ಬೆಂಗಳೂರು : ಲೋಕಸಭಾ ಚುನಾವಣೆಗೆ ಕೆಲವೇ ಕೆಲವು ತಿಂಗಳುಗಳು ಬಾಕಿ ಇದ್ದು, ಇದೇ ತಿಂಗಳ ಅಂದರೆ ಫೆಬ್ರುವರಿ ಕೊನೆಯ ವಾರದಲ್ಲಿ ಬಿಜೆಪಿ ಮೊದಲ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಮೊದಲ ಪಟ್ಟಿಯಲ್ಲಿ 14ರಿಂದ 16 ಕ್ಷೇತ್ರಗಳ ಕ್ಷೇತ್ರಗಳ ಪಟ್ಟಿ ಬಿಡುಗಡೆ ಮಾಡಲಾಗುತ್ತಿದ್ದು ಬಹುತೇಕ ಹಾಲಿ ಸಂಸದರಿಗೆ ಟಿಕೆಟ್ ನೀಡುವ ಸಾಧ್ಯತೆ ಇದೆ ಬಿಜೆಪಿ ಲೋಕಸಭೆ ತಯಾರಿ ಮಧ್ಯೆ ಮೊದಲ ಪಟ್ಟಿ ಪ್ರಕಟಿಸುವ ಬಗ್ಗೆ ಗೃಹ ಸಚಿವ ಅಮಿತ್ ಶಾ ಸುಳಿವು ನೀಡಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ ವರ್ಷ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಕೊನೆ ಗಳಿಗೆಯಲ್ಲಿ ಕೆಲ ಕ್ಷೇತ್ರಗಳಿಗೆ ಟಿಕೆಟ್ ಪ್ರಕಟಿಸಿದ್ದರಿಂದ ಬಿಜೆಪಿಗೆ ಹಿನ್ನಡೆಯಾಗಿತ್ತು. ಸೋಲಿನ ಬಳಿಕ ನಡೆದ ಆತ್ಮಾವಲೋಕನ ಸಭೆಯಲ್ಲೂ ಈ ವಿಷಯ ಚರ್ಚೆಯಾಗಿತ್ತು. ಈ ಕಾರಣಕ್ಕೆ ಈ ಬಾರಿ ಬಹಳ ಬೇಗ ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿ ಬೇಗ ಬಿಡುಗಡೆಯಾಗಲಿದೆ.
ಗೆಲುವು ಸ್ಪಷ್ಟ ಇರುವ ಕ್ಷೇತ್ರಗಳ ಅಮಿತ್ ಶಾ ವರದಿ ಪಡೆದಿದ್ದು ಮೊದಲ ಪಟ್ಟಿಯಲ್ಲಿ ಬಹುತೇಕ ಗೆಲ್ಲುವ ಹಾಲಿ ಸಂಸದರಿಗೆ ಟಿಕೆಟ್ ಸಿಗಲಿದೆ. ಹೊಸ ಮುಖ, ಅಚ್ಚರಿ ಅಭ್ಯರ್ಥಿ ಹೆಸರು ಎರಡು ಮತ್ತು ಮೂರನೇ ಪಟ್ಟಿಯಲ್ಲಿ ಪ್ರಕಟವಾಗಲಿದೆ.