ಬೆಂಗಳೂರು: ಮುಂಬರುವಂತ ಲೋಕಸಭಾ ಚುನಾವಣೆಯಲ್ಲಿ ಜಯದೇವ ಆಸ್ಪತ್ರೆಯ ಮಾಜಿ ನಿರ್ದೇಶಕ ಡಾ.ಮಂಜುನಾಥ್ ಸ್ಪರ್ಧೆ ಫಿಕ್ಸ್ ಆಗಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿಯೋದು ಪಕ್ಕಾ ಎಂಬುದಾಗಿ ತಿಳಿದು ಬಂದಿದೆ.
ಈ ಬಗ್ಗೆ ಬಿಜೆಪಿಯ ಉನ್ನತ ಮೂಲಗಳಿಂದ ಮಾಹಿತಿ ತಿಳಿದು ಬಂದಿದ್ದು, ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್ ಅವರನ್ನು ಮಣಿಸೋದಕ್ಕೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ನಾಯಕರು ತಂತ್ರಗಾರಿಕೆ ಸಲುವಾಗಿ, ಡಾ. ಮಂಜುನಾಥ್ ಅವರನ್ನು ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಣಕ್ಕೆ ಇಳಿಸಲಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ.
ಈಗಾಗಲೇ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಈ ಬಗ್ಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ಜಯದೇವ ಆಸ್ಪತ್ರೆಯ ಮಾಜಿ ನಿರ್ದೇಶಕ ಡಾ.ಮಂಜುನಾಥ್ ಅವರನ್ನು ಬಿಜೆಪಿ ಟೀಂ ಈ ಸಂಬಂಧ ಅಂತಿಮ ಮಾತುಕತೆಗಾಗಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಲಿದೆ ಎಂಬುದಾಗಿ ತಿಳಿದು ಬಂದಿದೆ.
ಒಟ್ಟಾರೆಯಾಗಿ ಜಯದೇವ ಆಸ್ಪತ್ರೆಯ ಮಾಜಿ ನಿರ್ದೇಶಕ ಡಾ.ಮಂಜುನಾಥ್ ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧೆ ಫಿಕ್ಸ್ ಆದಂತೆ ಆಗಿದೆ. ಆದರೇ ಈ ಬಗ್ಗೆ ಅಧಿಕೃತ ಮಾಹಿತಿಯೊಂದು ಹೊರಬೀಳಬೇಕಿದೆ.
ಬೆಂಗಳೂರು : ಕಾರು ವಿಚಾರವಾಗಿ ಸಹೋದರರ ನಡುವೆ ಗಲಾಟೆ : ಪೆಟ್ರೋಲ್ ಹಾಕಿ ತಮ್ಮನ ಕೊಲೆಗೈದ ಅಣ್ಣ