ ಇಟ್ಟು ಕೊಂಡಿದ್ದೆವೆಯೇ ಎಂದು ಧಾಷ್ಟ್ಯದಿಂದ ಕೇಳಿದ್ದು ಇದೇ ಬಿಜೆಪಿ ಮುಖ್ಯಮಂತ್ರಿಗಳು. ದೆಹಲಿಯಲ್ಲಿ ಧರಣಿ ನಡೆಸುತ್ತಿದ್ದ ರೈತರ ಮೇಲೆ ದೌರ್ಜನ್ಯ ನಡೆಸಿದ್ದು ಕೂಡಾ ಇದೇ ಬಿಜೆಪಿ. ಇಂತಹ ಹುಟ್ಟು ರೈತ ವಿರೋಧಿ ಬಿಜೆಪಿ ನಾಯಕರು ಈಗ ವೇಷ ಬದಲಿಸಿ ಸುರಿಸುವ ಕಣ್ಣೀರು ಮೊಸಳೆಯದ್ದು ಎಂದು ಅರ್ಥಮಾಡಿಕೊಳ್ಳದಷ್ಟು ರೈತರು ದಡ್ಡರಲ್ಲ.

ಬರಗಾಲದ ಸೂಚನೆ ಸಿಗುತ್ತಿದ್ದಂತೆಯೇ ನಮ್ಮ ಸರ್ಕಾರ ಯುದ್ಧೋಪಾದಿಯಲ್ಲಿ ಸಮೀಕ್ಷೆ ಮತ್ತು ಪರಿಹಾರ ಕಾರ್ಯದಲ್ಲಿ ನಿರತವಾಗಿದೆ. ಸಮೀಕ್ಷೆಯ ನಂತರ ಕಳೆದ ವರ್ಷದ ಸೆಪ್ಟೆಂಬರ್ 13ರಂದು ರಾಜ್ಯದ 223 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿತ್ತು. ನಮ್ಮ ಅಧ್ಯಯನದ ಪ್ರಕಾರ ಬರಗಾಲದಿಂದಾಗಿ ರೂ.37 ಸಾವಿರ ಕೋಟಿಗಳಷ್ಟು ನಷ್ಟ ಉಂಟಾಗಿದೆ. ಇದರಲ್ಲಿ 18,177 ಕೋಟಿ ರೂಪಾಯಿ ಪರಿಹಾರವನ್ನು ನೀಡುವಂತೆ ಸೆ.23ಕ್ಕೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೆವು. ಅಕ್ಟೋಬರ್‌ನಲ್ಲಿ ಬರ ಅಧ್ಯಯನಕ್ಕಾಗಿ ಕೇಂದ್ರದಿಂದ ತಜ್ಞರ ತಂಡ ಆಗಮಿಸಿತ್ತು. ಇಲ್ಲಿಯ ವರಗೆ ಅದು ನೀಡಿರುವ ವರದಿಯ ಗತಿ ಏನಾಗಿದೆಯೋ ಗೊತ್ತಿಲ್ಲ.

ಕಂದಾಯ ಸಚಿವ ಕೃಷ್ಣಭೈರೇಗೌಡರ ಜೊತೆ ನಾನು ಪ್ರಧಾನಮಂತ್ರಿ ಮೋದಿ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದೇನೆ. ಕೃಷಿ ಸಚಿವರು ಕೇಂದ್ರ ಕೃಷಿ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ. ಇಲ್ಲಿಯ ವರೆಗೆ ಬರ ಪರಿಹಾರ ಕೋರಿ 17 ಪತ್ರಗಳನ್ನು ಬರೆದಿದ್ದೇವೆ. ಯಾವುದಕ್ಕೂ ಉತ್ತರವೂ ಇಲ್ಲ, ಪೈಸೆ ಪರಿಹಾರವನ್ನೂ ಕೊಟ್ಟಿಲ್ಲ. ಪರಿಸ್ಥಿತಿ ಹೀಗಿರುವಾಗ ಬಿಜೆಪಿ ನಾಯಕರು ಯಾವ ಮುಖ ಹೊತ್ತು ಬರಪೀಡಿತ ರೈತರ ಬಳಿ ನಮ್ಮ ವಿರುದ್ಧ ದೂರು ತೆಗೆದುಕೊಂಡು ಹೋಗುತ್ತಾರೆ. ಕೇಂದ್ರ ಸರ್ಕಾರ ಮಾಡುತ್ತಿರುವ ಅನ್ಯಾಯದಿಂದ ಈಗಾಗಲೇ ರಾಜ್ಯದ ರೈತರು ರೊಚ್ಚಿಗೆದ್ದಿದ್ದಾರೆ. ಆದ್ದರಿಂದ ಅವರ ಬಳಿ ಹೋಗುವಾಗ ಜಾಗ್ರತೆಯಿಂದ ಇರಿ ಎಂದಷ್ಟೇ ಹೇಳಬಯಸುತ್ತೇನೆ.

