ಬೆಂಗಳೂರು: ಬೀದರ್ ಜಿಲ್ಲೆಯ ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ ಪಾಂಡೆ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಬಿಜೆಪಿ ಪಕ್ಷದಲ್ಲಿ ಸಕ್ರಿಯರಾಗಿದ್ದ ಅವರು 1999ರಿಂದ 2003ರವರೆಗೆ ಬೀದರ ಕ್ಷೇತ್ರದ ಶಾಸಕರಾಗಿ ಕೆಲಸ ಮಾಡಿದ್ದರು. ಬೀದರ ನಗರಸಭೆ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಜತೆಗೆ ಆರ್‍ಆರ್‍ಕೆ ಸಂಸ್ಥೆಯ ಅಧ್ಯಕ್ಷರಾಗಿ ಶೈಕ್ಷಣಿಕ ಅಭಿವೃದ್ಧಿಗೆ ಕೊಡುಗೆ ನೀಡಿದ್ದರು. ಸಾಮಾಜಿಕ ಮತ್ತು ಧಾರ್ಮಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು ಎಂದು ತಿಳಿಸಿದ್ದಾರೆ.
ಅವರ ನಿಧನದಿಂದ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬಸ್ಥರು ಬಂಧುಮಿತ್ರರು ಹಾಗೂ ಅಭಿಮಾನಿಗಳಿಗೆ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ 20 ಸ್ಥಾನಗಳನ್ನು ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲಿದೆ- ಸಿಎಂ ಸಿದ್ಧರಾಮಯ್ಯ
BREAKING: ಬೆಂಗಳೂರಿನ ಮೆಜೆಸ್ಟಿಕ್ ಬಳಿ ಬೆಂಕಿಗೆ ಧಗಧಗಿಸಿ ಹೊತ್ತಿ ಉರಿದ ಖಾಸಗಿ ಬಸ್