ಬೆಂಗಳೂರು : ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ಯಲಹಂಕದ ಖಾಸಗಿ ರೆಸಾರ್ಟ್ ನಲ್ಲಿ ಬಿಜೆಪಿ ಬೆಂಗಳೂರಿನಲ್ಲಿ ಕ್ಷೇತ್ರವಾರು ಅಭಿಪ್ರಾಯ ಸಂಗ್ರಹಿಸುತ್ತಿದ್ದೂ, ಯಲಹಂಕದ ಖಾಸಗಿ ರೆಸರ್ಟಲ್ಲಿ ಸಭೆ ನಡೆಯಲಿದೆ.ಇಂದು 13 ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಾಗುತ್ತದೆ.
ಬೀದರ್, ಕಲಬುರ್ಗಿ,ರಾಯಚೂರು, ಕೊಪ್ಪಳ, ಬಳ್ಳಾರಿ, ಮೈಸೂರು, ಚಾಮರಾಜನಗರ, ಮಂಡ್ಯ,ಹಾಸನ, ತುಮಕೂರು, ಚಿಕ್ಕಬಳ್ಳಾಪುರ,ಕೋಲಾರ, ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳ ಅಭಿಪ್ರಾಯ ಸಂಗ್ರಹಿಸಲಾಗುತ್ತದೆ ಎಂದು ತಿಳಿದುಬಂದಿದೆ.
ಜೆಡಿಎಸ್ ಗೆ ಬಿಟ್ಟುಕೊಡುವ ಸಂಭಾವ್ಯ ಕ್ಷೇತ್ರಗಳ ಬಗ್ಗೆಯೂ ಚರ್ಚಿಸಲಾಗುತ್ತಿದ್ದು ಕ್ಷೇತ್ರದಲ್ಲಿ ಇರುವ ವಾತಾವರಣ ಹಾಗೂ ಸಂಭಾವ್ಯ ಬಿಜೆಪಿ ಬಿಜೆಪಿ ಅಭ್ಯರ್ಥಿಗಳು ಹಾಗೂ ಜೆಡಿಎಸ್ ವತಿಗಿನ ಸಮನ್ವಯ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುತ್ತದೆ ಎಂದು ಮೂಲಗಳಿಂದ ತಿಳಿದು ಬಂದಿದೆ.