ಕೇಂದ್ರ ಸರ್ಕಾರ ಪರಿಹಾರ ನೀಡದೆ ಇದ್ದರೂ ರಾಜ್ಯ ಸರ್ಕಾರ ಕೈಕಟ್ಟಿ ಕೂತಿಲ್ಲ. ಬರಪರಿಹಾರಕ್ಕಾಗಿ ಜಿಲ್ಲಾಧಿಕಾರಿಗಳ ಖಾತೆಯಲ್ಲಿ 870 ಕೋಟಿ ರೂಪಾಯಿಗಳಿದೆ. ಬರಪೀಡಿತ 36 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸುತಿದ್ದೇವೆ. 21 ಜಿಲ್ಲೆಗಳಲ್ಲಿ ಟ್ಯಾಂಕರ್ ನಲ್ಲಿ ನೀರು ಪೂರೈಸಲು ಟೆಂಡರ್ ಕರೆದಿದ್ದೇವೆ. 158 ಕಡೆಗಳಲ್ಲಿ ಹೊಸದಾಗಿ ಕೊಳವೆ ಬಾವಿಗಳನ್ನು ತೋಡಲಾಗಿದೆ. ಖಾಸಗಿ ಜಮೀನು ಇರುವ 3,000 ಕಡೆಗಳಲ್ಲಿ ಕೊಳವೆ ಬಾವಿಗಳನ್ನು ತೋಡಲು ಸ್ಥಳಗಳನ್ನು ಗುರುತಿಸಲಾಗಿದೆ. ಸದ್ಯ ಎಲ್ಲಿಯೂ ಕುಡಿಯುವ ನೀರಿನ ಕೊರತೆ ಇಲ್ಲ.

ಬಿತ್ತನೆ ಬೀಜದ ಆರುವರೆ ಲಕ್ಷ ಕಿಟ್ ಗಳನ್ನು ವಿತರಿಸಿದ್ದೇವೆ. 16 ಜಿಲ್ಲೆಗಳಲ್ಲಿ ಮೇವು ಖರೀದಿಗೆ ಟೆಂಡರ್ ಕರೆದಿದ್ದೇವೆ. ಸ್ಥಳೀಯ ಶಾಸಕರ ನೇತೃತ್ವದಲ್ಲಿ ತಾಲೂಕು ಮಟ್ಟದ ಕಾರ್ಯಾಚರಣೆ ಪಡೆಯನ್ನು ರಚಿಸಲಾಗಿದೆ. ಈ ಪಡೆಗಳು ಇಲ್ಲಿಯ ವರೆಗೆ 350ಕ್ಕೂ ಹೆಚ್ಚು ಸಭೆಗಳನ್ನು ನಡೆಸಿದೆ. ಜಿಲ್ಲಾಧಿಕಾರಿಗಳ ನೇತೃತ್ವದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ 210 ಸಭೆಗಳನ್ನು ನಡೆಸಿದೆ.

