ಬೆಂಗಳೂರು: ಬಿಜೆಪಿ ಮುಖಂಡ, ನಟ ಕೆ.ಶಿವರಾಮ್ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಕೆಎಎಸ್ ಅಧಿಕಾರಿಯಾಗಿ ಆಯ್ಕೆಯಾಗಿದ್ದ ಅವರು ಬಳಿಕ, ಕನ್ನಡದಲ್ಲಿಯೇ ಐಎಎಸ್ ಪರೀಕ್ಷೆ ಬರೆದು, ಐಎಎಸ್ ಅಧಿಕಾರಿಯೂ ಆಗಿದ್ದರು. ಕೆ.ಶಿವರಾಮ್ ಅವರು ರಾಜ್ಯದ ಹಲವು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು ಎಂದು ತಿಳಿಸಿದ್ದಾರೆ.
ಅವರು ಹಲವು ಸಿನಿಮಾಗಳಲ್ಲಿ ನಟಿಸಿದ್ದರು. ಬಿಜೆಪಿ ಮುಖಂಡರಾಗಿದ್ದ ಅವರು, ಛಲವಾದಿ ಮಹಾಸಭಾದ ಅಧ್ಯಕ್ಷರೂ ಆಗಿದ್ದರು. ಮೃತರ ಕುಟುಂಬ, ಬಂಧು ಮಿತ್ರರಿಗೆ ದೇವರು ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ; ಅಲ್ಲದೆ ಅವರಿಗೆ ಚಿರಶಾಂತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.
ಪಾಕಿಸ್ತಾನದ ಪರ ಘೋಷಣೆ ಕೂಗಿರುವವರ ವಿರುದ್ಧ ಕಾನೂನು ರೀತ್ಯಾ ಕ್ರಮ: ಗೃಹ ಸಚಿವ ಡಾ.ಜಿ.ಪರಮೇಶ್ವರ್
2008ರಲ್ಲಿ ‘ಚಿನ್ನಸ್ವಾಮಿ’ ಕ್ರೀಡಾಂಗಣದಲ್ಲಿ ‘ಬಾಂಬ್’ ಇಟ್ಟವರೇ ಇಂದು ಪಾಕ್ ಪರ ಘೋಷಣೆ ಕೂಗಿದ್ದಾರೆ :ಮುನಿರತ್ನ ಆರೋಪ