ಬೆಂಗಳೂರು: ರಾಜ್ಯ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯನ್ನು ಹೆಚ್ಚಳ ಮಾಡಲಾಗಿದೆ. ಇದರಿಂದ ಪೆಟ್ರೋಲ್, ಡೀಸೆಲ್ ದರದಲ್ಲಿ ಭಾರೀ ಏರಿಕೆಯಾಗಲಿದೆ. ಜನಸಾಮಾನ್ಯರ ಜೇಬಿಗೆ ಕತ್ತರಿ ಬಿದ್ದಂತೆ ಆಗಲಿದೆ. ಇದನ್ನು ಖಂಡಿಸಿ ರಾಜ್ಯಾಧ್ಯಂತ ಜೂನ್.17ರಂದು ಪ್ರತಿಭಟನೆ ನಡೆಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದ್ದಾರೆ.
ರಾಜ್ಯ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯನ್ನು ಹೆಚ್ಚಳ ಮಾಡಿ ಗೆಜೆಟ್ ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ. ರೀಟೆಲ್ ಸೇಲ್ಸ್ ಟ್ಯಾಕ್ಸ್ ದರವನ್ನು ಹೆಚ್ಚಳ ಮಾಡಿ ಆದೇಶಿಸಿದೆ.
ಈ ಹಿಂದೆ ಟ್ಯಾಕ್ಸ್ ದರ ಪೆಟ್ರೋಲ್- 25.92% ಇದ್ದದ್ದು, ಈಗ 29.84% ಗೆ ಏರಿಕೆ (3.9% ಹೆಚ್ಚಳ)ಯಾಗಿದೆ. ಅಂತೆಯೇ ಡಿಸೇಲ್ ಈ ಹಿಂದೆ- 14.34% ಇದ್ದದ್ದು, ಈಗ 18.44%ಗೆ ಏರಿಕೆ ಅಂದರೆ 4.1% ರಷ್ಟು ಏರಿಕೆ ಕಂಡಂತೆ ಆಗಿದೆ.
ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸಿಡಿದೆದ್ದಿದೆ. ಜೂನ್.17ರಂದು ರಾಜ್ಯಾಧ್ಯಂತ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಖಂಡಿಸಿ ಪ್ರತಿಭಟನೆ ನಡೆಸೋದಕ್ಕೆ ನಿರ್ಧಾರ ಕೈಗೊಂಡಿರೋದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದ್ದಾರೆ.
ಉದ್ಯೋಗ ವಾರ್ತೆ: ‘ಪ್ರವಾಸಿ ಮಾರ್ಗದರ್ಶಿ ಹುದ್ದೆ’ಗಳಿಗಾಗಿ ಅರ್ಜಿ ಆಹ್ವಾನ