ಜನವರಿ 25ರ ವರೆಗೆ ಬರಪೀಡಿತ ಪ್ರದೇಶದ 29 ಲಕ್ಷ ರೈತರಿಗೆ 545 ಕೋಟಿ ರೂ. ಪರಿಹಾರ ನೀಡಲಾಗಿದೆ. ರೈತರ ಬೆಳೆಹಾನಿ ಸಮೀಕ್ಷೆಯ ನಂತರ ಇನ್ನೂ 8-9 ಲಕ್ಷ ರೈತರಿಗೆ ಪರಿಹಾರ ನೀಡಲಾಗಿದೆ. ಬೆಳೆ ಹಾನಿ ಸಮೀಕ್ಷೆಯನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ದಾಖಲಿಸಲಾಗಿದೆ. ಈ ದಾಖಲೀಕರಣದಲ್ಲಿ ಎದುರಾಗಿರುವ ತೊಡಕುಗಳನ್ನು ಸರಿಪಡಿಸಲಾಗಿದೆ. ಬರಪೀಡಿತ ಪ್ರದೇಶದಲ್ಲಿ ನಮ್ಮ ರೈತರಿಗೆ ನೆರವಾಗಲು ರಾಜ್ಯ ಸರ್ಕಾರ ಶಕ್ತಿಮೀರಿ ಪ್ರಯತ್ನ ಮಾಡುತ್ತಿದೆ. ಆದರೆ ಕೇಂದ್ರ ಸರ್ಕಾರ ಜಿದ್ದಿಗೆ ಬಿದ್ದವರಂತೆ ಪೈಸೆ ಪರಿಹಾರವನ್ನು ನೀಡದೆ ಅನ್ಯಾಯ ಮಾಡುತ್ತಿದೆ. ಈ ವೈಫಲ್ಯವನ್ನು ಮುಚ್ಚಿಹಾಕಲು ರಾಜ್ಯದ ಬಿಜೆಪಿ ನಾಯಕರು ನಮ್ಮ ಸರ್ಕಾರದ ವಿರುದ್ಧ ಹೋರಾಟದ ನಾಟಕ ಮಾಡುತ್ತಿದ್ದಾರೆ.
ರಾಜ್ಯದ ಬಿಜೆಪಿ ನಾಯಕರಿಗೆ ಕರ್ನಾಟಕದ ನೆಲದ ಮಣ್ಣು ಮತ್ತು ನೀರಿನ ಋಣ ಇದ್ದರೆ ದೆಹಲಿಗೆ ಹೋಗಿ ಕನ್ನಡಿಗರ ಬಗ್ಗೆ ಯಾಕಿಷ್ಟು ನಿಮಗೆ ದ್ವೇಷ? ಎಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಕೇಳಬೇಕು. ಪರಿಹಾರಕ್ಕಾಗಿ ಒತ್ತಾಯಿಸಿ ಪ್ರಧಾನಿ ಕಾರ್ಯಾಲಯದ ಮುಂದೆ ಧರಣಿ ಕೂರಬೇಕು. ಇವರ ಆಟಾಟೋಪಗಳೇನಿದ್ದರೂ ರಾಜ್ಯದಲ್ಲಿ ಮಾತ್ರ, ಇಲ್ಲಿ ಎಲ್ಲರು ಹುಲಿ-ಸಿಂಹಗಳೇ, ಪ್ರಧಾನಮಂತ್ರಿ, ಗೃಹಸಚಿವರನ್ನು ಕಂಡಕೂಡಲೇ ಬಾಲ ಮುದುರಿದ ಇಲಿಗಳಾಗುತ್ತಾರೆ.

ಬರಪರಿಹಾರದಲ್ಲಿ ಅನ್ಯಾಯ, ತೆರಿಗೆ ಪಾಲಿನಲ್ಲಿ ವಂಚನೆ, ಹಣಕಾಸು ಆಯೋಗದ ಅನುದಾನದಲ್ಲಿ ಮೋಸ, ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ಹಣ ನೀಡದೆ ಅನ್ಯಾಯ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಒಂದೇ ಎರಡೇ? ಹೀಗಿದ್ದರೂ ರಾಜ್ಯದ 25 ಬಿಜೆಪಿ ಲೋಕಸಭಾ ಸದಸ್ಯರು ಬಾಯಿಗೆ ಬೀಗ ಹಾಕಿ ಕೂತಿದ್ದಾರೆ. ಇವರೆಲ್ಲ ಯಾವ ಮುಖ ಹೊತ್ತು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತ ಕೇಳಲು ಜನರ ಬಳಿ ಹೋಗುತ್ತಾರೆ? ಇಂತಹವರಿಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಜನತೆಯೇ ತಕ್ಕ ಪಾಠ ಕಲಿಸುತ್ತಾರೆ. ರೈತರಿಗೆ ದ್ರೋಹ ಬಗೆದರೆ ಯಾವ ಶ್ರೀರಾಮಚಂದ್ರನೂ ಕಾಪಾಡಲಾರ ತಿಳಿದಿರಲಿ.

