ದ್ವೇಷ ಭಾಷಣದ ಕಾನೂನು ವಿರುದ್ದ ಬಿಜೆಪಿಯಿಂದ ಕಾನೂನು ಹೋರಾಟ: ಸಂಸದ ಬಸವರಾಜ ಬೊಮ್ಮಾಯಿ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರ ಇವತ್ತು ದ್ವೇಷ ಭಾಷಣದ ವಿರುದ್ದ ಕಾನೂನು ತಂದಿರುವುದು ಸಂವಿಧಾನ ವಿರುದ್ದವಿದೆ. ನಾವು ಇದನ್ನು ಖಂಡಿಸುತ್ತೇವೆ ಅಲ್ಲದೇ ಇದರ ವಿರುದ್ದ ಬಿಜೆಪಿ ಕಾನೂನಾತ್ಮಕ ಹೋರಾಟ ಮಾಡಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಎಕ್ಸ್ ಮಾಡಿರುವ ಅವರು, ನಮ್ಮ ವಾಕ್ ಸ್ವಾತಂತ್ರ್ಯ, ವ್ಯಕ್ತಿ ಸ್ವಾತಂತ್ರ್ಯ ಮೊಟಕುಗೊಳಿಸುವ ಕಾನೂನು. ಈಗಾಗಲೇ ದ್ವೇಷದ ಭಾಷಣ ತಡೆಯಲು ಸಾಕಷ್ಟು ಕಾನೂನುಗಳಿವೆ. ಆ ಕಾನೂನು ಬಳಸಬಹುದು, ಆದರೆ, ಹತ್ತು ವರ್ಷದ ಶಿಕ್ಷೆ … Continue reading ದ್ವೇಷ ಭಾಷಣದ ಕಾನೂನು ವಿರುದ್ದ ಬಿಜೆಪಿಯಿಂದ ಕಾನೂನು ಹೋರಾಟ: ಸಂಸದ ಬಸವರಾಜ ಬೊಮ್ಮಾಯಿ