ಬೆಂಗಳೂರು: ಬಿಜೆಪಿಗರೇ ನಮ್ಮ ಮೆಟ್ರೋ ಬಗ್ಗೆ ಅರ್ಧ ಸತ್ಯಗಳನ್ನು ಹರಡುವುದನ್ನು ನಿಲ್ಲಿಸಿ. ಕರ್ನಾಟಕ ಸರ್ಕಾರಕ್ಕೆ ಅದರ ನಿಜವಾದ ಗೌರವ ನೀಡಿ ಎಂಬುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಬಿ.ಜೆ.ಪಿ ಯ ವಿಧಾನಸಭಾ ಮತ್ತು ಲೋಕಸಭಾ ಸದಸ್ಯರುಗಳಿಗೆ ,ಪ್ರಮುಖ ಮುಖಂಡರುಗಳಿಗೆ ಎಲ್ಲಾ ಸತ್ಯಗಳು ತಿಳಿದಿದ್ದರೂ ಸಹ ಅದನ್ನು ಲೆಕ್ಕಿಸದೇ, ಸ್ವಲ್ಪವೂ ನಾಚಿಕೆಯಿಲ್ಲದೇ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ನಮ್ಮಮೆಟ್ರೋ ಶ್ರೇಯಸ್ಸು ಕೊಡುತ್ತಿದ್ದಾರೆ ಎಂಬುದಾಗಿ ಕಿಡಿಕಾರಿದ್ದಾರೆ.
2006 ರಲ್ಲಿ ಶ್ರೀ ಮನಮೋಹನ್ ಸಿಂಗ್ ರವರು ಮಾನ್ಯ ಪ್ರಧಾನ ಮಂತ್ರಿಗಳಾಗಿದ್ದಾಗ, ರಾಜ್ಯದಲ್ಲಿ ಧರ್ಮಸಿಂಗ್ ಮುಖ್ಯಮಂತ್ರಿಗಳಾಗಿದ್ದಾಗ , ನಾನು ಬೆಂಗಳೂರು ಉಸ್ತುವಾರಿ ಸಚಿವನಾಗಿದ್ದಾಗ ಎಂ.ಜಿ ರಸ್ತೆಯಲ್ಲಿ ನಮ್ಮ ಮೆಟ್ರೋಗೆ ಶಂಕುಸ್ಥಾಪನೆ ನೆರವೇರಿಸಲಾಗಿತ್ತು ಎಂಬುದಾಗಿ ತಿಳಿಸಿದ್ದಾರೆ.
ನಮ್ಮ ಮೆಟ್ರೋ ಜನರದ್ದು – ಯಾವ ಪಕ್ಷದ ಸ್ವತ್ತು ಅಲ್ಲ! ಎಂಬುದು ನಮ್ಮ ಭಾವನೆಯಾಗಿತ್ತು. ಆದರೆ ಬಿ.ಜೆ.ಪಿ ಅವರಿಗೆ ಜನಾಸಕ್ತಿಗಿಂತ, ಪ್ರಚಾರಸಕ್ತಿ ಹೆಚ್ಚು ಎಂದು ಗುಡುಗಿದ್ದಾರೆ.
ಕರ್ನಾಟಕ ಸರ್ಕಾರ ಸರಳ ಪಾಲುದಾರ ಅಲ್ಲ — ಅನೇಕ ಸಂದರ್ಭಗಳಲ್ಲಿ ಅದು ಹೆಚ್ಚಿನ ಹಣವನ್ನು ಖರ್ಚು ಮಾಡುತ್ತದೆ. ವಿಶೇಷವಾಗಿ ಜಮೀನು ಖರೀದಿ, ವೆಚ್ಚ ಮಿತಿಗೆ ಮೇಲ್ಪಟ್ಟ ಭಾಗಗಳು ಮತ್ತು ಪ್ರಮುಖ ಯೋಜನಾ ಅಂಶಗಳಿಗಾಗಿ ಕರ್ನಾಟಕ ಸರ್ಕಾರವು ಖರ್ಚು ಮಾಡುತ್ತಿದೆ.ಅರ್ಧ ಸತ್ಯಗಳನ್ನು ಹರಡುವುದನ್ನು ನಿಲ್ಲಿಸಿ, ಕರ್ನಾಟಕ ಸರ್ಕಾರಕ್ಕೆ ಅದರ ನಿಜವಾದ ಗೌರವ ನೀಡಿ ಎಂಬುದಾಗಿ ಆಗ್ರಹಿಸಿದ್ದಾರೆ.
