ಬೆಳಗಾವಿ : ಕಳೆದ ಕೆಲವು ದಿನಗಳ ಹಿಂದೆ ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ನೀಡುವ ವಿಚಾರಕ್ಕೆ ಸಂಬಂಧಪಟ್ಟಂತೆ ಬೆಳಗಾವಿಯ ಸುವರ್ಣಸೌಧ ಮುತ್ತಿಗೆ ಹಾಕಲು ಪಂಚಮಸಾಲಿ ಹೋರಾಟಗಾರರು ಯತ್ನಿಸಿದ್ದರು. ಈ ವೇಳೆ ಪೊಲೀಸರು ಅವರನ್ನು ತಡೆಯಲು ಮುಂದಾಗಿದ್ದರು ಕೂಡ ಹೋರಾಟಗಾರರು ಬ್ಯಾರಿಕೇಡ್ ತಳ್ಳಿ ಸುವರ್ಣಸೌಧ ಮತ್ತಿಗೆಗೆ ಹಾಕಲು ಯತ್ನಿಸಿದಾಗ, ಲಾಠಿ ಚಾರ್ಜ್ ನಡೆಸಿದರು. ಈ ವಿಚಾರವಾಗಿ ಇಂದು ಪರಿಷತ್ ನಲ್ಲಿ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಧರಣಿ ನಡೆಸಿದರು.
ಹೌದು ಪಕ್ಷಿಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಲಾಟಿಚಾರ್ಜ್ ಮಾಡಿದ್ದನ್ನು ಖಂಡಿಸಿ, ವಿಧಾನ ಪರಿಷತ್ ನಲ್ಲಿ ಸದನದ ಬಾವಿಗಳಿಗೆ ಬಿಜೆಪಿ ಸದಸ್ಯರು ಧರಣಿ ನಡೆಸುತ್ತಿದ್ದಾರೆ. ಪಂಚಮಸಾಲಿ ಸಮಾಜದ ಹೋರಾಟಗಾರರ ಮೇಲೆ ಲಾಠಿಚಾರ್ಜ್ ಆಗಿದೆ. ಮೀಸಲಾತಿ ನೀಡುವ ವಿಚಾರದಲ್ಲಿ ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ. ಸರ್ಕಾರ ಕ್ಷಮೆ ಕೋರಬೇಕು ಎಂದು ಆಗ್ರಹಿಸಿ ಬಿಜೆಪಿ ಸದಸ್ಯರು ಬಾವಿಗಿಳಿದು ಧರಣಿ ಮಾಡುತ್ತಿದ್ದಾರೆ.