ಬೆಂಗಳೂರು : ಮುಸ್ಲಿಂ ಬಾಂಧವರಿಗೆ ಭಾರತೀಯ ಜನತಾ ಪಾರ್ಟಿ ಚಿತ್ರಹಿಂಸೆ ನೀಡುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯು ಮುಸ್ಲಿಂ ಬಾಂಧವರಿಗೆ ಚಿತ್ರಹಿಂಸೆ ನೀಡುತ್ತಿದೆ. ಮಾನಸಿಕವಾಗಿ ಹಿಂಸೆ ಕೊಟ್ಟು ದೇಶವನ್ನು ಬಿಟ್ಟು ಓಡಿಸೋ ಯತ್ನ ಮಾಡುದ್ದಾರೆ. ನಮ್ಮದು ಸರ್ವ ಜನಾಂಗದ ಶಾಂತಿಯ ತೋಟ, ಬಿಜೆಪಿ ಯಾರನ್ನೂ ರಕ್ಷಣೆ ಮಾಡುತ್ತಿಲ್ಲ ಎಂದರು.
ನೇಹಾ ಹತ್ಯೆ ಪ್ರಕರಣ ಖಂಡಿಸಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಕ್ರಿಮಿನಲ್ ಚಟುವಟಿಕೆ ಮಾಡಿದವರಿಗೆ ಶಿಕ್ಷೆ ಆಗುತ್ತದೆ. ರಾಜ್ಯವನ್ನು ಶಾಂತಿಯಿಂದ ನಡೆಸಿಕೊಂಡು ಹೋಗುತ್ತಿದ್ದೇವೆ ಎಂದು ಹೇಳಿದ್ದಾರೆ.