ಬೆಂಗಳೂರು: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯು ಇದೇ 27ರಂದು ಅರಮನೆ ಮೈದಾನದಲ್ಲಿ (ಗೇಟ್ ನಂಬರ್ 4) ನಡೆಯಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಅವರು ತಿಳಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಕೇಂದ್ರ ಸಚಿವ ಭೂಪೇಂದ್ರ ಯಾದವ್ ಅವರು ಆಗಮಿಸಲಿದ್ದಾರೆ ಎಂದು ತಿಳಿಸಿದರು. ಬೆಳಿಗ್ಗೆ 9.30ರಿಂದ ಸಂಜೆ 5.30ರವರೆಗೆ ಸಭೆ ಇರಲಿದೆ ಎಂದರು.
ಕಲಬುರ್ಗಿ ಜಿಲ್ಲೆಯ ಗ್ರಾಮವೊಂದರಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರರ ಪುತ್ಥಳಿಗೆ ಕಿಡಿಗೇಡಿಗಳು ಅವಮಾನ ಮಾಡಿದ್ದಾರೆ. ಬಿಜೆಪಿ ಇದನ್ನು ತೀವ್ರವಾಗಿ ಖಂಡಿಸುತ್ತದೆ ಎಂದು ತಿಳಿಸಿದರು. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಹೋಗಿದೆ ಎಂಬುದಕ್ಕೆ ಇದು ಉದಾಹರಣೆ. ಯಾವುದೇ ರೀತಿಯ ರಕ್ಷಣೆ ಕೊಡುವ ಕೆಲಸವನ್ನು ಈ ಸರಕಾರ ಮಾಡಿಲ್ಲ ಎಂದು ಟೀಕಿಸಿದರು.
ಅಂಬೇಡ್ಕರರ ಪುತ್ಥಳಿಗೆ ಅವಮಾನ ಮಾಡಿದರೆ ಅದು ದಲಿತ ಸಮುದಾಯಕ್ಕೆ ಅವಮಾನ ಮಾಡಿದಂತೆ. ಈ ಸರಕಾರದಲ್ಲಿ ದಲಿತರಿಗೂ ಅವಮಾನ ಆಗುತ್ತಿದೆ. ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಸರಕಾರ ದುರುಪಯೋಗ ಮಾಡಿಕೊಂಡಿದೆ ಎಂದು ಅವರು ಆಕ್ಷೇಪಿಸಿದರು. ಕಿಡಿಗೇಡಿಗಳು ಯಾರೇ ಇದ್ದರೂ ಅವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು.
ಕರ್ನಾಟಕದಲ್ಲಿರುವ ಎಲ್ಲ ಮಹಾನುಭಾವರ ಪ್ರತಿಮೆಗಳಿಗೆ ಅವಮಾನ ಆಗದಂತೆ ಮುನ್ನೆಚ್ಚರಿಕೆಯನ್ನು ಈ ಸರಕಾರ ತೆಗೆದುಕೊಳ್ಳಲು ಒತ್ತಾಯಿಸಿದರು. ಪ್ರತಿಮೆಗಳಿಗೆ ಅವಮಾನ ಮಾಡುವುದು, ಶ್ರೀರಾಮಚಂದ್ರನ ಭಾವಚಿತ್ರ ಹರಿದು ಹಾಕುವುದು ಹೆಚ್ಚಾಗುತ್ತಿದೆ. ಕಾಂಗ್ರೆಸ್ಸಿನ ಮನಸ್ಥಿತಿ ಯಾವ ಕಡೆ ಹೋಗುತ್ತಿದೆ ಎಂಬುದು ಇದರಿಂದ ಗೊತ್ತಾಗುತ್ತದೆ. ಗೃಹ ಸಚಿವರು ಈ ಸಂಬಂಧ ಸ್ಪಷ್ಟೀಕರಣ ಕೊಡಬೇಕು ಎಂದು ಆಗ್ರಹಿಸಿದರು. ಗೃಹ ಸಚಿವರು ಕಾನೂನು- ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣ ಸೋತುಹೋಗಿದ್ದಾರೆ ಎಂದು ಅವರು ಟೀಕಿಸಿದರು.
BREAKING : ಕಿರ್ಗಿಸ್ತಾನ-ಚೀನಾ ಗಡಿಯಲ್ಲಿ 7.1 ತೀವ್ರತೆಯ ಪ್ರಭಲ ಭೂಕಂಪ, ಹಲವರಿಗೆ ಗಾಯ, |Earthquake
BREAKING: ಸೆನ್ಸೆಕ್ಸ್ 1,300 ಅಂಕಗಳ ಕುಸಿತ: ಹೂಡಿಕೆದಾರರ 5.9 ಲಕ್ಷ ಕೋಟಿ ರೂ. ಸಂಪತ್ತು ನಷ್ಟ!