BJP shot dead farmers who asked for seeds and fertilisers: Siddaramaiah
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ `ಪಡಿತರ ಚೀಟಿದಾರರೇ’ ಗಮನಿಸಿ : ‘ರೇಷನ್ ಕಾರ್ಡ್’ನಲ್ಲಿ ಹೆಸರು, ಸೇರ್ಪಡೆ ತಿದ್ದುಪಡಿಗೆ ಮತ್ತೆ ಅವಕಾಶ | Ration Card

17/05/2025 12:45 PM2 Mins Read

BREAKING : ಮಂಗಳೂರಿನಲ್ಲಿ `ಬ್ಯಾಡ್ಮಿಂಟನ್’ ಆಡಿದ CM ಸಿದ್ದರಾಮಯ್ಯ.!

17/05/2025 11:58 AM1 Min Read

`ಪೊಲೀಸ್ ಸಬ್ ಇನ್ಸ್‍ಪೆಕ್ಟರ್’ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ.!

17/05/2025 11:51 AM1 Min Read
Recent News

ಪಾಕಿಸ್ತಾನದ ಡ್ರೋನ್, ಕ್ಷಿಪಣಿಗಳನ್ನು ಹೊಡೆದುರುಳಿಸಲು ಉಪಗ್ರಹಗಳು ಸೇನೆಗೆ ಸಂಪೂರ್ಣವಾಗಿ ಸಹಾಯ ಮಾಡಿದವು: ಇಸ್ರೋ

17/05/2025 1:21 PM

Rain Alert : ಮುಂದಿನ 4-5 ದಿನ ಕರ್ನಾಟಕ ಸೇರಿ ಈ ರಾಜ್ಯಗಳಲ್ಲಿ ಗುಡುಗು ಸಹಿತ ಭಾರೀ ಮಳೆ : `IMD’ ಮುನ್ಸೂಚನೆ.!

17/05/2025 1:18 PM

ಭಾರತದಲ್ಲಿ ತಾಯಿ ಮತ್ತು ಮಕ್ಕಳ ಸಾವಿನಲ್ಲಿ ಭಾರೀ ಇಳಿಕೆ: ವರದಿ

17/05/2025 1:08 PM

BREAKING : ಕೇದಾರನಾಥದಲ್ಲಿ ಏರ್ ಆಂಬ್ಯುಲೆನ್ಸ್ ಪತನ, ಹಿಂಭಾಗಕ್ಕೆ ಹಾನಿ | Air ambulance

17/05/2025 1:01 PM
State News
KARNATAKA

BIG NEWS : ರಾಜ್ಯದ `ಪಡಿತರ ಚೀಟಿದಾರರೇ’ ಗಮನಿಸಿ : ‘ರೇಷನ್ ಕಾರ್ಡ್’ನಲ್ಲಿ ಹೆಸರು, ಸೇರ್ಪಡೆ ತಿದ್ದುಪಡಿಗೆ ಮತ್ತೆ ಅವಕಾಶ | Ration Card

By kannadanewsnow5717/05/2025 12:45 PM KARNATAKA 2 Mins Read

ಬೆಂಗಳೂರು : ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದ್ದು, ಹೆಸರು ಸೇರ್ಪಡೆ/ತಿದ್ದುಪಡಿಗೆ ಮಾರ್ಚ್ 31 ರವರೆಗೆ ಅವಕಾಶ ನೀಡಲಾಗಿದೆ.…

BREAKING : ಮಂಗಳೂರಿನಲ್ಲಿ `ಬ್ಯಾಡ್ಮಿಂಟನ್’ ಆಡಿದ CM ಸಿದ್ದರಾಮಯ್ಯ.!

17/05/2025 11:58 AM

`ಪೊಲೀಸ್ ಸಬ್ ಇನ್ಸ್‍ಪೆಕ್ಟರ್’ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ.!

17/05/2025 11:51 AM

BIG NEWS : ಆನ್‍ಲೈನ್ ಮೂಲಕ `ಮೊಬೈಲ್’ ಖರೀದಿಸಿದ ವಿದ್ಯಾರ್ಥಿಗೆ ಮೋಸ: ಅಮೆಜಾನ್ ಕಂಪನಿಗೆ ಭಾರೀ ದಂಡ ವಿಧಿಸಿ ಆದೇಶ.!

17/05/2025 11:49 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.