ನಿಜವಾದ ಮಾಹಿತಿ ಇಲ್ಲಿದೆ:
ಫೇಸ್ 1: ಕರ್ನಾಟಕ ಸರ್ಕಾರ – 30% (ಜಮೀನೂ ಸೇರಿ), ಕೇಂದ್ರ – 25%, ಉಳಿದ 45% ಸಾಲದ ರೂಪದಲ್ಲಿ.
ಫೇಸ್ 2: ಕರ್ನಾಟಕ – 30% + ಜಮೀನು ಮತ್ತು ಮಿತಿಮೀರಿದ ವೆಚ್ಚದ ಬಹುತೇಕ ಭಾಗ, ಕೇಂದ್ರ – 20%, ಉಳಿದ 50% ಸಾಲ.
ಫೇಸ್ 3: ಕರ್ನಾಟಕ – 20% + ಸಂಪೂರ್ಣ ಜಮೀನು ಮತ್ತು ಪುನರ್ವಸತಿ ವೆಚ್ಚ, ಕೇಂದ್ರ – 20%, ಉಳಿದ 60% ಸಾಲ.
ಪ್ರತಿ ಹಂತದಲ್ಲೂ ಕರ್ನಾಟಕ ಸರ್ಕಾರ ಜಮೀನಿಗಾಗಿ ದೊಡ್ಡ ಮೊತ್ತ ಹಾಕುತ್ತದೆ, ಮತ್ತು ಯೋಜನೆಗಳನ್ನು ಮುನ್ನಡೆಸಲು ನಿರಂತರವಾಗಿ ಹಣ ನೀಡುತ್ತದೆ — ಅನೇಕ ಬಾರಿ ಕೇಂದ್ರದಷ್ಟು ಅಥವಾ ಅದಕ್ಕಿಂತ ಹೆಚ್ಚು.
ನಿಜ ಹೇಳುವುದಾದರೆ, ಎಷ್ಟು ಕಾಲ ಬಿ.ಜೆಪಿ ನಾಯಕರು ತಮ್ಮದೇ ರಾಜ್ಯವನ್ನು ಇಂಥ ನಿರ್ಲಕ್ಷ್ಯದಿಂದ ಅವಮಾನಿಸುತ್ತಾ, ನಮ್ಮ ಮೆಟ್ರೋ ಕೇಂದ್ರದ ಉಡುಗೊರೆ ಎಂದು ನಟಿಸುತ್ತಾರೆ? ನಂಬಿಸುತ್ತಾರೆ? ಎಂಬುದಾಗಿ ಸಾರಿಗೆ ಹಾಗೂ ಮುಜರಾಯಿ ಸಚಿರ ರಾಮಲಿಂಗಾರೆಡ್ಡಿ ಪ್ರಶ್ನಿಸಿದ್ದಾರೆ.
@BJP4Karnataka ದ ವಿಧಾನಸಭಾ ಮತ್ತು ಲೋಕಸಭಾ ಸದಸ್ಯರುಗಳಿಗೆ ,ಪ್ರಮುಖ ಮುಖಂಡರುಗಳಿಗೆ ಎಲ್ಲಾ ಸತ್ಯಗಳು ತಿಳಿದಿದ್ದರೂ ಸಹ ಅದನ್ನು ಲೆಕ್ಕಿಸದೇ, ಸ್ವಲ್ಪವೂ ನಾಚಿಕೆಯಿಲ್ಲದೇ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ #ನಮ್ಮಮೆಟ್ರೋ ಶ್ರೇಯಸ್ಸು ಕೊಡುತ್ತಿದ್ದಾರೆ.
2006 ರಲ್ಲಿ ಶ್ರೀ ಮನಮೋಹನ್ ಸಿಂಗ್ ರವರು ಮಾನ್ಯ ಪ್ರಧಾನ… pic.twitter.com/w6CNT3ZbT4
— Ramalinga Reddy (@RLR_BTM) August 6, 2025
SHOCKING : ಅಂತರ್ಜಾತಿ ವಿವಾಹವಾಗಿದ್ದಕ್ಕೆ ಮಗಳ ಮುಂದೆಯೇ ಅಳಿಯನನ್ನ ಗುಂಡಿಕ್ಕಿ ಕೊಂದ ಮಾವ!
BREAKING: ಧರ್ಮಸ್ಥಳ ಕೇಸ್: 338 ಜನರ ಮೇಲಿನ ತಡೆಯಾಜ್ಞೆ ರದ್ದುಗೊಳಿಸಿ ಕೋರ್ಟ್ ಮಹತ್ವದ ತೀರ್ಪು
SHOCKING : ಅಂತರ್ಜಾತಿ ವಿವಾಹವಾಗಿದ್ದಕ್ಕೆ ಮಗಳ ಮುಂದೆಯೇ ಅಳಿಯನನ್ನ ಗುಂಡಿಕ್ಕಿ ಕೊಂದ ಮಾವ!