ತುಮಕೂರು: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರನ್ನು ಸ್ಥಾನದಿಂದ ಕೈ ಬಿಡಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಹೋರಾಟ ನಡೆಯುತ್ತಿದೆ. ಈ ಬಗ್ಗೆ ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ಅಬಕಾರಿ ಸಚಿವ ಕೆ. ಗೋಪಾಲಯ್ಯ ಹೇಳಿದ್ದಾರೆ.
BIGG NEWS: ಹಿಂದೂ ಮಹಿಳೆಯರನ್ನು ರಕ್ಷಿಸಲು ಮತಾಂತರ ವಿರೋಧಿ ಕಾನೂನಿಗೆ ಶಾಸಕ ನಿತೇಶ್ ರಾಣೆ ಆಗ್ರಹ
ತುಮಕೂರು ನಗರದಲ್ಲಿ ಮಾತನಾಡಿದ ಅವರು, ಮೂರು ವರ್ಷದ ನಂತರ ಬೇರೆ ಅವರಿಗೆ ಬಿಟ್ಟುಕೊಡೋದು ಸಹಜ. ಇದರ ಬಗ್ಗೆ ತೀರ್ಮಾನ ಕೈಗೊಳ್ಳಲು ಕೇಂದ್ರದ ವರಿಷ್ಠರಿದ್ದಾರೆ. ನಾವು ಜಿಲ್ಲೆಯಲ್ಲಿ ಕುತೂಕೊಂಡು ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ. ಆದರೆ ಕೇಂದ್ರದಿಂದ ತಗೆದುಕೊಂಡ ತೀರ್ಮಾನಕ್ಕೆ ನಾವೆಲ್ಲರೂ ಬದ್ಧವಾಗಿರುತ್ತೇವೆ ಎಂದು ಹೇಳಿದ್ದಾರೆ.